ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KSRTC staff strike: ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ಬಸ್‌ಗಳ ಸಂಚಾರ ಸ್ಥಗಿತ: ಅನಂತ ಸುಬ್ಬರಾವ್

KSRTC staff strike: ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್, ಒಂದು ದಿನ ಮುಷ್ಕರ ಮುಂದೂಡುವಂತೆ ಆದೇಶ ನೀಡಿತ್ತು. ಆದರೆ ಹೈಕೋರ್ಟ್ ಆದೇಶದ ನಡುವೆಯೂ ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸುವುದಾಗಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಸ್ಪಷ್ಪಪಡಿಸಿದ್ದಾರೆ.

ನಾಳೆ ಬೆಳಗ್ಗೆಯಿಂದಲೇ ಸಾರಿಗೆ ಬಸ್‌ಗಳ ಸಂಚಾರ ಸ್ಥಗಿತ: ಅನಂತ ಸುಬ್ಬರಾವ್

Prabhakara R Prabhakara R Aug 4, 2025 8:54 PM

ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರ (ಜು.5) ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ಮುಷ್ಕರ (KSRTC staff strike) ನಡೆಸುತ್ತೇವೆ. ಸಾರಿಗೆ ಬಸ್‌ಗಳು ರಸ್ತೆಗಿಳಿಯುವುದಿಲ್ಲ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಬಸ್‌ಗಳನ್ನು ಡಿಪೋಗಳಲ್ಲೇ ನಿಲ್ಲಿಸುತ್ತೇವೆ. ಯಾವುದೇ ನೌಕರರು ಬಸ್‌ಗಳನ್ನು ಓಡಿಸುವುದಿಲ್ಲ. ಸರ್ಕಾರದ ಬೆದರಿಕೆಗೆ ಹೆದರಬೇಡಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಎಂದು ಕರೆ ನೀಡಿದ್ದಾರೆ.

ಮುಷ್ಕರದ ಬಗ್ಗೆ 22 ದಿನಗಳ ಹಿಂದೆ ನೋಟಿಸ್ ನೀಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಇಂದು ಸಭೆ ಕರೆದಿದ್ದಾರೆ. ಬಾಕಿ ಹಣ ಕೊಡಬೇಕು, ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಬೇಕು. ಬೇಕಿದ್ದರೆ ಕಂತಿನ ರೂಪದಲ್ಲಿ ಬಾಕಿ ಕೊಡಿ ಎಂದು ಮನವಿ ಮಾಡಿದ್ದೇವೆ. ಆದರೆ, 12 ಬೇಡಿಕೆಗಳ ಪೈಕಿ ಎರಡು ಪ್ರಮುಖ ಬೇಡಿಕೆಗಳನ್ನಾದರೂ ಈಡೇರಿಸಬೇಕಿತ್ತು. ಅಧಿವೇಶನದವರೆಗೆ ಮುಷ್ಕರ ಮುಂದೂಡಿ ಎಂದು ಹೇಳಿದ್ದಾರೆ. ನಾವು ಒಪ್ಪಿಲ್ಲ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ ಸಾರಿಗೆ ಮುಷ್ಕರ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಒಂದು ದಿನ ಮುಂದೂಡುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿತ್ತು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಆದರೆ ಹೈಕೋರ್ಟ್ ಆದೇಶದ ನಡುವೆಯೂ ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸುವುದಾಗಿ ಅನಂತ ಸುಬ್ಬರಾವ್ ಸ್ಪಷ್ಪಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | KSRTC staff strike: ಸಾರಿಗೆ ನೌಕರರ ಒಕ್ಕೂಟದ ಜತೆ ಸಿಎಂ ಸಂಧಾನ ವಿಫಲ; ನಾಳೆಯಿಂದ ಮುಷ್ಕರಕ್ಕೆ ಕರೆ

ಸಾರಿಗೆ ನೌಕರರ ಜತೆಗೆ ಸಿಎಂ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ಸಭೆ ವಿಫಲಗೊಂಡಿತ್ತು. ಹೀಗಾಗಿ ಮುಷ್ಕರಕ್ಕೆ ತೀರ್ಮಾನಿಸಲಾಗಿತ್ತು. ಹೈಕೋರ್ಟ್​ ಆದೇಶದ ನಡುವೆಯೂ ಮುಷ್ಕರ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ.