Road Rage Case: ವಿಂಗ್ ಕಮಾಂಡರ್ ವಿರುದ್ಧ ಎಫ್‌ಐಆರ್; ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಎಂದ ಸಿಎಂ
Road Rage Case: ಬೆಂಗಳೂರಿನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಭಾಷೆ ವಿಚಾರಕ್ಕೆ ವಾಯುಸೇನೆ ಅಧಿಕಾರಿ ಮೇಲೆ ಹಲ್ಲೆ ನಡೆದಿದೆ ಎಂದು ಮೊದಲಿಗೆ ಹೇಳಲಾಗಿತ್ತು. ಆದರೆ, ಕಾರಿಗೆ ಬೈಕ್ ಟಚ್ ಆದ ವಿಚಾರಕ್ಕೆ ಜಗಳ ನಡೆದಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.


ಬೆಂಗಳೂರು: ಕನ್ನಡಿಗನ ಮೇಲೆ ಹಲ್ಲೆ (Road Rage Case) ನಡೆಸಿದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅವರು, ತಪ್ಪು ಯಾರೇ ಮಾಡಿದರೂ ಅದು ತಪ್ಪು. ಅದು ವಿಂಗ್ ಕಮಾಂಡರ್ ಆಗಿರಲಿ, ಯಾರೇ ಆಗಿರಲಿ , ತಪ್ಪು ತಪ್ಪೇ. ಯುವಕನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ವಿಂಗ್ ಕಮಾಂಡರ್ ವಿರುದ್ಧ ಎಫ್‌ಐಆರ್
ಯುವಕನ ಮೇಲೆ ಹಲ್ಲೆ ನಡೆಸಿ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಭಾಷೆ ವಿಚಾರಕ್ಕೆ ವಾಯುಸೇನೆ ಅಧಿಕಾರಿ ಮೇಲೆ ಹಲ್ಲೆ ನಡೆದಿದೆ ಎಂದು ಮೊದಲಿಗೆ ಹೇಳಲಾಗಿತ್ತು. ಆದರೆ, ಕಾರಿಗೆ ಬೈಕ್ ಟಚ್ ಆದ ವಿಚಾರಕ್ಕೆ ಜಗಳ ನಡೆದಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಕೂಡ ಆರೋಪಿಯನ್ನು ಅರೆಸ್ಟ್ ಮಾಡಿದ್ದರು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ವಿಂಗ್ ಕಮಾಂಡರ್ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ. ಜಗಳದ ವೇಳೆ ಯುವಕನ ಮೇಲೆ ವಿಂಗ್ ಕಮಾಂಡರ್ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರಿಂದ ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು. ಹೀಗಾಗಿ ವಾಯುಸೇನೆ ಅಧಿಕಾರಿ ವಿರುದ್ಧ ಹತ್ಯಾ ಪ್ರಯತ್ನ ಕೇಸ್ ದಾಖಲಾಗಿದೆ.
ಮೊದಲು ವಿಂಗ್ ಕಮಾಂಡರ್ ಸ್ವತಃ ವಿಡಿಯೋ ಮೂಲಕ ತನ್ನ ಮೇಲೆ ಕನ್ನಡಿಗನೊಬ್ಬ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡಿದ್ದ. ಇದನ್ನೇ ನಂಬಿದ ಪೊಲೀಸರು, ಯುವಕನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ವಶಕ್ಕೆ ಪಡೆದುಕೊಂಡಿದ್ದರು. ಆದರೆ, ನಂತರ ಸಿಸಿಟಿವಿ ವಿಡಿಯೋ ಆಧಾರದ ಮೇಲೆ ಪೊಲೀಸರು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ದ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.
