kSRTC Strike: ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ಸಂಬಳ ಕಟ್, ರಜೆ ರದ್ದು, ಎಸ್ಮಾ ಜಾರಿ
Karnataka: ಸಾರಿಗೆ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಮುಷ್ಕರದಲ್ಲಿ ಭಾಗಿಯಾಗಲು ಬಹುಮಂದಿಗೆ ಆತಂಕ ಶುರುವಾಗಿದೆ. 2021ರ ಪ್ರತಿಭಟನೆಯ ವೇಳೆ ಆದಂತಹ ಅನುಭವದ ಆತಂಕ ಎದುರಾಗಿದ್ದು, ಎಸ್ಮಾ ಜಾರಿ, ಕೋರ್ಟ್ ಆದೇಶ ಮತ್ತು ಅಮಾನತಿನ ಆತಂಕ ಎದುರಾಗಿದೆ.


ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ (Karnataka) ಸಾರಿಗೆ ನೌಕರರು ಮುಷ್ಕರ (KSRTC Strike) ಆರಂಭಿಸಿದ್ದಾರೆ. ಆದರೆ ಈ ಮುಷ್ಕರದಲ್ಲಿ ಎಲ್ಲಾ ಸಾರಿಗೆ ನೌಕರರೂ ಭಾಗವಹಿಸಿಲ್ಲ. ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿರುವ ನೌಕರರಿಗೆ ಸಾರಿಗೆ ಇಲಾಖೆ ಶಾಕ್ ನೀಡಿದ್ದು, ಅವರ ರಜೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮುಷ್ಕರದಲ್ಲಿ ಭಾಗಿಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಡ್ಯೂಟಿ ಮಾಡಿಲ್ಲ ಅಂದರೆ ಸಂಬಳ ನೀಡುವುದಿಲ್ಲ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಸಾರಿಗೆ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಮುಷ್ಕರದಲ್ಲಿ ಭಾಗಿಯಾಗಲು ಬಹುಮಂದಿಗೆ ಆತಂಕ ಶುರುವಾಗಿದೆ. 2021ರ ಪ್ರತಿಭಟನೆಯ ವೇಳೆ ಆದಂತಹ ಅನುಭವದ ಆತಂಕ ಎದುರಾಗಿದ್ದು, ಎಸ್ಮಾ ಜಾರಿ, ಕೋರ್ಟ್ ಆದೇಶ ಮತ್ತು ಅಮಾನತಿನ ಆತಂಕ ಎದುರಾಗಿದೆ. ಮತ್ತೆ ಸಸ್ಪೆಂಡ್ ಮಾಡಿದರೆ ವರ್ಷಗಳ ಕಾಲ ಕೆಲಸ ಇರುವುದಿಲ್ಲ. ಹೀಗಾಗಿ ಮುಷ್ಕರದಲ್ಲಿ ಭಾಗಿಯಾಗಲು ಹಲವರು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ಮತ್ತೊಂದು ಸಂಘಟನೆಯಿಂದ ಬೆಂಬಲವಿಲ್ಲ. ಇದರಿಂದ ನೌಕರರಲ್ಲೇ ಗೊಂದಲ ನಿರ್ಮಾಣ ಆಗುವ ಸಾಧ್ಯತೆ ಇದೆ.
ಭಾಗಶಃ ಬಸ್ಸು ಸಂಚಾರ
ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ಗಳು ಸಂಚರಿಸುತ್ತಿವೆ. ಏರ್ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.
ಸಾರ್ವನಿಕರಿಗೆ ತೊಂದರೆ ತಪ್ಪಿಸಲು ಸಾರಿಗೆ ಇಲಾಖೆ ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್‌ಗೆ ಸೂಚನೆ ನೀಡಿದ್ದು, ಖಾಸಗಿ ಶಾಲಾ ವ್ಯಾನ್‌ಗಳಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಅವಕಾಶ ಒದಗಿಸಿದೆ. ಹೆಚ್ಚುವರಿ ಟ್ರಿಪ್ ಮೆಟ್ರೋ ರೈಲುಗಳನ್ನು ನಿಯೋಜಿಸಲು ಸೂಚನೆ ನೀಡಿದೆ. ರೈಲ್ವೆ ಇಲಾಖೆಯು ಒಳ ಜಿಲ್ಲೆ ರೈಲುಗಳ ಸಂಚಾರ ಹೆಚ್ಚಿಸಬೇಕು ಹಾಗೂ ಡಿಸಿ, ಎಸ್‌ಪಿಗಳು ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗದೆ.
ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಬೆಂಗಳೂರಿನಲ್ಲಿ ಸಾರಿಗೆ ಮುಷ್ಕರದಿಂದಾಗಿ ಬಿಎಂಟಿಸಿ ಬಸ್‌ಗಳ ಸಂಚಾರ ಭಾಗಶಃ ಸ್ಥಗಿತವಾಗಿದೆ. ಹೀಗಾಗಿ, ಬೆಂಗಳೂರು ಒಂದರಲ್ಲೇ 4 ಸಾವಿರ ಖಾಸಗಿ ಬಸ್‌ಗಳನ್ನ ನೀಡುವಂತೆ ಖಾಸಗಿ ಬಸ್ ಮಾಲೀಕರ ಸಂಘಕ್ಕೆ ಸಾರಿಗೆ ಆಯುಕ್ತರು ಬೇಡಿಕೆ ಇಟ್ಟಿದ್ದಾರೆ. ರಾಜ್ಯಾದ್ಯಂತ 11 ಸಾವಿರ ಬಸ್ ಕೇಳಿದ್ದಾರೆ.
ಇದನ್ನೂ ಓದಿ: KSRTC Strike: ಸಾರಿಗೆ ನೌಕರರ ಮುಷ್ಕರ ಆರಂಭ, ರಾಜ್ಯಾದ್ಯಂತ ಪ್ರಯಾಣಿಕರ ಪರದಾಟ