ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KRS Dam: ನಿಗೂಢವಾಗಿ ತೆರೆದ ಕೆಆರ್‌ಎಸ್‌ ಡ್ಯಾಂ ಗೇಟ್‌, 2000 ಕ್ಯೂಸೆಕ್‌ ನೀರು ಪೋಲು

ಎರಡು ಕಾರಣಗಳಿಂದ ಡ್ಯಾಂನ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಡ್ಯಾಂನ ಗೇಟ್​ನ ಮೋಟಾರ್​ ರಿವರ್ಸ್​ ಆಗಿದ್ದರಿಂದ ಗೇಟ್​ ತೆರೆದಿರಬಹುದು, ಅಥವಾ ನಮ್ಮದೇ ಸಿಬ್ಬಂದಿ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಗೇಟ್​ ಯಾವ ಕಾರಣಕ್ಕೆ ತೆರೆದಿದೆ ಎಂಬುವುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.

ನಿಗೂಢವಾಗಿ ತೆರೆದ ಕೆಆರ್‌ಎಸ್‌ ಡ್ಯಾಂ ಗೇಟ್‌, 2000 ಕ್ಯೂಸೆಕ್‌ ನೀರು ಪೋಲು

ಕೆಆರ್‌ಎಸ್‌ ಅಣೆಕಟ್ಟು

ಹರೀಶ್‌ ಕೇರ ಹರೀಶ್‌ ಕೇರ Mar 25, 2025 11:34 AM

ಮಂಡ್ಯ: ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೃಷ್ಣರಾಜ ಸಾಗರ (KRS dam​) ಜಲಾಶಯದ ಗೇಟ್ (Gate) ಭಾನುವಾರ (ಮಾರ್ಚ್​ 23) ರಾತ್ರಿ ಏಕಾಏಕಿ‌ ತೆರೆದಿದ್ದು, ಸೋಮವಾರ (ಮಾ.24) ರಾತ್ರಿವರೆಗೂ ಗೇಟ್​ ತೆರೆದೇ ಇದ್ದ ಪರಿಣಾಮ 24 ಗಂಟೆಯಲ್ಲಿ ಸುಮಾರು ಎರಡು ಸಾವಿರ ಕ್ಯೂಸೆಕ್ ನೀರು‌‌ ನದಿ ಪಾಲಾಗಿದೆ. ಸೋಮವಾರ ರಾತ್ರಿ ಕಾವೇರಿ (cauvery) ನೀರಾವರಿ ನಿಗಮದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ. ಹೆಚ್ಚಿನ ಪ್ರಮಾಣದ ‌ನೀರು ಇದ್ದಿದ್ದರಿಂದ ಗೇಟ್ ಮುಚ್ಚಲು‌ ಅಧಿಕಾರಿಗಳು ಹರಸಾಹಸ ಪಟ್ಟರು. ಗೇಟ್‌ ಯಾರು ಮತ್ತು ಏಕೆ ತೆಗೆದಿದ್ದಾರೆ ಎಂಬುದು ಇನ್ನೂ ಪತ್ತೆಯಾಗಿಲ್ಲ.

ಜಲಾಶಯದ ಗೇಟ್ ಏಕಾಏಕಿ ತೆರೆಯುವಂತಿಲ್ಲ. ಆದರೆ, ಇಲ್ಲಿ ಕೆಆರ್​ಎಸ್​ ಡ್ಯಾಂನ ಗೇಟ್​ ಏಕಾಏಕಿ ತೆರೆದಿದ್ದು, ಅನುಮಾನವನ್ನು ಹುಟ್ಟು ಹಾಕಿದೆ. ಎರಡು ಕಾರಣಗಳಿಂದ ಡ್ಯಾಂನ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಡ್ಯಾಂನ ಗೇಟ್​ನ ಮೋಟಾರ್​ ರಿವರ್ಸ್​ ಆಗಿದ್ದರಿಂದ ಗೇಟ್​ ತೆರೆದಿರಬಹುದು, ಅಥವಾ ನಮ್ಮದೇ ಸಿಬ್ಬಂದಿ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಗೇಟ್​ ಯಾವ ಕಾರಣಕ್ಕೆ ತೆರೆದಿದೆ ಎಂಬುವುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.

ಡ್ಯಾಂನ ಗೇಟ್​ ಏಕಾಏಕಿ ತೆರೆದ ವಿಚಾರ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಲಿದ್ದಾರೆ. ಗೇಟ್​ ಏಕಾಏಕಿ ಹೇಗೆ ತೆರೆಯಿತು ಅಂತ ತನಿಖೆ ನಡೆಸಲು ಪೂರಕವಾದ ಸಾಕ್ಷ್ಯಾಧಾರಗಳು ಅತ್ಯಗತ್ಯ. ಆದರೆ, ಡ್ಯಾಂನ ಸುತ್ತಮುತ್ತ ಯಾವುದೇ ಸಿಸಿ ಕ್ಯಾಮೆರಾಗಳು ಇಲ್ಲ. ಇದರಿಂದ ತನಿಖೆ ನಿಧಾನವಾಗುವ ಸಾಧ್ಯತೆ ಇದೆ.

ಗೃಹಲಕ್ಷ್ಮಿ ಎರಡು ತಿಂಗಳ ಹಣ ಒಂದೇ ಸಲ ಜಮೆ

ಬೆಂಗಳೂರು: ರಾಜ್ಯದ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮಾರ್ಚ್ 31ರ ನಂತರ ಯೋಜನೆಯ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಹಂಚಿಕೊಂಡಿದ್ದು, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್‌ 31ರ ನಂತರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಎಲ್ಲರಿಗೂ ಅನ್ನ, ಅಕ್ಷರ, ವಿದ್ಯೆಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಲಿದೆ ಎಂದು ಸಚಿವರು ಹೇಳಿದರು.‌ ಮಹಿಳೆಯರು ಇವತ್ತು ಯಾವುದರಲ್ಲೂ‌ ಹಿಂದೆ ಇಲ್ಲ. ಸಮಾಜದಲ್ಲಿ ಮಹಿಳೆಯರನ್ನು ಬಿಟ್ಟು ಇರುವುದಕ್ಕೂ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಬಂದರೆ, ಕರ್ನಾಟಕ ವಿಧಾನಸಭೆಯಲ್ಲಿ 70 ರಿಂದ 78 ರವರೆಗೆ ಶಾಸಕಿಯರು‌ ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

1999ರಲ್ಲಿ ನಾನು ಕೂಡ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡೆ. ನಮ್ಮ ಹಿರಿಯ ನಾಯಕಿ ಮಾರ್ಗರೇಟ್ ಅಳ್ವ ಅವರೇ ನನಗೆ ಸ್ಫೂರ್ತಿ. ಹಂತ ಹಂತವಾಗಿ ಮೇಲೆ ಬಂದು ಇಂದು ಸರ್ಕಾರದಲ್ಲಿ ಸಚಿವರಾಗಿರುವೆ. ಕಾಂಗ್ರೆಸ್ ಪಕ್ಷ ಸಾಮಾನ್ಯರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದನ್ನೂ ಓದಿ: CM Siddaramaiah: ಆಲಮಟ್ಟಿ ಡ್ಯಾಂ ಎತ್ತರ 524.26 ಮೀ.ಗೆ ಹೆಚ್ಚಳ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಬದ್ಧ: ಸಿಎಂ