ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Lokayukta Raid: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌, ವಿವಿಧೆಡೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ಆಸ್ತಿ ಪತ್ರಗಳು, ಬ್ಯಾಂಕ್ ಪಾಸ್‌ಬುಕ್ ಮತ್ತು ನಗದು ಹಣದ ಬಗ್ಗೆ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ದಾಳಿಗೆ ಒಳಗಾದ ಅಧಿಕಾರಿಗಳ ಹೆಸರು ಮತ್ತು ವಶಪಡಿಸಿಕೊಳ್ಳಲಾದ ಅಕ್ರಮ ಆಸ್ತಿಯ ಸಂಪೂರ್ಣ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

ಲೋಕಾಯುಕ್ತ

ಬೆಂಗಳೂರು, ಮಾರ್ಚ್‌ 5: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ (Lokayukta Raid) ಮುಂದುವರಿದಿದೆ. ಇಂದು ಮುಂಜಾನೆಯೇ ಬೆಂಗಳೂರು ಸೇರಿದಂತೆ (bengaluru) ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳ ತಂಡಗಳು ಬೆಂಗಳೂರು ನಗರದ ವಿವಿಧ ಬಡಾವಣೆಗಳಲ್ಲಿರುವ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ. ಜೊತೆಗೆ ಮೈಸೂರು ನಗರಿಯಲ್ಲೂ ಲೋಕಾಯುಕ್ತ ಬಲೆ ಬೀಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಉತ್ತರ ಕರ್ನಾಟಕದ ಬಾಗಲಕೋಟೆಯಲ್ಲೂ ಅಧಿಕಾರಿಗಳ ತಂಡ ಬೀಡುಬಿಟ್ಟಿದೆ. ಇದರ ಜೊತೆಗೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಕಾರ್ಯಾಚರಣೆ ವಿಸ್ತರಿಸುವ ಸಾಧ್ಯತೆಯಿದೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ಆಸ್ತಿ ಪತ್ರಗಳು, ಬ್ಯಾಂಕ್ ಪಾಸ್‌ಬುಕ್ ಮತ್ತು ನಗದು ಹಣದ ಬಗ್ಗೆ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ದಾಳಿಗೆ ಒಳಗಾದ ಅಧಿಕಾರಿಗಳ ಹೆಸರು ಮತ್ತು ವಶಪಡಿಸಿಕೊಳ್ಳಲಾದ ಅಕ್ರಮ ಆಸ್ತಿಯ ಸಂಪೂರ್ಣ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ

ಹರೀಶ್‌ ಕೇರ

View all posts by this author