#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Koppal Accident: ಕೊಪ್ಪಳದಲ್ಲಿ ಭೀಕರ ಅಪಘಾತ; ಗೂಡ್ಸ್‌ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನ

Koppal Accident: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ಭೀಕರ ಅಪಘಾತ ನಡೆದಿದೆ. ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದಾರೆ.

ಗೂಡ್ಸ್‌ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನ

Profile Prabhakara R Feb 13, 2025 2:00 PM

ಕೊಪ್ಪಳ: ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸ್ಥಳದಲ್ಲೇ ಸಜೀವ ದಹನವಾಗಿರುವುದು ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ನಡೆದಿದೆ. ವಾಹನಗಳ ಮುಖಾಮುಖಿ ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನದಲ್ಲಿ ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವವಾಗಿ ದಹನಗೊಂಡಿದ್ದಾರೆ. ಮೃತರನ್ನು ತೊಡಕಿ ಗ್ರಾಮದ ಸಿದ್ದಪ್ಪ (23) ಮತ್ತು ಅಂಜಪ್ಪ (30) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ತೊಡಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಘಟನೆ ಕುರಿತು ಕುಷ್ಟಗಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Microfinance ordinance: ಮೈಕ್ರೋ ಫೈನಾನ್ಸ್‌ಗಳು ಸಾಲಕ್ಕೆ ಭದ್ರತೆ ಕೇಳುವಂತಿಲ್ಲ, ನಿಯಮ ಮೀರಿದ್ರೆ 10 ವರ್ಷ ಜೈಲು, 5 ಲಕ್ಷ ದಂಡ!

ಮೊಬೈಲ್‌ ನೋಡಬೇಡ ಎಂದಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Self Harm (6)

ಬೆಂಗಳೂರು: ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Bangalore News) ನಗರದ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಘಟನೆ ನಡೆದಿದ್ದು, ಅವಂತಿಕಾ ಚೌರಾಸಿಯಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ, ತಾಯಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹತ್ತಿರ ಬರುತ್ತಿದೆ. ಹೀಗಾಗಿ ಮೊಬೈಲ್ ಬಿಟ್ಟು ಪರೀಕ್ಷೆಗೆ ಓದು ಎಂದು ಬೈದಿದ್ದಾರೆ. ಇದರಿಂದ ದುಡುಕಿದ ಅವಂತಿಕಾ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಧ್ಯಪ್ರದೇಶ ಮೂಲದ ಲಕ್ಷ್ಮೀಕಾಂತ್‌ ಚೌರಾಸಿಯಾ ದಂಪತಿಯ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲಕ್ಷ್ಮೀಕಾಂತ್‌ ಚೌರಾಸಿಯಾ ದಂಪತಿ ಇಬ್ಬರು ಪುತ್ರಿಯರ ಜತೆ ಕನ್ನಮಂಗಲದ ಅಪಾರ್ಟ್‌ಮೆಂಟ್‌ನ 20ನೇ ಮಹಡಿಯ ಫ್ಲ್ಯಾಟ್‌ನಲ್ಲಿವಾಸಿಸುತ್ತಿದ್ದರು. ಲಕ್ಷ್ಮೀಕಾಂತ್‌ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದರು. ಪತ್ನಿ ನಮ್ರತಾ ಗೃಹಿಣಿಯಾಗಿದ್ದರು.

ವೈಟ್‌ಫೀಲ್ಡ್‌ನ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಹಿರಿಯ ಪುತ್ರಿ ಅವಂತಿಕಾ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಮಾರ್ಚ್ 15 ರಂದು ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯಲಿದ್ದು, ಓದಿಕೊಳ್ಳಲು ಮಕ್ಕಳಿಗೆ ರಜೆ ನೀಡಲಾಗಿತ್ತು. ಬುಧವಾರ ಬೆಳಗ್ಗೆ 11.30ರ ಸುಮಾರಿಗೆ ತನ್ನ ಕೊಠಡಿಯಲ್ಲಿದ್ದ ಅವಂತಿಕಾ ಮೊಬೈಲ್‌ ನೋಡುತ್ತಿದ್ದಳು. ಇದನ್ನು ಗಮನಿಸಿದ ತಾಯಿ ನಮ್ರತಾ, 'ಪರೀಕ್ಷೆಗೆ ಮೂರೇ ದಿನ ಬಾಕಿ ಇದೆ. ಮೊಬೈಲ್‌ ಬಿಟ್ಟು ಓದು' ಎಂದು ಬುದ್ಧಿವಾದ ಹೇಳಿದ್ದಾರೆ. ತಾಯಿ ಮಾತಿಗೆ ಕೋಪಗೊಂಡ ಅವಂತಿಕಾ, ತನ್ನ ಕೊಠಡಿಯ ಕಿಟಕಿ ಸರಿಸಿ ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ.

ಈ ಸುದ್ದಿಯನ್ನೂ ಓದಿ | Microfinance ordinance: ಸಾಲಕ್ಕೆ ಭದ್ರತೆ ಕೇಳುವಂತಿಲ್ಲ, ನಿಯಮ ಮೀರಿದ್ರೆ 10 ವರ್ಷ ಜೈಲು ಶಿಕ್ಷೆ, 5 ಲಕ್ಷ ದಂಡ

ತಕ್ಷಣ ತಾಯಿ, ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲು ಮುಂದಾಗಿದ್ದಾರೆ. ಆದರೆ, ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಸ್ಥಳದಲ್ಲಿಯೇ ಅವಂತಿಕಾ ಮೃತಪಟ್ಟಿದ್ದಾಳೆ.