ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Mahakumbh 2025: ಮಹಾಕುಂಭಮೇಳದಲ್ಲಿ ‘ವೀರ ಕಂಬಳ’ ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಹಾಗೂ ನಿರ್ಮಾಪಕ ಅರುಣ್ ರೈ ತೊಡರ್ ಪುಣ್ಯಸ್ನಾನ

Mahakumbh 2025: ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿರುವ "ವೀರ ಕಂಬಳ" ಚಿತ್ರದ ನಿರ್ದೇಶಕ ಡಾ.ಎಸ್.ವಿ. ರಾಜೇಂದ್ರಸಿಂಗ್ ಬಾಬು ಹಾಗೂ ನಿರ್ಮಾಪಕ ಅರುಣ್ ರೈ ತೊಡರ್ ಅವರು ಇತ್ತೀಚಿಗೆ ಪ್ರಯಾಗರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಿ ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಕುಂಭಮೇಳದಲ್ಲಿ ‘ವೀರ ಕಂಬಳ’ ಚಿತ್ರ ನಿರ್ಮಾಪಕ, ನಿರ್ದೇಶಕರಿಂದ ಪುಣ್ಯಸ್ನಾನ

Profile Siddalinga Swamy Feb 24, 2025 5:50 PM

ಪ್ರಯಾಗ್‌ರಾಜ್‌: ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು (SV Rajendra Singh Babu) ಅವರ ನಿರ್ದೇಶನದಲ್ಲಿ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಅರುಣ್ ರೈ ತೊಡರ್ ಅವರ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ "ವೀರ ಕಂಬಳ" ಚಿತ್ರ (Veera Kambala Movie) ಅಪಾರ ವೆಚ್ಚದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿದೆ. ದಕ್ಷಿಣ ಕನ್ನಡದ ಪ್ರಸಿದ್ಧ ದೇಸಿ ಕ್ರೀಡೆ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಆದಿತ್ಯ, ಪ್ರಕಾಶ್ ರೈ, ರವಿಶಂಕರ್, ಶೋಭ್ ರಾಜ್, ರಾಧಿಕಾ ಚೇತನ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.

ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ (Mahakumbh 2025) ಈಗಾಗಲೇ 55 ಕೋಟಿ ಜನರು ಮಿಂದು ಪುನೀತರಾಗಿದ್ದಾರೆ. ಇದೀಗ ʼವೀರ ಕಂಬಳʼ ಚಿತ್ರದ ನಿರ್ದೇಶಕ ಡಾ.ಎಸ್.ವಿ. ರಾಜೇಂದ್ರಸಿಂಗ್ ಬಾಬು ಹಾಗೂ ನಿರ್ಮಾಪಕ ಅರುಣ್ ರೈ ತೊಡಾರ್ ಅವರು ಇತ್ತೀಚಿಗೆ ಪ್ರಯಾಗರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಿ ಪುಣ್ಯಸ್ನಾನ ಮಾಡಿದ್ದಾರೆ.

ದೇಶ ಸುಭಿಕ್ಷವಾಗಿರಲಿ. ಎಲ್ಲರಿಗೂ ಒಳ್ಳೆಯದಾಗಲಿ ಹಾಗೂ ಕನ್ನಡ - ತುಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ʼವೀರ ಕಂಬಳʼ ಚಿತ್ರ ಯಶಸ್ವಿಯಾಗಲಿ ಎಂದು ನಿರ್ಮಾಪಕರು ಹಾಗೂ ನಿರ್ದೇಶಕರು ದೇವರಲ್ಲಿ ಪ್ರಾರ್ಥಿಸಿದ್ದಾರೆ.