ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Laxmi Hebbalkar: ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತವಾಗಿರಲಿದೆ ಎಂದ ಹೆಬ್ಬಾಳ್ಕರ್

Laxmi Hebbalkar: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಮಾತನಾಡಿದ್ದು, ಈ ಬಗ್ಗೆ ಮಾತನಾಡುವಷ್ಟು ದೊಡ್ಡವರು ನಾವಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ: ಹೆಬ್ಬಾಳ್ಕರ್

Profile Siddalinga Swamy Jul 11, 2025 6:04 PM

ಮೈಸೂರು: ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ ಮೇಲೆ ಬೇರೆ ರೀತಿಯ ಚರ್ಚೆಗೆ ಅವಕಾಶವೇ ಇಲ್ಲ. ಈ ಬಗ್ಗೆ ಪದೆ ಪದೇ ಮಾತನಾಡುವುದು ಸರಿ ಇಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಮಾತನಾಡಿದ್ದು, ಈ ಬಗ್ಗೆ ಮಾತನಾಡುವಷ್ಟು ದೊಡ್ಡವರು ನಾವಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಈ ಸುದ್ದಿಯನ್ನೂ ಓದಿ | BOB Recruitment 2025: ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಖಾಲಿ ಇದೆ 2,500 ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆ

ಸಕಾಲಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ

ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಯೋಜನೆಯ ಹಣ ಕೊಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ತಿಂಗಳವರೆಗೂ ಹಣ ಹಾಕಲಾಗಿದೆ. ಜೂನ್ ತಿಂಗಳ ಹಣದ ಪ್ರಕ್ರಿಯೆ ನಡೆಯುತ್ತಿದೆ. ನಮಗೆ ಹಣ ಹಾಕಲು ಯಾವ ತೊಡಕುಗಳೂ ಇಲ್ಲ. ಎಚ್.ಎಂ ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.