Laxmi Hebbalkar: ಹೊಸಪೇಟೆಯಲ್ಲಿ ಸಮರ್ಪಣೆ ಸಂಕಲ್ಪ ಸಮಾವೇಶ: ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದ ಲಕ್ಷ್ಮಿ ಹೆಬ್ಬಾಳ್ಕರ್
Laxmi Hebbalkar: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.


ಹೊಸಪೇಟೆ (ವಿಜಯನಗರ): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾಗವಹಿಸಿ, ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು.
ಸಮಾವೇಶದಲ್ಲಿ 1,11,111 ಭೂ ರಹಿತ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಜತೆಗೆ ಕಂದಾಯ ಇಲಾಖೆಯ ಮಹತ್ವದ ಯೋಜನೆಗಳನ್ನು ಸಮಾವೇಶದ ಮೂಲಕ ಸಾಕಾರಗೊಳಿಸಲಾಯಿತು.
ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಎಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
165 ಭರವಸೆಗಳಲ್ಲಿ 158 ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ಹೊಸಪೇಟೆ: ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ʼಸಮರ್ಪಣೆ ಸಂಕಲ್ಪʼ ಸಮಾವೇಶದಲ್ಲಿ 1,11,111 ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ (Sadhana Samavesha) ಅವರು ಹಕ್ಕುಪತ್ರ ವಿತರಣೆ ಮಾಡಿದರು. ಇದೇ ವೇಳೆ ಉಕ್ಕಿನ ಮಹಿಳೆ ಇಂದಿರಾಗಾಂಧಿ ಅವರ ಪ್ರತಿಮೆಯನ್ನು ಸಿಎಂ ಲೋಕಾರ್ಪಣೆಗೊಳಿಸಿ ಮಾತನಾಡಿ, ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾನು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು, ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.
ಸರ್ವ ಜನಾಂಗದ ಶಾಂತಿಯ ತೋಟ
ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.
ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.
ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5,300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.
ಈ ಸುದ್ದಿಯನ್ನೂ ಓದಿ | KN Rajanna: ವಯಸ್ಸಾಯ್ತು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಕೆಎನ್ ರಾಜಣ್ಣ
ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ
ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.