Road Accident: ಗಂಗಾವತಿಯಲ್ಲಿ ಭೀಕರ ಅಪಘಾತ; ಬೈಕ್‌ಗೆ ಲಾರಿ ಡಿಕ್ಕಿಯಾಗಿ ದಂಪತಿ ದುರ್ಮರಣ
Road Accident: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಭೀಕರ ಅಪಘಾತ ನಡೆದಿದೆ.
Prabhakara R
December 11, 2024
ಕೊಪ್ಪಳ: ಬೈಕ್‌ಗೆ ಲಾರಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಗಂಗಾವತಿ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಬುಧವಾರ ನಡೆದಿದೆ. ಘಟನೆಯಲ್ಲಿ ಒಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಮರಕುಂಬಿ ಗ್ರಾಮದ ಮಂಜುನಾಥ ಪರಸಪ್ಪ ನಾಯಕ್(38) ಹಾಗೂ ಆತನ ಪತ್ನಿ ನೇತ್ರಾವತಿ ಮಂಜುನಾಥ ನಾಯಕ್ (33) ಮೃತರು. ಮಂಜುನಾಥ ನಾಯಕ್ ಗಾಯಾಳು ಬಾಲಕ. ಕೂಲಿ ಕೆಲಸದ ನಿಮಿತ್ತ ಗಂಗಾವತಿಗೆ ಹೊರಟಿದ್ದ ದಂಪತಿಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ.
ಘಟನೆ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Loan App Torture: ಲೋನ್ ಆ್ಯಪ್‌ನಲ್ಲಿ ಕೇವಲ 2 ಸಾವಿರ ರೂ. ಸಾಲ ಮಾಡಿ ಆತ್ಮಹತ್ಯೆಗೆ ಶರಣಾದ ನವ ವಿವಾಹಿತ
ಕಾರು-ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ
ಶಿವಮೊಗ್ಗ: ಕಾರು-ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Shivamogga News) ಒಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ರಿಪ್ಪನ್ ಪೇಟೆಯ ಸೂಡೂರು ಸೇತುವೆ ಬಳಿ ಬುಧವಾರ ನಡೆದಿದೆ.
ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದ್ದು, ಅಪಘಾತದ ರಭಸಕ್ಕೆ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Viral News: ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ ಉಬರ್ ಚಾಲಕನಿಗೆ ಸಿಕ್ಕ ಈ ಕಾಮೆಂಟ್; ಏನಿದು?