Mahakumbh Mela: ಮಹಾ ಕುಂಭಮೇಳಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಅಪಘಾತ; ರಾಜ್ಯದ ಇಬ್ಬರ ದುರ್ಮರಣ
Mahakumbh Mela: ಪ್ರಯಾಗರಾಜ್‌ನಿಂದ ಕಾಶಿಗೆ ತೆರಳುವಾಗ ಮಿರ್ಜಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಎಂಬುವವರು ಮೃತಪಟ್ಟಿದ್ದಾರೆ.


ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳಿ ವಾಪಸ್ ಬರುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರು ಹಾಗೂ ಮಂಡ್ಯದ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ರಾಮಕೃಷ್ಣ ಶರ್ಮ(31), ಅರುಣ್ ಶಾಸ್ತ್ರಿ(38) ಮೃತರು.
ಪ್ರಯಾಗರಾಜ್‌ನಿಂದ ಕಾಶಿಗೆ ತೆರಳುವಾಗ ಮಿರ್ಜಾಪುರದ ಬಳಿ ಲಾರಿ ಮತ್ತು ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಅವರಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ತಲೆಗೆ ತೀವ್ರವಾದ ಪೆಟ್ಟು ಬಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮ ಅವರು ಕೆಆರ್‌ಎಸ್ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದು, ತಂದೆ – ತಾಯಿಗೆ ಇವರು ಒಬ್ಬರೇ ಮಗ. ಇನ್ನು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನ ಕೆಆರ್‌ಎಸ್ ನಿವಾಸಿ ಅರುಣ್ ಶಾಸ್ತ್ರಿ ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ | Kumbhamela Stampede: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ-ಸಿಎಂ ಯೋಗಿ ಫಸ್ಟ್ ರಿಯಾಕ್ಷನ್
Mahakumbh Mela Stampede: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ; ಬೆಳಗಾವಿಯ ತಾಯಿ-ಮಗಳು ಸಾವು, ಹಲವರಿಗೆ ಗಾಯ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ (Mahakumbh Mela Stampede) ಬೆಳಗಾವಿ ಮೂಲದ ತಾಯಿ-ಮಗಳು ಮೃತಪಟ್ಟಿದ್ದಾರೆ. ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ ಮೃತರು.
ಮೌನಿ ಅಮಾವಾಸ್ಯೆ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಕೋಟ್ಯಂತರ ಜನ ತೆರಳಿದ್ದಾರೆ. ಮುಂಜಾನೆ ನದಿಯಲ್ಲಿ ಸ್ನಾನ ಮಾಡುವಾಗ ಕಾಲ್ತುಳಿತ ಸಂಭವಿಸಿ ಹಲವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ತಾಯಿ-ಮಗಳು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಳಗಾವಿಯಿಂದ ಸುಮಾರ 60 ಜನ ಕುಂಭಮೇಳಕ್ಕೆ ತೆರಳಿದ್ದರು. ಸಾಯಿರಥ ಟ್ರಾವೆಲ್ಸ್ ಮೂಲಕ ಇವರೆಲ್ಲಾ 3 ದಿನದ ಹಿಂದೆ ಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ್ದರು. ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ ಅವರ ಜತೆ ಹಲವರು ಗಾಯಗೊಂಡಿದ್ದು, ಅವರಿಗೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ಮಾಹಿತಿ ಸಂಗ್ರಹಿಸುತ್ತಿದೆ.