ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ನಾಳೆ (ಮಾರ್ಚ್ 8) ಸಾಮೂಹಿಕವಾಗಿ ಗ್ರ್ಯಾಚುಯಿಟಿ ವಿತರಿಸಲಾಗುವುದು ಎಂದು ತಿಳಿಸಿದ ಸಚಿವರು, ನಿವೃತ್ತಿಯಾದವರಿಗೆ ಇಡಿಗಂಟು ಹಣ ನೀಡುವುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಹೆಬ್ಬಾಳಕರ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. -

Profile Siddalinga Swamy Mar 7, 2025 5:40 PM

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ, ಮನವಿ ಸ್ವೀಕರಿಸಿ, ಬಳಿಕ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಸಲು ಸರ್ಕಾರಕ್ಕೆ ಸಹಾನುಭೂತಿ ಇದೆ. ವೈಯಕ್ತಿಕವಾಗಿ ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಮುಂದಿನ ದಿನಗಳಲ್ಲಿ ಮತ್ತೆ ಗೌರವಧನ ಏರಿಕೆಯಾಗುವ ವಿಶ್ವಾಸ

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನವನ್ನು ಬಜೆಟ್‌ನಲ್ಲಿ ಹೆಚ್ಚಿಸಲಾಗಿದೆ. 2017 ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗಲೇ ವೇತನ ಹೆಚ್ಚಿಸಲಾಗಿತ್ತು. ಈಗಲೂ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಗೌರವಧನ ಏರಿಕೆಯಾಗುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.

ನಾಳೆ ಗ್ರ್ಯಾಚುಯಿಟಿ ವಿತರಣೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ನಾಳೆ (ಮಾರ್ಚ್ 8) ಸಾಮೂಹಿಕವಾಗಿ ಗ್ರ್ಯಾಚುಯಿಟಿ ವಿತರಿಸಲಾಗುವುದು ಎಂದು ತಿಳಿಸಿದ ಸಚಿವರು, ನಿವೃತ್ತಿಯಾದವರಿಗೆ ಇಡಿಗಂಟು ಹಣ ನೀಡುವುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು. ರಾಜ್ಯದಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವ ಯೋಚನೆಯಿದೆ. ಈ ಮೂಲಕ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಹಾಯವಾಗಲಿದೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ಸುದ್ದಿಯನ್ನೂ ಓದಿ | Lakshmi Hebbalkar: ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಸದ್ಯದಲ್ಲೇ ಕ್ಲಿಯರ್‌- ಲಕ್ಷ್ಮೀ ಹೆಬ್ಬಾಳಕರ್‌

ಈ ವೇಳೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮೀ, ಕಾರ್ಯಾಧ್ಯಕ್ಷೆ ಶಾಂತಾ ಎಸ್. ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ, ಖಜಾಂಚಿ ಕಮಲಾ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.