Koppala News: ಹಣ ಮರಳಿ ಕೊಡುತ್ತೇವೆಂದು ಕರೆಸಿಕೊಂಡು ಹೋಂ ಗಾರ್ಡ್ ಮೇಲೆ ನಾಲ್ವರಿಂದ ಅತ್ಯಾಚಾರ
Koppala News: ಸಂತ್ರಸ್ತೆ ಪೊಲೀಸರಿಗೆ ನೀಡಿದ ಮಾಹಿತಿ ಪ್ರಕಾರ, ಆರೋಪಿ ಆಕೆಯನ್ನು ಬೈಕ್‌ನಲ್ಲಿ ಕರೆದೊಯ್ದು ಮದ್ಲೂರ ಗ್ರಾಮದ ಬಳಿ ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಇನ್ನು ಮೂವರು ಸೇರಿಕೊಂಡಿದ್ದಾರೆ. ಅವರು ಮಹಿಳೆಗೆ ಜ್ಯೂಸ್ ಎಂದು ಹೇಳಿ ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ನಂತರ ನಾಲ್ವರು ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಕುಷ್ಟಗಿ ಮತ್ತು ಮದ್ಲೂರ ಸೀಮೆಯಲ್ಲಿ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಯಲಬುರ್ಗಾದಲ್ಲಿ ಮಹಿಳೆ ಮೇಲೆ ನಾಲ್ವರಿಂದ ಅತ್ಯಾಚಾರ -
ಕೊಪ್ಪಳ: ಹಣ ಮರಳಿ ಕೊಡುವ ನೆಪದಲ್ಲಿ ಕರೆಸಿಕೊಂಡು ನಾಲ್ವರು ಕಾಮುಕರು ಮಹಿಳೆ ಮೇಲೆ ಅತ್ಯಾಚಾರ (Physical Abuse) ಮಾಡಿರುವ ಆರೋಪ ಕೇಳಿಬಂದಿದೆ. ಕೊಪ್ಪಳ (Koppala news) ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ಲೂರ ಗ್ರಾಮದ ಬಳಿ ಈ ಭಯಾನಕ ಘಟನೆ ನಡೆದಿದೆ. 39 ವರ್ಷದ ಮಹಿಳೆಯೊಬ್ಬರ ಮೇಲೆ ನಾಲ್ವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತ್ವರಿತ ಕ್ರಮ ಕೈಗೊಂಡು ನಾಲ್ವರನ್ನು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ಹೊಸಪೇಟೆ ಮೂಲದವರಾಗಿದ್ದು, ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಸಂತ್ರಸ್ತ ಮಹಿಳೆಗೆ ಪರಿಚಯವಿರುವ ಗಜೇಂದ್ರಗಡ ಮೂಲದ ಲಕ್ಷ್ಮಣ ಎಂಬವನು 5000 ರೂಪಾಯಿ ಹಣ ಕೊಡಬೇಕಾಗಿತ್ತು. ಹಣ ಕೊಡುತ್ತೇನೆ ಎಂದು ಲಕ್ಷ್ಮಣ ಆಕೆಯನ್ನು ಕುಷ್ಟಗಿ ಪಟ್ಟಣಕ್ಕೆ ಕರೆಸಿಕೊಂಡಿದ್ದ. ಆದರೆ ಅಲ್ಲಿ ಹಣ ಕೊಡುವ ಬದಲು ಮೋಸ ಮಾಡಿದ್ದಾನೆ. ಸಂತ್ರಸ್ತೆ ಪೊಲೀಸರಿಗೆ ನೀಡಿದ ಮಾಹಿತಿ ಪ್ರಕಾರ, ಲಕ್ಷ್ಮಣ ಆಕೆಯನ್ನು ಬೈಕ್‌ನಲ್ಲಿ ಕರೆದೊಯ್ದು ಮದ್ಲೂರ ಗ್ರಾಮದ ಬಳಿ ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಇನ್ನು ಮೂವರು ಸೇರಿಕೊಂಡಿದ್ದಾರೆ. ಅವರು ಮಹಿಳೆಗೆ ಜ್ಯೂಸ್ ಎಂದು ಹೇಳಿ ಬಲವಂತವಾಗಿ ಮದ್ಯ ಕುಡಿಸಿದ್ದಾರೆ. ನಂತರ ನಾಲ್ವರು ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಕುಷ್ಟಗಿ ಮತ್ತು ಮದ್ಲೂರ ಸೀಮೆಯಲ್ಲಿ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅತ್ಯಾಚಾರದ ನಂತರ ಅಸ್ವಸ್ಥರಾದ ಮಹಿಳೆಯನ್ನು ತಕ್ಷಣ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಕೊಪ್ಪಳ ಡಿವೈಎಸ್‌ಪಿ ಮುತ್ತಣ್ಣ ಸವರಗೋಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಪತಿ ಆಸ್ಪತ್ರೆಗೆ ಬಂದು ಭೇಟಿ ಮಾಡಿದ್ದಾರೆ. ಆದರೆ ಅವರು "ನನಗೇನೂ ಗೊತ್ತಿಲ್ಲ. ಅಪಘಾತ ಆಗಿದೆ ಎಂದು ಕರೆಸಿದ್ದಾರೆ" ಎಂದು ಹೇಳಿದ್ದಾರೆ.
ನಾಲ್ವರು ಆರೋಪಿಗಳ ಬಂಧನ
ಸಂತ್ರಸ್ತೆ ಸ್ವತಃ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆೆ. ಆ ದೂರಿನ ಆಧಾರದ ಮೇಲೆ ಯಲಬುರ್ಗಾ ಪೊಲೀಸರು ಲಕ್ಷ್ಮಣ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಗಜೇಂದ್ರಗಡ ಮತ್ತು ಸುತ್ತಮುತ್ತಲಿನ ಪ್ರದೇಶದವರಾಗಿದ್ದು, ದೂರಿನಲ್ಲಿ ಲಕ್ಷ್ಮಣ ಮತ್ತು ಇನ್ನು ಮೂವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 115(2), 70, 351(2) ಮತ್ತು 3(5) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ತಡರಾತ್ರಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: Physical abuse: ಪಾಲಕರೊಟ್ಟಿಗೆ ಮಲಗಿದ್ದ 4 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ ದುರುಳ