ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lokayukta Raid: ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Chitradurga: ಇಬ್ಬರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ಲೋಕಾಯುಕ್ತ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ವರದಿ ಸಿದ್ಧಪಡಿಸಲಾಗುತ್ತಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ದಾಳಿಗಳು ನಡೆದಿವೆ.

ಚಿತ್ರದುರ್ಗ: ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ (corruption) ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು (Lokayukta Raid) ಇಬ್ಬರು ಅಧಿಕಾರಿಗಳ ಮೇಲೆ ಏಕಕಾಲದ ದಾಳಿ ನಡೆಸಿದ್ದಾರೆ. ಹಿರಿಯೂರು ಟಿಹೆಚ್‌ಒ ಡಾ.ವೆಂಕಟೇಶ್ ಹಾಗೂ ಜೂ. ಇಂಜಿನಿಯರ್ ಅಂಜನ್ ಮೂರ್ತಿ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ (ಟಿಹೆಚ್‌ಒ) ಡಾ.ವೆಂಕಟೇಶ್ ಅವರ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ. ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯಲ್ಲಿರುವ ಡಾ.ವೆಂಕಟೇಶ್ ಅವರ ಮನೆ ಹಾಗೂ ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಮತ್ತು ಹಣ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಇದೇ ಸಂದರ್ಭದಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜೂನಿಯರ್ ಇಂಜಿನಿಯರ್ ಅಂಜನ್ ಮೂರ್ತಿ ಅವರಿಗೆ ಸಂಬಂಧಿಸಿದ ಏಳು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು, ಯಲಹಂಕ, ಗೌರಿಬಿದನೂರು, ಮತ್ತು ತುಮಕೂರಿನ ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ವೇಳೆ ಬೆಂಗಳೂರಿನಲ್ಲಿ ಮೂರು ವಾಸದ ಮನೆಗಳು ಮತ್ತು ಒಂದು ಕಮರ್ಷಿಯಲ್ ಕಾಂಪ್ಲೆಕ್ಸ್‌ನ ದಾಖಲೆಗಳು ಪತ್ತೆಯಾಗಿವೆ. ಈ ಕಾರ್ಯಾಚರಣೆಯಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು, ಮತ್ತು ತುಮಕೂರಿನ ಲೋಕಾಯುಕ್ತ ತಂಡಗಳು ಭಾಗವಹಿಸಿವೆ.

ಇಬ್ಬರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ಲೋಕಾಯುಕ್ತ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ವರದಿ ಸಿದ್ಧಪಡಿಸಲಾಗುತ್ತಿದೆ.

ಇದನ್ನೂ ಓದಿ: Lokayukta Raid: ಸಚಿವ ಬೈರತಿ ಸುರೇಶ್‌ ಮಾಜಿ ಪಿಎಸ್‌ ಮನೆ ಮೇಲೆ ಲೋಕಾಯುಕ್ತ ದಾಳಿ, ಭಾರಿ ಆಸ್ತಿ ಅಕ್ರಮ ಪತ್ತೆ

ಹರೀಶ್‌ ಕೇರ

View all posts by this author