ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Kyasanur Forest Disease: ಮಂಗನ ಕಾಯಿಲೆಗೆ ಮೊದಲ ಬಲಿ, ಮಲೆನಾಡಿನಲ್ಲಿ ಹೆಚ್ಚಿದ ಆತಂಕ

ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಕೆಎಫ್​ಡಿಯಿಂದಾಗಿ ಒಬ್ಬ ಯುವಕನ ಸಾವು ಸಂಭವಿಸಿದೆ. ಇದು ನೆರೆಯ ಜಿಲ್ಲೆಯಾದ ಚಿಕ್ಕಮಗಳೂರಿನ ಜನರಲ್ಲೂ ಆತಂಕ ಇಮ್ಮಡಿಗೊಳಿಸಿದೆ. ರೋಗ ಹರಡದಂತೆ ತಡೆಯಲು ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಸುಮಾರು 595ಕ್ಕೂ ಹೆಚ್ಚು ಜನರ ರಕ್ತದ ಮಾದರಿಯನ್ನು ಸಂಗ್ರಹಿಸಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮೃತ ಕಿಶೋರ್‌

ಶಿವಮೊಗ್ಗ, ಜ,30: ಮಂಗನ ಕಾಯಿಲೆ (KFD – Kyasanur Forest Disease) ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ (Thirthahalli) ತಾಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇದರೊಂದಿಗೆ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ (Shivamogga) ಹಾಗೂ ಚಿಕ್ಕಮಗಳೂರಿನಲ್ಲಿ (Chikkamagaluru) ಆತಂಕ ಹೆಚ್ಚಿದೆ.

ಮೃತ ಯುವಕನನ್ನು ಸಸಿ ತೋಟದ ನಿವಾಸಿ ಕಿಶೋರ್ ಎಂದು ಗುರುತಿಸಲಾಗಿದೆ. ಜ.20 ರಿಂದ ಕಿಶೋರ್ ವಿಪರೀತ ಜ್ವರದಿಂದ ಬಳಲುತ್ತಿದ್ದ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಜ್ವರದ ತೀವ್ರತೆ ಹೆಚ್ಚಾಗಿತ್ತು. ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆ, ಜ.25 ರಂದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ತಜ್ಞ ವೈದ್ಯರ ತಂಡ ಸತತ ಪ್ರಯತ್ನ ನಡೆಸಿದರೂ, ಸೋಂಕಿನ ತೀವ್ರತೆಯಿಂದಾಗಿ ಅವರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಕೆಎಫ್​ಡಿಯಿಂದಾಗಿ ಸಾವು ಸಂಭವಿಸಿರುವುದು ನೆರೆಯ ಜಿಲ್ಲೆಯಾದ ಚಿಕ್ಕಮಗಳೂರಿನ ಜನರಲ್ಲಿ ಆತಂಕ ಇಮ್ಮಡಿಗೊಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲೂಕುಗಳಾದ ಎನ್.ಆರ್. ಪುರ, ಶೃಂಗೇರಿ, ಕೊಪ್ಪ ಮತ್ತು ಚಿಕ್ಕಮಗಳೂರು ತಾಲೂಕುಗಳಲ್ಲಿ ಕೆ.ಎಫ್.ಡಿ ಲಕ್ಷಣಗಳು ಕಾಣಿಸಿಕೊಂಡಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9 ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 6 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Monkey Disease: ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ, 8 ಜನರಲ್ಲಿ ಕೆಎಫ್‌ಡಿ ವೈರಸ್

ಇಬ್ಬರು ಕೊಪ್ಪ ಸರ್ಕಾರಿ ಆಸ್ಪತ್ರೆಯ ಕೆ.ಎಫ್.ಡಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಮತ್ತು ಕೊಪ್ಪದ ಅರಳಿಕೊಪ್ಪದಲ್ಲಿ ಪ್ರತ್ಯೇಕ ಪ್ರಕರಣಗಳು ವರದಿಯಾಗಿವೆ. ವಿಶೇಷವೆಂದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಎನ್.ಆರ್. ಪುರ ತಾಲೂಕಿನ ಮೇಗರಮಕ್ಕಿ ಗ್ರಾಮದವರಾಗಿದ್ದಾರೆ.

ಆರೋಗ್ಯ ಇಲಾಖೆ ಕಟ್ಟೆಚ್ಚರ

ರೋಗ ಹರಡದಂತೆ ತಡೆಯಲು ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಈಗಾಗಲೇ ಸುಮಾರು 595ಕ್ಕೂ ಹೆಚ್ಚು ಜನರ ರಕ್ತದ ಮಾದರಿಯನ್ನು ಸಂಗ್ರಹಿಸಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ ಜಾಗೃತಿ ಮೂಡಿಸಲಾಗುತ್ತಿದೆ.

ಮಂಗನ ಕಾಯಿಲೆ ಶೋಧದ ಹಾದಿಯಲ್ಲಿ

ಮಂಗನಕಾಯಿಲೆ ಲಕ್ಷಣಗಳೇನು? ಮುನ್ನೆಚ್ಚರಿಕೆ ಹೇಗೆ?

ಜ್ವರ ಅಥವಾ ವಿಪರೀತ ಮೈ ಕೈ ನೋವು ಪ್ರಮುಖ ಲಕ್ಷಣವಾಗಿದ್ದು, ಕಾಣಿಸಿಕೊಂಡರೆ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಸಲಹೆ ನೀಡಲಾಗಿದೆ. ಅಲ್ಲದೆ, ಕಾಡು ಅಥವಾ ತೋಟಗಳಿಗೆ ತೆರಳುವ ಮುನ್ನ ಮೈ ಪೂರ್ತಿ ಮುಚ್ಚುವಂತಹ ಬಟ್ಟೆ ಧರಿಸಬೇಕು. ಅರಣ್ಯ ಇಲಾಖೆ ಸೂಚಿಸಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ತೋಟದ ಕೆಲಸಕ್ಕೆ ತೆರಳುವಾಗ ಕಾರ್ಮಿಕರು ಹೆಚ್ಚಿನ ಜಾಗ್ರತೆ ವಹಿಸುವುದು ಅನಿವಾರ್ಯವಾಗಿದೆ.

ಹರೀಶ್‌ ಕೇರ

View all posts by this author