KSRTC Strike: ಸಾರಿಗೆ ನೌಕರರ ಮುಷ್ಕರ ಆರಂಭ, ರಾಜ್ಯಾದ್ಯಂತ ಪ್ರಯಾಣಿಕರ ಪರದಾಟ
ಬೆಂಗಳೂರು, ಮೈಸೂರು, ಹುಬ್ಬಳ್ಳಿ ಬೆಳಗಾವಿ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಇನ್ನೂ ಕೆಲವು ನೌಕರರು ಎಸ್ಮ ಜಾರಿ ಆತಂಕ ಇರುವುದರ ಹಿನ್ನೆಲೆಯಲ್ಲಿ ಮುಷ್ಕರದಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.


ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಸರಕಾರಿ ಸಾರಿಗೆ ಸಂಸ್ಥೆಗಳ ನೌಕರರು ಇದೀಗ ಮುಷ್ಕರ (KSRTC strike) ಆರಂಭಿಸಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಜೊತೆ ನಡೆದ ಸಂಧಾನ ಸಭೆ ಕೂಡ ವಿಫಲವಾಗಿದ್ದು, ಇಂದಿನಿಂದ ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ.
ಬೆಂಗಳೂರು, ಮೈಸೂರು, ಹುಬ್ಬಳ್ಳಿ ಬೆಳಗಾವಿ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುತೇಕ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಇನ್ನೂ ಕೆಲವು ನೌಕರರು ಎಸ್ಮ ಜಾರಿ, ಕೋರ್ಟ್ ಆದೇಶ ಹಾಗೂ ಅಮಾನತ್ತಿನ ಆತಂಕ ಇರುವುದರ ಹಿನ್ನೆಲೆಯಲ್ಲಿ ಕೆಲವು ನೌಕರರು ಮುಷ್ಕರದಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.
ಸಾರಿಗೆ ನೌಕರರು ಮುಷ್ಕರ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೂ ಕೂಡ ತೊಂದರೆ ಉಂಟಾಗಲಿದೆ. ನಿತ್ಯ ಸಾರಿಗೆ ಬಸ್ಸುಗಳಲ್ಲಿ ಸಂಚರಿಸುವ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂದು ಪರದಾಟ ನಡೆಸುವ ಸಾಧ್ಯತೆ ಇದ್ದು, ಖಾಸಗಿ ವಾಹನಗಳ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಶಾಲಾ ಕಾಲೇಜುಗಳಿಗೆ ಇಂದು ರಜೆ ಇರುವುದಿಲ್ಲ ಎಂದು ತಿಳಿದುಬಂದಿದೆ.
ಇದರಿಂದ ಖಾಸಗಿ ವಾಹನಗಳು ರಸ್ತೆಗಳಿದಿವೆ. ಸರ್ಕಾರಿ ಬಸ್ ಇಲ್ಲದ ಹಿನ್ನೆಲೆ ಖಾಸಗಿ ಬಸ್ಗಳ ಸಂಚಾರ ಶುರುವಾಗಿದ್ದು, ಅರಸೀಕೆರೆ, ಮೈಸೂರು, ಬೆಂಗಳೂರು ಕಡೆಗೆ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ದಿಢೀರ್ ಖಾಸಗಿ ಬಸ್ಗಳ ಸಂಚಾರ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಇದನ್ನೂ ಓದಿ: Transport staff strike: ನಾಳಿನ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ನೌಕರರಿಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಎಂಡಿ ಸೂಚನೆ