ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2,800 ರೈತರು ಆತ್ಮಹತ್ಯೆ
ರಾಜ್ಯದಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣದಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಿಂದ ಆತ್ಮಹತ್ಯೆ ಪ್ರಕರಣ ಇಳಿಮುಖವಾಗುತ್ತಿದೆ. ಇದು ರಾಜ್ಯ ಸರ್ಕಾರದ ಯೋಜನೆಗಳು ಜನರನ್ನು ತಲುಪುತ್ತಿದೆ ಎಂಬುದಕ್ಕೆ ನಿದರ್ಶನವಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸದನಕ್ಕೆ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ರೈತರ ಆತ್ಮಹತ್ಯೆ ಪ್ರಕರಣಗಳು (farmers suicide case) ಗಣನೀಯವಾಗಿ ಇಳಿಕೆಯಾಗುತ್ತಿದೆ. ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 2,800 ರೈತರು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಮೂರು ವರ್ಷಗಳಲ್ಲಿ ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿರುವುದನ್ನು ಅಂಕಿ ಅಂಶಗಳು ದೃಢಪಡಿಸಿವೆ. ಇದು ರಾಜ್ಯ ಸರ್ಕಾರದ ಯೋಜನೆಗಳು ವಿಫಲವಾಗಿಲ್ಲ ಎಂಬುದನ್ನು ತೋರಿಸುತ್ತವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (Agriculture Minister N Chaluvarayaswamy) ತಿಳಿಸಿದ್ದಾರೆ. ಸದನದಲ್ಲಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ( BJP MLA Aravind Bellad) ಕೇಳಿದ ಪ್ರಶ್ನೆಗೆ ಅವರು ಈ ಉತ್ತರವನ್ನು ನೀಡಿದ್ದಾರೆ.
ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕೇಳಿದ ಪ್ರಶ್ನೆಗೆ ಅಂಕಿಅಂಶಗಳ ಸಹಿತ ಲಿಖಿತ ಉತ್ತರ ನೀಡಿರುವ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2,809 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಇದು ಇತ್ತೀಚಿನ ವರ್ಷಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಇಳಿಮುಖವಾಗುತ್ತಿರುವುದನ್ನು ತೋರಿಸಿದೆ ಎಂದು ರಾಜ್ಯ ಸರ್ಕಾರ ವಿಧಾನಸಭೆಗೆ ತಿಳಿಸಿದೆ.
2023- 24ರಲ್ಲಿ 1,254 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 2024-25ರಲ್ಲಿ 1,178, 2025- 26ರಲ್ಲಿ ಇದುವರೆಗೆ 377 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ರೈತರ ಆತ್ಮಹತ್ಯೆ ಪ್ರಕರಣ 2,809 ಕ್ಕೆ ತಲುಪಿದೆ. ಪ್ರಕರಣ ಇಳಿಮುಕವಾಗುತ್ತಿದ್ದರೂ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ನೀಡಿರುವ ಅಂಕಿಅಂಶಗಳ ಪ್ರಕಾರ ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.
ರೈತರ ಆತ್ಮಹತ್ಯೆ ಪ್ರಕರಣದ ಪರಿಹಾರ ಕ್ರಮದ ಕುರಿತು ಮಾಹಿತಿ ನೀಡಿದ ಸಚಿವರು, ಸರ್ಕಾರವು ಹಲವಾರು ದುಃಖಿತ ಕುಟುಂಬಗಳಿಗೆ ಹಣಕಾಸಿನ ನೆರವು ನೀಡಿದೆ. ಕೆಲವು ನೇರ ಲಾಭ ವರ್ಗಾವಣೆ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಪಾವತಿಗಳು ಬಾಕಿ ಉಳಿದಿವೆ. ಇದಕ್ಕೆ ನಿಷ್ಕ್ರಿಯ ಅಥವಾ ಮುಚ್ಚಿದ ಬ್ಯಾಂಕ್ ಖಾತೆಗಳು, ಆಧಾರ್ ಲಿಂಕ್ ಮಾಡದಿರುವುದು, ಎನ್ ಪಿಸಿಐ ಮ್ಯಾಪಿಂಗ್ ವೈಫಲ್ಯಗಳು ಕಾರಣ ಎಂದು ಅವರು ಹೇಳಿದ್ದಾರೆ.
Star Saree Fashion 2025: ತಾಯಿಯ ಹಳೆಯ ರೇಷ್ಮೆ ಸೀರೆಯುಟ್ಟು ಸಂಭ್ರಮಿಸಿದ ಆರಾಧನಾ
ಈ ಸಮಸ್ಯೆಗಳು ಪರಿಹಾರವಾದ ತಕ್ಷಣ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು. ಹಣಕಾಸು ಇಲಾಖೆಯ ನಿರ್ಬಂಧಗಳಿಂದಾಗಿ ಕೆಲವು ಹಳೆಯ ಪ್ರಕರಣಗಳು ಪಾವತಿಸಲು ಸಾಧ್ಯವಿಲ್ಲ. ಹಣಕಾಸು ಇಲಾಖೆಯು ನವೆಂಬರ್ 6 ರಂದು ನೀಡಿರುವ ಆದೇಶದ ಪ್ರಕಾರ ರೈತರ ಆತ್ಮಹತ್ಯೆ ಪ್ರಕರಣಗಳ ಪರಿಹಾರವನ್ನು ಘಟನೆ ನಡೆದು ಒಂಬತ್ತು ತಿಂಗಳೊಳಗೆ ಇತ್ಯರ್ಥಪಡಿಸಬೇಕು. ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯದ ಪ್ರಕರಣಗಳಲ್ಲಿ ಪಾವತಿಗಳನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಬೇಕಿದೆ ಎಂದು ತಿಳಿಸಿದ್ದಾರೆ.