ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

KSRTC staff strike: ಆ.5ಕ್ಕೆ ಸಾರಿಗೆ ನೌಕರರು ಮುಷ್ಕರ ಮಾಡಲ್ಲ: ಅನಂತ ಸುಬ್ಬರಾವ್ ಸ್ಪಷ್ಟನೆ

KSRTC staff strike: ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್​ ಸಂಚಾರ ಸ್ಥಗಿತಗೊಳಿಸಿ ಎಲ್ಲ ಸಿಬ್ಬಂದಿ ಮನೆಯಲ್ಲಿರುತ್ತಾರೆ. ಶಕ್ತಿ ಯೋಜನೆಯನ್ನು ನಾವು ಯಶಸ್ವಿಯಾಗಿ ನಿರ್ವಹಿಸುತ್ತಿದ್ದೇವೆ. ಸರ್ಕಾರ ಕೂಡಲೇ 38 ತಿಂಗಳ ಅರಿಯರ್ಸ್​ ಕೊಡಬೇಕು ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಆಗ್ರಹಿಸಿದ್ದಾರೆ.

ಆ.5ಕ್ಕೆ ಸಾರಿಗೆ ನೌಕರರು ಮುಷ್ಕರ ಮಾಡಲ್ಲ: ಅನಂತ ಸುಬ್ಬರಾವ್

Prabhakara R Prabhakara R Aug 3, 2025 10:05 PM

ಬೆಂಗಳೂರು: ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆಗಾಗಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಆ.5ರಂದು ಬೆಂಗಳೂರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ (KSRTC staff strike) ಮಾಡುತ್ತಿಲ್ಲ. ಬದಲಿಗೆ ಬಸ್​ ಸಂಚಾರ ಸ್ಥಗಿತಗೊಳಿಸಿ ಎಲ್ಲ ಸಿಬ್ಬಂದಿ ಮನೆಯಲ್ಲಿರುತ್ತಾರೆ. ಮುಷ್ಕರದ ಬಗ್ಗೆ ನಂತರ ಆಲೋಚನೆ ಮಾಡುತ್ತೇವೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಕೂಡಲೇ 38 ತಿಂಗಳ ಅರಿಯರ್ಸ್​ ಕೊಡಬೇಕು. ಶಕ್ತಿ ಯೋಜನೆಯನ್ನು ನಾವು ಯಶಸ್ವಿಯಾಗಿ ನಿರ್ವಹಿಸುತ್ತಿದ್ದೇವೆ. ನಮ್ಮ ಸಿಬ್ಬಂದಿಗೆ ಒಂದು ಕೃತಜ್ಞತೆಯನ್ನ ಹೇಳಿದ್ರಾ ನೀವು? ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ನಮ್ಮ ಇಲಾಖೆಯಲ್ಲಿ ಒಂದೇ ಒಂದು ರೂಪಾಯಿ ಹಗರಣ ನಡೆದಿಲ್ಲ. ಸಾರಿಗೆ ಸಿಬ್ಬಂದಿಗೆ ಸಿದ್ದರಾಮಯ್ಯ ಸರ್ಕಾರ ವಿಶ್ವಾಸ ದ್ರೋಹ ಮಾಡಿದೆ ಎಂಬ ಭಾವನೆ ಬಂದಿದೆ. ಮುಷ್ಕರ ತಪ್ಪಿಸುವ ಅವಕಾಶ ಇದೆ. ಪೊಲೀಸ್ ಅಧಿಕಾರಿಗಳು ನಮ್ಮನ್ನು ಈಗಾಗಲೇ ಕರೆಯುತ್ತಿದ್ದಾರೆ. ನಮ್ಮನ್ನು ಅರೆಸ್ಟ್ ಮಾಡಿ ಪಾಕಿಸ್ತಾನ ಜೈಲಿಗೆ ಹಾಕುತ್ತೀರಾ? ನಮ್ಮನ್ನು ಕರೆದು ಸಮಪರ್ಕವಾಗಿ ಮಾತಾಡಿ. ಬೇರೆ ಯಾರದ್ದೋ ಮಾತು ಕೇಳಿ ಹಾಳಾಗಬೇಡಿ ಎಂದು ಹೇಳದರು.

ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಕಿವಿ ಹಿಂಡಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿ. ಆ.5ರಂದು ನಾವು ಯಾವುದೇ ರೀತಿಯ ಮುಷ್ಕರ ಮಾಡುವುದಿಲ್ಲ. ಮರ್ಯಾದೆಯಿಂದ ಸಾರಿಗೆ ಸಿಬ್ಬಂದಿ ಬೇಡಿಕೆಗಳನ್ನ ಈಡೇರಿಸಿ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿಯನ್ನೂ ಓದಿ | KSRTC Strike: ಆಗಸ್ಟ್‌ 5ರಿಂದ ಸಾರಿಗೆ ನೌಕರರ ಮುಷ್ಕರ, ಮಾತುಕತೆಗೆ ಕರೆದ ರಾಜ್ಯ ಸರಕಾರ

ಸಿಎಂ ನಾಳೆ ಸಭೆ ಕರೆದಿದ್ದಾರೆ ಹೋಗುತ್ತೇವೆ. ಕೊನೆ ಗಳಿಗೆಯಲ್ಲಿ ಸಭೆ ಕರೆಯಬೇಡಿ ಎಂದು ಮನವಿ ಮಾಡಿದ್ದೇವೆ. ಆದರೂ ಕೊನೆಯ ಗಳಿಗೆಯಲ್ಲೇ ಸಭೆ ಕರೆದಿದ್ದಾರೆ. ಎಸ್ಮಾ ಜಾರಿ ಮಾಡುತ್ತೇವೆ ಎಂಬುವುದು, ಮುಷ್ಕರ ಮಾಡಿದ್ರೆ ಸಂಬಳ ನೀಡುವುದಿಲ್ಲ ಎನ್ನುವುದು ಸರಿಯಲ್ಲ. ಏನಾದರೂ ಹಿಂದಿನ ಆದೇಶದಲ್ಲಿ ತಪ್ಪಾಗಿದ್ದರೇ ಅದನ್ನು ಬದಲಾವಣೆ ಮಾಡಿ. ನಾಳೆಯ ಸಭೆಯಲ್ಲಿ ಹಳೆಯ ಹಾಡನ್ನು ಹಾಡಿದ್ರೆ, ಬಿಜೆಪಿ ಸರ್ಕಾರ ನೀಡಬೇಕಿರೋದು ಅನ್ನಬೇಡಿ. 500 ಕೋಟಿ ಟಿಕೆಟ್ ಹಂಚಿಕೆ ಮಾಡಿದ್ದಿರಿ, ಆದರೆ ನಿರ್ವಾಹಕ ಮತ್ತು ಚಾಲಕರಿಗೆ ಧನ್ಯವಾದ ಹೇಳಲಿಲ್ಲ ಎಂದು ವಾಗ್ದಾಳಿ ಮಾಡಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು (KSRTC, BMTC Employees) ಅನಿರ್ದಿಷ್ಟಾವಧಿ ಮುಷ್ಕರ (KSRTC Strike) ಮಾಡಲು ನೌಕರರು ನಿರ್ಧರಿಸಿದ್ದರು.

ಸಾರಿಗೆ ನೌಕರರ ಬೇಡಿಕೆಗಳೇನು?

  • 38 ತಿಂಗಳ ವೇತನ ಬಾಕಿ ಹಣ ನೀಡಬೇಕು
  • ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ ನೀಡಬೇಕು
  • ಖಾಸಗೀಕರಣ, ಭ್ರಷ್ಟಾಚಾರ, ಕಾರ್ಮಿಕರ ಕಿರುಕುಳ ನಿಲ್ಲಬೇಕು
  • ನಗದು ರಹಿತ ವೈದ್ಯಕೀಯ ಸೌಲಭ್ಯ
  • ನಮ್ಮ ಹಕ್ಕಿನ ರಜೆ
  • 1-1-2024 ರಿಂದ ವೇತನ ಜಾರಿಗೊಳಿಸುವುದು
  • ಉತ್ತಮ ಕ್ಯಾಂಟೀನ್ ವ್ಯವಸ್ಥೆ
  • ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು
  • ಸಾರಿಗೆ ನಿಗಮದ ವಿದ್ಯುತ್‌ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು
  • ಇ-ಬಸ್‌ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ಧತಿ ಕೈಬಿಡಬೇಕು