ಚಿತ್ರದುರ್ಗ : ಚಿತ್ರದುರ್ಗದಲ್ಲಿ (chitradurga) ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ (Lokayukta Raid) ನೀಡಿದ್ದು, ಚಿತ್ರದುರ್ಗದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೃಷಿ ಇಲಾಖೆ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಎರಡು ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗದ ತರಳಬಾಳು ನಗರದಲ್ಲಿರುವ ಅಧಿಕಾರಿ ಚಂದ್ರಕಾಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಕೃಷಿ ಇಲಾಖೆ ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ. ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗ್ರಾಮದ ಮನೆಯಲ್ಲೂ ಶೋಧ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: Ban on RSS activities: ಆರ್‌ಎಸ್ಎಸ್‌ಗೆ ಅಂಕುಶ; ತಮಿಳುನಾಡು ಮಾದರಿ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಆರೆಸ್ಸೆಸ್ ರಾಜಕೀಯ ಪಕ್ಷವಲ್ಲ: ಕಾರಜೋಳ
ಬೆಂಗಳೂರು: ಕಾಂಗ್ರೆಸ್ ಮುಖಂಡರು ತಮ್ಮ ಮಕ್ಕಳಿಗೆ ಸರಿಯಾದ ಪಾಠ ಹೇಳಿಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ (Govind Karjol) ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರು (Priyank Kharge) ಆರೆಸ್ಸೆಸ್ ಬಗ್ಗೆ (RSS) ಟೀಕೆ-ಟಿಪ್ಪಣಿ ಮಾಡಿದ್ದನ್ನು ಮಾಧ್ಯಮಗಳ ಮೂಲಕ ನೋಡಿದ್ದೇನೆ. ನಿಮ್ಮ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಡಿ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರಿಗೆ ತಿಳಿಸುವುದಾಗಿ ಹೇಳಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರೆಸ್ಸೆಸ್) ರಾಜಕೀಯ ಪಕ್ಷವಲ್ಲ. ಆರೆಸ್ಸೆಸ್ಸಿನ ರಾಷ್ಟ್ರೀಯ ನೇತಾರ ಮೋಹನ್ ಭಾಗವತ್ ಅವರು, ರಾಜಕಾರಣಿಯಲ್ಲ. ನೀವು ಎದುರಿಸಬೇಕಾಗಿರುವುದು ಬಿಜೆಪಿಯನ್ನು; ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನಲ್ಲ ಎಂದು ತಿಳಿಸಿದರು. ನೀವು ಎದುರಿಸಬೇಕಾದುದು ಈ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು. ಅದನ್ನು ಅರ್ಥ ಮಾಡಿಕೊಂಡು ನೀವು ಮಾತನಾಡಬೇಕೇ ಹೊರತು ಜನರಿಗೆ ತಪ್ಪು ತಿಳಿವಳಿಕೆ ಮಾಡುವ ಮತ್ತು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಆರೆಸ್ಸೆಸ್ ಬಗ್ಗೆ ಟೀಕೆ- ಟಿಪ್ಪಣಿ ಮಾಡುವುದನ್ನು ದೇಶದ 140 ಕೋಟಿ ಜನರು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ಇದನ್ನು ನಾನು ಸ್ಪಷ್ಟವಾಗಿ ಖರ್ಗೆಯವರಿಗೆ ಹೇಳಲು ಬಯಸುತ್ತೇನೆ ಎಂದು ಹೇಳಿದರು.