Karnataka Weather: ರಾಜ್ಯಕ್ಕೆ ಮಳೆ ಮುನ್ಸೂಚನೆ; ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ!
Karnataka Weather: ಫೆ.23ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ.


ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಶುಕ್ರವಾರ ಕೆಲವೆಡೆ ಹಗುರ ಮಳೆಯಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವಾಮಾನವಿತ್ತು (Karnataka Weather). ಹಾಗೆಯೇ ದಕ್ಷಿಣ ಒಳನಾಡಿನ ಶಿವಮೊಗ್ಗ, ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು ಕಾಣಿಸಿಕೊಂಡಿತ್ತು. ಇನ್ನು ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಏರುತ್ತಿರುವ ನಡುವೆ ಮಳೆಯ ಮುನ್ಸೂಚನೆ ಸಿಕ್ಕಿದ್ದು, ಫೆ.23ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದ್ದು, ಒಳನಾಡಿನ ಕೆಲವು ಪ್ರದೇಶಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 18°C ಇರುವ ಸಾಧ್ಯತೆ ಇದೆ. ಇನ್ನು ಫೆ. 24ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಇದೇ ರೀತಿಯ ಸ್ಥಿತಿ ಫೆ.28ರವರೆಗೆ ಮುಂದುವರಿಯಲಿದೆ.
ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿರುವುದಿಲ್ಲ. ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3°C, ದಕ್ಷಿಣ ಒಳನಾಡಿನಲ್ಲಿ 1-2'C ಮತ್ತು ಕರಾವಳಿಯಲ್ಲಿ ಸಾಮಾನ್ಯವಾಗಿರುವ ಸಾಧ್ಯತೆಯಿದೆ. ಹಾಗೆಯೇ ಮುಂದಿನ 5 ದಿನಗಳವರೆಗೆ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4°C ಮತ್ತು ದಕ್ಷಿಣ ಒಳನಾಡಿನಲ್ಲಿ 1-3°C ಹೆಚ್ಚಾಗುವ ಸಾಧ್ಯತೆಯಿದೆ.
ಮೈಸೂರಿನಲ್ಲಿ ಕಡಿಮೆ ಉಷ್ಣಾಂಶ ದಾಖಲು
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಶುಕ್ರವಾರ ಮೈಸೂರು ಜಿಲ್ಲೆಯಲ್ಲಿ ಅತೀ ಕಡಿಮೆ ಉಷ್ಣಾಂಶ 15.7 ಡಿ.ಸೆ. ದಾಖಲಾಗಿದೆ. ಹಾಗೆಯೇ ಕಲಬುರಗಿಯಲ್ಲಿ ಅತೀ ಕೆಚ್ಚು ಉಷ್ಣಾಂಶ 37.6 ಡಿ.ಸೆ ದಾಖಲಾಗಿದೆ.
ತಾಪಮಾನದ ಸಾರಾಂಶ
ರಾಜ್ಯದಲ್ಲಿ ಶುಕ್ರವಾರ ಕನಿಷ್ಠ ತಾಪಮಾನವು ಕರಾವಳಿ ಕರ್ನಾಟಕದಲ್ಲಿ 25-26 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ, ಉತ್ತರ ಒಳನಾಡಿನಲ್ಲಿ ಬೀದರ್ ಮತ್ತು ಧಾರವಾಡದಲ್ಲಿ 17-19 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ, ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಹಾವೇರಿಯಲ್ಲಿ 20-23 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ, ಮತ್ತು ದಕ್ಷಿಣ ಒಳನಾಡಿನ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, 13-16 ಡಿಗ್ರಿ ಸೆಲ್ಸಿಯಸ್, ಆಗುಂಬೆ, ದಾವಣಗೆರೆ, ಬೆಂಗಳೂರು, ಚಿಂತಾಮಣಿ, ಮಂಡ್ಯ ಚಿತ್ರದುರ್ಗ, ಹಾಸನ, ಮಡಿಕೇರಿ ಮತ್ತು ಶಿವಮೊಗ್ಗದಲ್ಲಿ 17-20 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ಇತ್ತು.
ಉತ್ತರ ಆಂತರಿಕ ಕರ್ನಾಟಕದ ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನದಲ್ಲಿ (-2.3 °C) ಗಮನಾರ್ಹ ಕುಸಿತ ಮತ್ತು ದಕ್ಷಿಣ ಅಂತರಿಕ ಕರ್ನಾಟಕದ ಚಿಂತಾಮಣಿಯ ಮೇಲೆ ಗಮನಾರ್ಹ ಏರಿಕೆ (2.6 ° C). ರಾಜ್ಯದ ಉಳಿದ ಭಾಗಗಳಿಗಿಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರಲಿಲ್ಲ.
ಇನ್ನು ಗರಿಷ್ಠ ತಾಪಮಾನವು ಕರಾವಳಿ ಕರ್ನಾಟಕದಲ್ಲಿ 33-35 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿತ್ತು. ಉತ್ತರ ಅಂತರಿಕ ಕರ್ನಾಟಕದ ಬೀದರ್, ವಿಜಯಪುರ, ಧಾರವಾಡ, ಕೊಪ್ಪಳ, ರಾಯಚೂರು ಮತ್ತು ಹಾವೇರಿಯಲ್ಲಿ 34-35 ಡಿಗ್ರಿ ಸೆಲ್ಸಿಯಸ್ ಮತ್ತು ಬೆಳಗಾವಿ ವಿಮಾನ ನಿಲ್ದಾಣ, ಕಲಬುರಗಿ, ಬಾಗಲಕೋಟೆ ಮತ್ತು ಗದಗದಲ್ಲಿ 36-38 ಡಿಗ್ರಿ ಸೆಲ್ಸಿಯಸ್ ಮತ್ತು ದಕ್ಷಿಣ ಒಳನಾಡಿನ ಚಿಂತಾಮಣಿ, ಬೆಂಗಳೂರು, ಚಿಕ್ಕಮಗಳೂರು, ಆಗುಂಬೆಯಲ್ಲಿ 31-33 ಡಿಗ್ರಿ ಸೆಲ್ಸಿಯಸ್, ಚಾಮರಾಜನಗರ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ ಮತ್ತು ಶಿವಮೊಗ್ಗದಲ್ಲಿ 34-36 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ.
ಈ ಸುದ್ದಿಯನ್ನೂ ಓದಿ | Tea Plantations: ಚಹಾದ ತೋಟಗಳಿಗೆ ಪ್ರಸಿದ್ಧಿಯಾಗಿರುವ ಭಾರತದ ಅದ್ಭುತ ತಾಣಗಳಿವು!
ಕರಾವಳಿ ಕರ್ನಾಟಕದ ಕಾರವಾರದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದು, ಬೆಳಗಾವಿ ವಿಮಾನ ನಿಲ್ದಾಣ, ಕಲಬುರಗಿ, ಬಾಗಲಕೋಟೆ ಮತ್ತು ಉತ್ತರ ಒಳ ಕರ್ನಾಟಕದ ಗದಗ ಮತ್ತು ದಕ್ಷಿಣ ಒಳ ಕರ್ನಾಟಕದ ಬೆಂಗಳೂರು ನಗರ, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ರಾಜ್ಯದ ಉಳಿದ ಭಾಗಗಳಿಗಿಂತ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು.