Road Accident: ಭೀಕರ ರಸ್ತೆ ಅಪಘಾತ: ಕುಂಭಮೇಳದಿಂದ ಹಿಂತಿರುಗುತ್ತಿದ್ದ ರಾಯಚೂರು ವ್ಯಕ್ತಿ ದುರಂತ ಸಾವು!
ಮಹಾ ಕುಂಭಮೇಳದಿಂದ ಹಿಂತಿರುಗುವಾಗ ರಾಯಚೂರಿನ ವ್ಯಕ್ತಿ ರಾಜ್ಯಕ್ಕೆ ಮರಳುವ ವೇಳೆ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಮಧ್ಯಪ್ರದೇಶದ ಮೇಹೂರ್ ಬಳಿ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಮಹಾದೇವ್ ವಾಲೇಕರ್ ಎಂದು ಗುರುತಿಸಲಾಗಿದ್ದು,ರಾಯಚೂರಿನ ಚಂದ್ರಬಂಡಾ ಗ್ರಾಮದ ನಿವಾಸಿ ಎಂದು ಮೂಲಗಳು ತಿಳಿಸಿವೆ.

ಅಪಘಾತಕ್ಕೀಡಾದ ಕಾರು

ರಾಯಚೂರು: ಮಹಾ ಕುಂಭಮೇಳದಿಂದ(Mahakumbh) ಹಿಂತಿರುಗುವಾಗ ರಾಯಚೂರಿನ(Raichur) ವ್ಯಕ್ತಿ ರಾಜ್ಯಕ್ಕೆ ಮರಳುವ ವೇಳೆ ಭೀಕರ ರಸ್ತೆ ಅಪಘಾತದಲ್ಲಿ(Road Accident) ಸಾವನ್ನಪ್ಪಿದ್ದಾರೆ ಮಧ್ಯಪ್ರದೇಶದ(Madhyapradesh) ಮೇಹೂರ್ ಬಳಿ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿಯನ್ನು ಮಹಾದೇವ್ ವಾಲೇಕರ್ ಎಂದು ಗುರುತಿಸಲಾಗಿದ್ದು,ರಾಯಚೂರಿನ ಚಂದ್ರಬಂಡಾ ಗ್ರಾಮದ ನಿವಾಸಿ ಎಂದು ಮೂಲಗಳು ತಿಳಿಸಿವೆ.
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಕುಟುಂಬಸ್ಥರೊಂದಿಗೆ ತೆರಳಿದ್ದ ರಾಯಚೂರು ಮೂಲದ ವ್ಯಕ್ತಿಯೊಬ್ಬರು ಅಲ್ಲಿಂದ ಹಿಂತಿರುಗುವಾಗ ಮಧ್ಯಪ್ರದೇಶದ ಮೇಹೂರ್ ಹೆದ್ದಾರಿಯಲ್ಲಿ ಭಯಾನಕ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೈದರಾಬಾದ್ ಮೂಲದ ಕಾರನ್ನು ಸ್ಥಳೀಯ ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ:Road Accident: ಭೀಕರ ರಸ್ತೆ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ 10 ಭಕ್ತರ ದಾರುಣ ಸಾವು-19 ಜನರಿಗೆ ಗಂಭೀರ ಗಾಯ!
ಮಹಾದೇವ್ ವಾಲೇಕರ್ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿ ನಿಂತಿತ್ತು. ಕಾರಿನಲ್ಲಿದ್ದವರು ಕೆಳಗಡೆ ಇಳಿದಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಮಹಾದೇವ್ ಮೇಲೆ ಹೈದರಾಬಾದ್ ಮೂಲದ ಕಾರು ಹರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.