ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಮೃತರು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ಆಸೀಫ್‌ ಎಂದು ಗುರುತಿಸಲಾಗಿದೆ. ಬೈಕ್ ಸವಾರರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಹೋಗುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾನೆ.

ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಕೊಪ್ಪಳ ಅಪಘಾತದಲ್ಲಿ ಮೃತ ಯುವಕರು -

ಹರೀಶ್‌ ಕೇರ
ಹರೀಶ್‌ ಕೇರ Dec 18, 2025 7:52 AM

ಕೊಪ್ಪಳ, ಡಿ.18: ಬೈಕ್‌ಗೆ ಬೊಲೆರೋ ವಾಹನ ಡಿಕ್ಕಿಯಾಗಿ (Road Accident) ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಕೊಪ್ಪಳ (Koppala) ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ. ಮೃತರು ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರದ ಆಸೀಫ್‌ ಎಂದು ಗುರುತಿಸಲಾಗಿದೆ.

ಬೈಕ್ ಸವಾರರು ಶ್ರೀರಾಮನಗರದಿಂದ ಹೊಸಹಳ್ಳಿ ಗ್ರಾಮಕ್ಕೆ ಹೋಗುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಬುಲೆರೋ ವಾಹನದ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಯುವಕನ ಅಡ್ಡಾದಿಡ್ಡಿ ಚಾಲನೆ, ಕಾರು ಡಿಕ್ಕಿಯಾಗಿ ವೃದ್ಧ ಮೃತ್ಯು

ಬೆಂಗಳೂರು: ಯುವಕನ ಅಡ್ಡಾದಿಡ್ಡಿ ಕಾರು ಚಾಲನೆಯಿಂದ ವೃದ್ಧನೊಬ್ಬ ಬಲಿಯಾಗಿರುವ ಘಟನೆ ಬೆಂಗಳೂರು ನಗರದ (Bengaluru City) ಆರ್‌ಎಂವಿ ಎಕ್ಸ್‌ಟೆನ್ಷನ್‌ ಬಳಿ ನಡೆದಿದೆ. ಶಿಶಿರ್ ಸುಧೀರ್ ಪಾಟೀಲ್ (19) ಎಂಬ ಯುವಕನಿಂದ ಅಪಘಾತ ನಡೆದಿದ್ದು, ಚಂದ್ರಶೇಖರ ರೆಡ್ಡಿ (64) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೃದ್ಧರಿಗೆ ಗುದ್ದಿದ ಬಳಿಕ ಸಿಯಾಜ್‌ ಕಾರು ಅಲ್ಲೇ ನಿಂತಿದ್ದ ಎರ್ಟಿಗಾ ಕಾರಿಗೂ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ವೃದ್ಧ ಹಾರಿಬಿದ್ದು ಸಾವನ್ನಪ್ಪಿದ್ದಾರೆ.

ಮಕ್ಕಳೊಂದಿಗೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕುದುರೆ ಡಿಕ್ಕಿ; ಅಪಘಾತದ ದೃಶ್ಯ ವೈರಲ್‌

ಮೃತ ಚಂದ್ರಶೇಖರ್‌ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು ಅನ್ನೋ ಮಾಹಿತಿಯಿದ್ದರೆ, ಬಿಇ ಪ್ರಥಮ ಸೆಮಿಸ್ಟರ್‌ ವ್ಯಾಸಂಗ ಮಾಡುತ್ತಿದ್ದಾನೆ ಅನ್ನೋ ಮಾಹಿತಿ ಇದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ-ಯುವತಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.