Lakshmi Hebbalkar: ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು: ಲಕ್ಷ್ಮೀ ಹೆಬ್ಬಾಳಕರ್
Lakshmi Hebbalkar: ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದು ತಿಳಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಜಿಎಸ್‌ಟಿ, ಜಿಎಸ್‌ಟಿಯೇತರ, ಆದಾಯ ತೆರಿಗೆ... ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದ್ದಾರೆ.


ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ. ಜಿಎಸ್‌ಟಿ, ಜಿಎಸ್‌ಟಿಯೇತರ, ಆದಾಯ ತೆರಿಗೆ... ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು.
ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹಾಜರಿದ್ದರು.
ಗ್ಯಾರಂಟಿ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಯವರೆಗೂ ತಲುಪಿದೆ: ರಾಜ್ಯಪಾಲ ಗೆಹ್ಲೊಟ್
ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ(Budget Session) ಇಂದಿನಿಂದ ಪ್ರಾರಂಭಗೊಂಡಿದ್ದು, ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಜಂಟಿ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಜಿಎಸ್‌ಟಿ ಸಂಗ್ರಹ ಸೇರಿದಂತೆ ಹತ್ತು ಹಲವು ವಿಚಾರಗಳನ್ನು ರಾಜ್ಯಪಾಲರು ಸದನದ ಮುಂದಿಟ್ಟಿದ್ದಾರೆ. ರಾಜ್ಯ ಸರ್ಕಾರ ಜಿಎಸ್‌ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ತಲುಪಿಸಿದೆ. ಗ್ಯಾರಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ ಎಂದು ತಿಳಿಸಿದರು.
ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಯ್ ಉದಯ ಆಗಿದೆ ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | Oscar 2025: `ಅನೋರಾ'ಗೆ ಆಸ್ಕರ್ ಅವಾರ್ಡ್; ಪ್ರಿಯಾಂಕಾ ಚೋಪ್ರಾ ನಿರ್ಮಾಣದ ಅನುಜಾಗೆ ಕೈ ತಪ್ಪಿದ ಪ್ರಶಸ್ತಿ