ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರ ಸ್ವಸಹಾಯ, ಸ್ತ್ರೀ ಶಕ್ತಿ ಗುಂಪು ರಚಿಸುವ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಭೆ

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರ ಸ್ವಸಹಾಯ, ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಭೆ ನಡೆಸಿದರು. ಈ ಕುರಿತ ವಿವರ ಇಲ್ಲಿದೆ.

ಸ್ವಸಹಾಯ, ಸ್ತ್ರೀ ಶಕ್ತಿ ಗುಂಪು ರಚಿಸುವ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸಭೆ

Profile Siddalinga Swamy May 22, 2025 6:34 PM

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿ ಮಹಿಳೆಯರ ಸ್ವಸಹಾಯ, ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar)‌ ಸಭೆ ನಡೆಸಿದರು.‌

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಶಾಮ್ಲಾ‌ ಇಕ್ಬಾಲ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕಿ ಶ್ರೀವಿದ್ಯಾ, ಸಿಟಿಜನ್ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ (EDCS), ಸಿಬ್ಬಂದಿ ಇಲಾಖೆ ಮತ್ತು ಆಡಳಿತಾತ್ಮಕ ಸುಧಾರಣೆಗಳು (ಇ-ಆಡಳಿತ) ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಶ್ ಸಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್. ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಚ್. ನಿಶ್ಚಲ್, ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ | IOB Recruitment 2025: ಇಂಡಿಯನ್‌ ಓವರ್‌ಸಿಸ್‌ ಬ್ಯಾಂಕ್‌ನಲ್ಲಿದೆ 400 ಹುದ್ದೆ; ಹೀಗೆ ಅಪ್ಲೈ ಮಾಡಿ

ಹೊಸಪೇಟೆಯಲ್ಲಿ ಸಮರ್ಪಣೆ ಸಂಕಲ್ಪ ಸಮಾವೇಶ: ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಹೊಸಪೇಟೆ (ವಿಜಯನಗರ): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾಗವಹಿಸಿ, ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು.

ಸಮಾವೇಶದಲ್ಲಿ 1,11,111 ಭೂ ರಹಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಜತೆಗೆ ಕಂದಾಯ ಇಲಾಖೆಯ ಮಹತ್ವದ ಯೋಜನೆಗಳನ್ನು ಸಮಾವೇಶದ ಮೂಲಕ ಸಾಕಾರಗೊಳಿಸಲಾಯಿತು.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಎಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನೂ ಓದಿ | Flamingoes: ಮನಮೋಹಕ ಫ್ಲೆಮಿಂಗೊ ನೋಡಲು ಭಾರತದ ಈ ತಾಣಗಳಿಗೆ ಭೇಟಿ ನೀಡಿ