ಬೆಂಗಳೂರು, ಡಿ.23 : ರಾಜ್ಯದಲ್ಲಿ (Karnataka) ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು (Lokayukta Raid) ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯದ 4 ಜಿಲ್ಲೆಗಳಲ್ಲಿ ಲೋಕಾಯುಕ್ತ ತಂಡಗಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ರಾಯಚೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹಲವು ಅಧಿಕಾರಿಗಳ ಮನೆಗಳು, ಕಚೇರಿಗಳು ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಈಡಾಗಿವೆ. ಈ ಅಧಿಕಾರಿಗಳ ಮೇಲೆ ವ್ಯಾಪಕ ಭ್ರಷ್ಟಾಚಾರ, ಹಗರಣಗಳ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಬಾಗಲಕೋಟೆಯ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆ, ಗದಗ ಜಿಲ್ಲೆ ನರಗುಂದ ಮನೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮತ್ತೊಮ್ಮೆ ಆಮರಣಾಂತ ಉಪವಾಸ ಘೋಷಿಸಿದ ಅಣ್ಣಾ ಹಜಾರೆ; ಲೋಕಾಯುಕ್ತ ಕಾನೂನು ಜಾರಿಗೆ ಒತ್ತಾಯ
ವಿಜಯಪುರ ಜಿಲ್ಲೆಯ ಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಸಿದ್ದಾರೆ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮಾರುತಿ ಯಶವಂತ ಮಾಳವಿ ಮನೆ ಮೇಲೆ ದಾಳಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ನಿವೃತ್ತ ಮಹಿಳಾ ಅಧಿಕಾರಿ ವಿಜಯಲಕ್ಷ್ಮೀ ಮನೆಯಲ್ಲಿ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.