ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lakshmi Hebbalkar: ಕಾಂಗ್ರೆಸ್‌ನಿಂದ ಮಾತ್ರ ಮಹಿಳೆಯ ಏಳಿಗೆ ಸಾಧ್ಯ ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

Lakshmi Hebbalkar: ದೇಶದಲ್ಲಿ ಕಾಂಗ್ರೆಸ್‌ಗೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್‌ಗೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿಅವರು ಮಾತನಾಡಿದರು.

ಕಾಂಗ್ರೆಸ್‌ಗೆ ಒಳ್ಳೆಯ ದಿನಗಳು ಬರಲಿವೆ: ಲಕ್ಷ್ಮೀ ಹೆಬ್ಬಾಳ್ಕರ್‌

Profile Siddalinga Swamy Mar 15, 2025 6:46 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರದ (State Congress Government) ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ (Congress Party)ನಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮಹಿಳೆಯರ ಪರ ಇರುವ ಪಕ್ಷ, ಮಹಿಳೆಯರು ಮಾತ್ರವಲ್ಲ, ಯುವಕರ, ವೃದ್ಧರ ಹೀಗೆ...ಎಲ್ಲರಿಗೂ ಸಲ್ಲುವ ಪಕ್ಷ ಎಂದು ತಿಳಿಸಿದರು.

4

ಎಲ್ಲರಿಗೂ ಅನ್ನ, ಅಕ್ಷರ, ವಿದ್ಯೆಯನ್ನು ಕೊಟ್ಟಿದ್ದು ಕಾಂಗ್ರೆಸ್. ದೇಶದಲ್ಲಿ ಕಾಂಗ್ರೆಸ್‌ಗೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್‌ಗೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ಹೇಳಿದರು.‌

ಮಹಿಳಾ ಮೀಸಲಾತಿ ಜಾರಿಗೆ ಬಂದರೆ, ಕರ್ನಾಟಕ ವಿಧಾನಸಭೆಯಲ್ಲಿ 70ರಿಂದ 78ರವರೆಗೆ ಶಾಸಕಿಯರು‌ ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಕಾಂಗ್ರೆಸ್ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಅತಿ ದೊಡ್ಡ ಯೋಜನೆ. 1.22 ಕೋಟಿ ಫಲಾನುಭವಿಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂ. ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಹೇಳಿದರು.

1999ರಲ್ಲಿ ನಾನು ಕೂಡ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡೆ. ನಮ್ಮ ಹಿರಿಯ ನಾಯಕಿ ಮಾರ್ಗರೇಟ್ ಅಳ್ವ ಅವರೇ ನನಗೆ ಸ್ಫೂರ್ತಿ. ಹಂತ ಹಂತವಾಗಿ ಮೇಲೆ ಬಂದು ಇಂದು ಸರ್ಕಾರದಲ್ಲಿ ಸಚಿವೆಯಾದೆ. ಕಾಂಗ್ರೆಸ್ ಸಾಮಾನ್ಯರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಈ ಸುದ್ದಿಯನ್ನೂ ಓದಿ | E Khata: ರಾಜ್ಯದ ಗ್ರಾಮೀಣ ಆಸ್ತಿಗಳಿಗೂ ಇ-ಖಾತಾ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಈ ವೇಳೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ‌ ರೆಡ್ಡಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಮುಖಂಡರಾದ ಜಲಜಾ ನಾಯ್ಕ್, ಮಂಜುಳಾ ನಾಯ್ಡು, ಪುಷ್ಪ ಅಮರ್‌ನಾಥ್ ಸೇರಿ ನೂರಾರು ಸಂಖ್ಯೆಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು.