ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ (Bengaluru Stampede) ಹಿನ್ನೆಲೆಯಲ್ಲಿ ಆರ್‌ಸಿಬಿ, ಡಿಎನ್‌ಎ ಇವೆಂಟ್ ಮ್ಯಾನೇನ್ಮೆಂಟ್ ಸಂಸ್ಥೆ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ ಎಫ್‌ಐಆರ್ ರದ್ದು ಕೋರಿ ಕೆಎಸ್‌ಸಿಎ(KSCA), ಹೈಕೋರ್ಟ್ ಮೆಟ್ಟಿಲೇರಿದೆ.
ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಹಾಗೂ ಇತರ ಪದಾಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ರದ್ದುಪಡಿಸಬೇಕೆಂದು ಕೋರಿ ಹಾಗೂ ತಕ್ಷಣ ಅರ್ಜಿಯ ವಿಚಾರಣೆ ನಡೆಸಬೇಕೆಂದು ಕೋರ್ಟ್‌ಗೆ ಮನವಿ ಮಾಡಲಾಗಿದೆ.
ಕಾಲ್ತುಳಿತ ಪ್ರಕರಣ ಕುರಿತಂತೆ ಆರ್‌ಸಿಬಿ, ಡಿಎನ್‌ಎ ಮತ್ತು ಕೆಎಸ್‌ಸಿಎ ಪ್ರತಿನಿಧಿಗಳನ್ನು ತಕ್ಷಣ ಬಂಧಿಸುವಂತೆ ಡಿಜಿಪಿ-ಐಜಿಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೆ ನಾಲ್ವರನ್ನು ಬಂಧಿಸಲಾಗಿದೆ. ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ವೇಳೆ 11 ಮಂದಿ ಮೃತಪಟ್ಟು, 56 ಮಂದಿ ಗಾಯಗೊಂಡಿದ್ದರು.
ಈ ಸುದ್ದಿಯನ್ನೂ ಓದಿ | Bengaluru Stampede: ಕಾಲ್ತುಳಿತದ ಪ್ರಮುಖ ಆರೋಪಿಗಳು ಸಿಎಂ, ಡಿಸಿಎಂ; ನೇರವಾಗಿ ಸರ್ಕಾರವನ್ನು ಪ್ರಶ್ನಿಸಿದ ವಿಪಕ್ಷ
ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್ ಸೇರಿ ನಾಲ್ವರ ಬಂಧನ
ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆರ್ ಸಿ ಬಿ ಮಾನ್ಯೇಜ್ ಮೆಂಟ್ ನ ಇಬ್ಬರು ಆಯೋಜಕರನ್ನು ಬಂಧಿಸಿದ್ದಾರೆ.
ಆರ್ ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಲ್ ಸೋಸಲೆ, DNA ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಲಾಕ್ ಸೇರಿದಂತೆ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ KSCA ಕಾಯರ್ದರ್ಶಿ, ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಿನ್ನೆ ರಾತ್ರಿ KSCA ಕಾಯರ್ದರ್ಶಿ ಶಂಕರ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. KSCA ಖಜಾಂಚಿ ಜಯರಾಮ್ ಮನೆ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.