Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸ ಹೋಗಬೇಡಿ: ಲಕ್ಷ್ಮಿ ಹೆಬ್ಬಾಳ್ಕರ್
Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.


ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ. ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಸಾರ್ವಜನಿಕರಿಂದ ಕೆಲವು ಅನಾಮಧೇಯ ವ್ಯಕ್ತಿಗಳು ಹಣ ವಸೂಲು ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಕೇಳಿಬಂದಿದೆ. ಈ ಕುರಿತು ಪ್ರಸ್ತುತ ಸಾಕ್ಷ್ಯಾಧಾರಗಳು ಸಹ ಲಭ್ಯವಾಗಿವೆ. ಈ ಕುರಿತು ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸಾಕ್ಷ್ಯಾಧಾರ ಸಮೇತ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | IDBI Bank Recruitment 2025: ಐಡಿಬಿಐ ಬ್ಯಾಂಕ್‌ನಲ್ಲಿದೆ 119 ಹುದ್ದೆ; ಹೀಗೆ ಅಪ್ಲೈ ಮಾಡಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಪ್ರಸ್ತುತ ಯಾವುದೇ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲಿರುವುದಿಲ್ಲ. ಹಾಗೇನಾದರೂ ನೇಮಕಾತಿ ಇದ್ದಲ್ಲಿ ಸಕ್ಷಮ ಪ್ರಾಧಿಕಾರದ ಮೂಲಕವೇ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ನೇಮಕಾತಿ ಆಮಿಷಕ್ಕೆ ಒಳಗಾಗದೇ, ಯಾವುದೇ ಮಧ್ಯವರ್ತಿ ತಮ್ಮನ್ನು ನೇಮಕಾತಿ ಕುರಿತು ಸಂಪರ್ಕಿಸಿದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೋರಿದ್ದಾರೆ.