Lokayukta Raid: ಲೋಕಾಯುಕ್ತ ಬಲೆಗೆ ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ
Lokayukta Raid: ಗೋದಾಮು ನಿರ್ಮಾಣ ಕಾಮಗಾರಿ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಗ್ರಾಪಂ ಪಿಡಿಒ, ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ. ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಅಶೋಕ ದ್ಯಾಮಪ್ಪ ಗೊಂದಿ, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿನ ಖಾಸಗಿ ಹೋಟೇಲ್‌ನಲ್ಲಿ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.


ಹಾವೇರಿ: ಗೋದಾಮು ನಿರ್ಮಾಣ ಕಾಮಗಾರಿ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಗ್ರಾಪಂ ಪಿಡಿಒ, ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ (Lokayukta Raid) ಘಟನೆ ಸೋಮವಾರ ನಡೆದಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕು ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಅಶೋಕ ದ್ಯಾಮಪ್ಪ ಗೊಂದಿ ಎಂಬುವವರೇ ಲಂಚಕ್ಕೆ ಬೇಡಿಕೆ ಇಟ್ಟ ಆರೋಪಿ. ತೆಗ್ಗಿಹಳ್ಳಿಯ ದಾವಲಮಲಿಕ್ ಇಮಾಮಸಾಬ್ ಮುರಡಿ ಎಂಬುವವರು ತೆಗ್ಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಕ್ಕೀರನಂದಿಹಳ್ಳಿ ಗ್ರಾಮದಲ್ಲಿ ಗೋದಾಮು ನಿರ್ಮಾಣ ಕಾಮಗಾರಿಯನ್ನು ಪೂರೈಸಿ, ಕಾಮಗಾರಿ ಮೊತ್ತ 1.60 ಲಕ್ಷ ರೂ.ಗಳನ್ನು ಮಂಜೂರು ಮಾಡಿಸಲು ಕೇಳಿದ್ದರು. ಪಿಡಿಒ ಅಶೋಕ ಗೊಂದಿ ಕಾಮಗಾರಿಯ ಒಟ್ಟು ಮೊತ್ತದಲ್ಲಿ ಅರ್ಧ ಅಂದರೆ 80 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟು, ನಂತರ 50 ಸಾವಿರ ರೂ.ಗಳಿಗೆ ಒಪ್ಪಿಕೊಂಡು ಸೋಮವಾರ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿನ ಖಾಸಗಿ ಹೋಟೇಲ್‌ನಲ್ಲಿ 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದುಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
ಪ್ರಕರಣದ ತನಿಖೆಯನ್ನು ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಮಾರ್ಗದರ್ಶನದಲ್ಲಿ ಕೈಗೊಂಡಿದ್ದರು. ಕಾರ್ಯಾಚರಣೆಯಲ್ಲಿ ತನಿಖಾಧಿಕಾರಿಗಳಾದ ಲೋಕಾಯುಕ್ತ ಡಿವೈಎಸ್ಪಿ ಸಿ. ಮಧುಸೂದನ, ಪೊಲೀಸ್ ನಿರೀಕ್ಷಕ ಮಂಜುನಾಥ ಪಂಡಿತ್ ಪಿ.ಎನ್., ಬಸವರಾಜ ಹಳಬಣ್ಣನವರ, ದಾದಾವಲಿ ಕೆ.ಎಚ್, ಸಿಬ್ಬಂದಿಯಾದ ಸಿ.ಎಂ. ಬಾರ್ಕಿ, ಎಂ.ಕೆ. ನದಾಫ, ಬಿ.ಎಂ. ಕರ್ಜಗಿ, ಎಂ. ಕೆ. ಲಕ್ಷೇಶ್ವರ, ಆನಂದ ತಳಕಲ್ಲ, ಎಸ್.ಎನ್. ಕಡಕೋಳ, ಎಂ.ಬಿ. ಲಂಗೋಟಿ, ಬಿ.ಎಸ್. ಸಂಕಣ್ಣನವರ, ಎಂ.ಎಸ್. ಕೊಂಬಳಿ ಭಾಗವಹಿಸಿದ್ದರು.
ಈ ಸುದ್ದಿಯನ್ನೂ ಓದಿ | Sofia Qureshi: ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿ ಮನೆ ಮೇಲೆ ದಾಳಿ; ಸುಳ್ಳು ಸುದ್ದಿ ಹಬ್ಬಿಸಿದ ಯುವಕ!