Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಶಾಕ್, ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ
Lokayukta Raid: ಮೈಸೂರು ಹಾಗೂ ಕೊಪ್ಪಳ ನಗರಗಳ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕೆ ಮೀರಿ ಅಧಿಕ ಆಸ್ತಿ ಗಳಿಸಿರುವ ಆರೋಪಗಳನ್ನು ಹೊತ್ತ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ ಮಾಡಿ ಪರಿಶೀಲನೆ ನಡೆಸಿವೆ.


ಮೈಸೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಮೈಸೂರು (Mysuru news), ಕೊಪ್ಪಳ ಸೇರಿ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿತು.
ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸ್ವಾಮಿಯ ಸಾತಗಳ್ಳಿಯ ಜೆಪಿ ನಗರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕೊಪ್ಪಳ ನಗರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಎರಡು ದಿನ ಎಸ್ಕಾಂ ಆನ್‌ಲೈನ್ ಸೇವೆ ಅಲಭ್ಯ
ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ಲೈನ್ ಆಧಾರಿತ ಸೇವೆಗಳು ಜುಲೈ 25ರ ರಾತ್ರಿ 8.30 ಗಂಟೆಯಿಂದ ಜುಲೈ 27ರ ರಾತ್ರಿ 10 ಗಂಟೆಯವರೆಗೆ ಲಭ್ಯವಿರುವುದಿಲ್ಲ. ಬೆಸ್ಕಾಂ, ಸೆಸ್ಕ್, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಈ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ನಗರ ಉಪ ವಿಭಾಗದ ಗ್ರಾಹಕರಿಗೆ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ (BESCOM) ತಿಳಿಸಿದೆ.
ಬೆಸ್ಕಾಂ: ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ.
ಸೆಸ್ಕ್: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.
ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು.
ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್, ಹೊಸಪೇಟೆ.
ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಲ್, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು, ವಿಜಾಪುರ.
ಬಿಲ್ ಪಾವತಿಗಾಗಿ ಹೆಚ್ಚಾಗಿ ಬಳಸುವ ಎಲ್ಲಾ ಎಸ್ಕಾಂಗಳ ಜಾಲತಾಣ, ಬೆಸ್ಕಾಂ ಮಿತ್ರ ಮೊಬೈಲ್ ಆಪ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೌಂಟರ್‌ಗಳಲ್ಲಿ ಈ ಎರಡು ದಿನ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕಾರ ನೀಡಬೇಕೆಂದು ಬೆಸ್ಕಾಂ ಕೋರಿದೆ.
ಇದನ್ನೂ ಓದಿ: DK Shivakumar: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಎಸ್ಕಾಂಗಳ ಖಾಸಗೀಕರಣ ಇಲ್ಲ: ಡಿ.ಕೆ.ಶಿವಕುಮಾರ್