ಯುವಕ ವಿಕಾಸ್ ಕುಮಾರ್ ಸೋಮವಾರ ಸಂಜೆ ನೀಡಿದ ದೂರಿನ ಮೇರೆಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಶಿಲಾದಿತ್ಯ ಬೋಸ್ ವಿರುದ್ಧ ಪ್ರಕರಣ ದಾಖಲಾಗಿದೆ" ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಿ ದೇವರಾಜ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | IAF officer Attacked: ವಾಯುಸೇನೆ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಅರೆಸ್ಟ್; ಅಧಿಕಾರಿಯಿಂದಲೂ ನಡೆದಿತ್ತು ಹಲ್ಲೆ! ಇಲ್ಲಿದೆ ವಿಡಿಯೋ
ಬೆಂಗಳೂರಿನಲ್ಲಿ ಯುವಕನ ಮೇಲೆ ಹಲ್ಲೆ ಮಾಡಿದ ವಿಂಗ್ ಕಮಾಂಡರ್ ಕೋಲ್ಕತ್ತಾಗೆ ಪರಾರಿ
ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಮೇಲಿನ (Wing Commander) ದಾಳಿ ಪ್ರಕರಣಕ್ಕೆ (Road Rage) ಹೊಸ ತಿರುವು ಸಿಕ್ಕಿದೆ. ಯುವಕನ ಮೇಲೆ ಮೊದಲು ದಾಳಿ ಮಾಡಿದ್ದು ಕಮಾಂಡರ್ ಎಂಬುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳಿಂದ ವಿಂಗ್ ಕಮಾಂಡರ್ ಕ್ರೌರ್ಯ (crime news) ಬಯಲಾಗಿದೆ. ಕನ್ನಡಿಗನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ, ನಂತರ ಸುಳ್ಳು ಹೇಳಿಕೊಂಡು ವಿಡಿಯೋ ಮಾಡಿರುವ ವಿಂಗ್ ಕಮಾಂಡರ್ ಬೋಸ್ ಇದೀಗ ಕೋಲ್ಕತಾಗೆ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.
ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಆದಿತ್ಯ ಬೋಸ್ ಮತ್ತು ಅವರ ಪತ್ನಿ ಸ್ಕ್ವಾಡ್ರನ್ ಲೀಡರ್ ಮಧುಮಿತಾ ತಮ್ಮ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಳಲು ತೋಡಿಕೊಂಡಿದ್ದರು. ಆದರೆ ಸಿಸಿಟಿವಿಯಿಂದ ಅಸಲಿ ಕೃತ್ಯ ಬಯಲಾಗಿದೆ. ಈತನೇ ಯುವಕನನ್ನು ನೆಲಕ್ಕೆ ಬೀಳಿಸಿ ಕಾಲಿನಿಂದ ಒದ್ದು, ಮುಖಕ್ಕೆ ಗುದ್ದಿದ್ದಾನೆ. ಇದು ಗೊತ್ತಾಗುತ್ತಿದ್ದಂತೆ ಪತ್ನಿ ಜೊತೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ಕೊಲ್ಕತ್ತಾಗೆ ಎಸ್ಕೇಪ್ ಆಗಿದ್ದಾನೆ ಅಂತ ಹೇಳಲಾಗ್ತಿದೆ.
ಪೊಲೀಸರು ವಿಂಗ್ ಕಮಾಂಡರ್ ವಿರುದ್ಧ ಆರೆಸ್ಟ್ ವಾರೆಂಟ್ ಜಾರಿ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಆರೆಸ್ಟ್ ವಾರೆಂಟ್ ಜಾರಿಯಾದರೆ ಕೋಲ್ಕತ್ತಾಗೆ ಹೋಗಿ ಪೊಲೀಸರು ವಿಂಗ್ ಕಮಾಂಡರ್‌ನ ಆರೆಸ್ಟ್ ಮಾಡಿ ಕರೆತರಬಹುದು. ನಿನ್ನೆ ಬೆಳಗ್ಗೆಯಿಂದ ರಾಜ್ಯದಲ್ಲಿ ವಿಂಗ್ ಕಮಾಂಡರ್‌ಗೆ ಬೆಂಗಳೂರಿನಲ್ಲಿ ಕನ್ನಡಿಗನಿಂದ ಹಲ್ಲೆ ನಡೆದಿತ್ತು ಎಂದು ಭಾರೀ ಸುದ್ದಿಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಸಿಟಿವಿಯಲ್ಲಿ ವಿಂಗ್ ಕಮಾಂಡರ್ ಕನ್ನಡಿಗನ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸೆರೆಯಾಗಿದೆ.
ಯುವಕನೊಬ್ಬನಿಂದ ವಿಂಗ್ ಕಮಾಂಡರ್ ಮೇಲೆ ಹಲ್ಲೆ ನಡೆದಿದೆ ಎಂದು ಪೊಲೀಸರು ಕೂಡಾ ಪತ್ನಿಯಿಂದ ದೂರು ಪಡೆದಿದ್ದರು. ವಿಂಗ್ ಕಮಾಂಡರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಯ್ಯಪ್ಪನಹಳ್ಳಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದರು. ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕನ್ನಡ ಮಾತನಾಡು ಅಂತ ನಾವು ಹೇಳಿಲ್ಲ. ಬೈಕ್ ಕಾರಿಗೆ ಟಚ್ ಆಗಿದ್ದಕ್ಕೆ ಗಲಾಟೆ ಆಯ್ತು. ಅದು ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಆರೋಪಿಗಳು ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.