ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Mandya News: ಮಂಡ್ಯದಲ್ಲಿ ಅಮಾನವೀಯ ಕೃತ್ಯ; ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ

Mandya Assault Case: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ಘಟನೆ ನಡೆದಿದೆ. ಯುವತಿ ನಾಪತ್ತೆಗೆ ಕಾರಣವೆಂದು ಆರೋಪಿಸಿ ವ್ಯಕ್ತಿಯ ಮೇಲೆ ಐವರ ಗುಂಪು ಹಲ್ಲೆ ಮಾಡಿದೆ. ಈ ವೇಳೆ ದೊಡ್ಡ ಸೈಜುಗಲ್ಲು ಎತ್ತಿ ಹಾಕಿ ವ್ಯಕ್ತಿಯ ಕಾಲು ಮುರಿದಿದ್ದಾರೆ.

ಮಂಡ್ಯದಲ್ಲಿ ಅಮಾನವೀಯ ಕೃತ್ಯ; ವ್ಯಕ್ತಿಯ ಮೇಲೆ ಮನಸೋ ಇಚ್ಛೆ ಹಲ್ಲೆ

ಮಂಡ್ಯ ಜಿಲ್ಲೆ ಪಾಂಡವಪುರ ಸಮೀಪ ವ್ಯಕ್ತಿಯ ಮೇಲೆ ಹಲ್ಲೆ. -

Prabhakara R
Prabhakara R Feb 23, 2026 11:09 PM

ಮಂಡ್ಯ, ಫೆ. 23: ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ವ್ಯಕ್ತಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ (Mandya Assault Case) ನಡೆದಿದೆ. ಯುವತಿ ನಾಪತ್ತೆಗೆ ಕಾರಣವೆಂದು ಆರೋಪಿಸಿ ವ್ಯಕ್ತಿಯ ಮೇಲೆ ಐವರ ಗುಂಪು ಹಲ್ಲೆ ಮಾಡಿದೆ. ಕೈಮುಗಿದು ತಪ್ಪಾಯ್ತು ಎಂದರೂ ಬಿಡದೆ ಕಿರಾತಕರು ