ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lokayukta Raid: ಬೆಳಗಾವಿ, ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಭ್ರಷ್ಟ ಅಧಿಕಾರಿಗಳಿಗೆ ಶಾಕ್‌

ಶುಕ್ರವಾರ ಬೆಳ್ಳಂಬೆಳಗ್ಗೆಯೇ ಕಾರ್ಯಾಚರಣೆಗೆ ಇಳಿದ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್‌ ಮಂಡೇದ, ರಾಯಭಾಗ ತಾಲೂಕಿನ ಕವಟಕೊಪ್ಪದ ಪಶುವೈದ್ಯ ಸಂಜಯ ದುರ್ಗನ್ನವರ, ಬಾಗಲಕೋಟೆಯ ಹೂಲಗೇರಿ ಗ್ರಾಪಂ ಪಿಡಿಒ ಎಸ್.ಪಿ.ಹಿರೇಮಠ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಬೆಳಗಾವಿ, ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಸಚಿನ್‌

Profile Ramesh B Jan 31, 2025 10:29 AM

ಬೆಳಗಾವಿ/ಬಾಗಲಕೋಟೆ: ಶುಕ್ರವಾರ (ಜ. 31) ಬೆಳ್ಳಂಬೆಳಗ್ಗೆಯೇ ಕಾರ್ಯಾಚರಣೆಗೆ ಇಳಿದ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ (Lokayukta Raid). ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್‌ ಮಂಡೇದ, ರಾಯಭಾಗ ತಾಲೂಕಿನ ಕವಟಕೊಪ್ಪದ ಪಶುವೈದ್ಯ ಸಂಜಯ ದುರ್ಗನ್ನವರ ಮತ್ತು ಬಾಗಲಕೋಟೆ ಜಿಲ್ಲೆಯ ಹೂಲಗೇರಿ ಗ್ರಾಪಂ ಪಿಡಿಒ ಎಸ್.ಪಿ.ಹಿರೆಮಠ ನರಗುಂದ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಬೆಳಗಾವಿ

ಬೆಳಗಾವಿ ಲೋಕಾಯುಕ್ತ ಎಸ್‌ಪಿ ಹನಮಂತರಾಯ ನೇತೃತ್ವದಲ್ಲಿ ಇಬ್ಬರು ‌ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಲಾಯಿತು. ಬೆಳಗಾವಿ ಆನಿಗೋಳ, ಹಾರೋಗೇರಿ, ಬೆಲ್ಲದ ಬಾಗೇವಾಡಿ ಸೇರಿ 3 ಕಡೆಗಳಲ್ಲಿ ದಾಳಿ ನಡೆಸಲಾಯಿತು. ಆನಿಗೋಳದಲ್ಲಿ ಲೋಕಾಯುಕ್ತ ಸಿಪಿಐ ನಿರಂಜನ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದೆ. ಸದ್ಯ ಪರಿಶೀಲನೆ ಮುಂದುವರಿದಿದೆ.

ಬಾಗಲಕೋಟೆ

ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಪಂ ಪಿಡಿಒ ಎಸ್ ಪಿ.ಬಿ.ಹಿರೇಮಠ ನರಗುಂದ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್‌ನಲ್ಲಿರುವ ಹಿರೇಮಠ ಅವರ ಮನೆಗೆ ತೆರಳಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ ಪಿ.ಸಿದ್ದೇಶ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಏಕಕಾಲಕ್ಕೆ 3 ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ರೇಡ್‌

ಬೆಂಗಳೂರು: ಕೆಲವು ದಿನಗಳ ಹಿಂದೆ ರಾಜ್ಯದ ಹಲವೆಡೆ ಲೋಕಾಯುಕ್ತ ರೇಡ್‌ (Lokayukta Raid) ನಡೆದಿದ್ದು, ಭ್ರಷ್ಟ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲಾಗಿತ್ತು. ಬೆಂಗಳೂರು ಸೇರಿ ರಾಜ್ಯದ 8 ಕಡೆಗಳಲ್ಲಿ ಲೋಕಾಯುಕ್ತ ದಾಳಿ ಆಗಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ತಟ್ಟಿತ್ತು. ಗದಗ, ಬಳ್ಳಾರಿ, ಬೀದರ್ ಸೇರಿದಂತೆ 8 ಕಡೆಗಳಲ್ಲಿ ಏಕಕಾಲಕ್ಕೆ ರೇಡ್ ಆಗಿತ್ತು. ಸಾರಿಗೆ ಇಲಾಖೆಯ ಜಂಟಿ ನಿರ್ದೇಶಕಿ ಶೋಭಾ ಅವರ ಮನೆ ಮೇಲೂ ದಾಳಿಯಾಗಿತ್ತು.

ಲೋಕಾಯುಕ್ತ ಎಸ್​.ಪಿ.ಸಿದ್ದರಾಜು ನೇತೃತ್ವದಲ್ಲಿ ರಾಮಾಂಜನೇಯ ನಗರದ ನಿವಾಸ, ಕಚೇರಿ ಹಾಗೂ ಸ್ನೇಹಿತರ ನಿವಾಸದ ಮೇಲೂ ರೇಡ್ ಮಾಡಲಾಗಿತ್ತು.

ಈ ಸುದ್ದಿಯನ್ನೂ ಓದಿ: Cabinet Decisions: 31 ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ

ಯಾವ ಜಿಲ್ಲೆಗಳಲ್ಲಿ ರೇಡ್‌?

ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ನಡೆದಿತ್ತು. ಖಾನಾಪುರ ತಹಶೀಲ್ದಾರ್, ಬೆಂಗಳೂರು ಟ್ರಾನ್ಸ್ ಪೋರ್ಟ್ ಡಿಪಾರ್ಟ್‌ಮೆಂಟ್‌ ಜಂಟಿ ನಿರ್ದೇಶಕಿ ಶೋಭಾ ಸೇರಿದಂತೆ 8 ಜಿಲ್ಲೆಯ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ, ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್.ಎಚ್.ಲೋಕೇಶ್ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು.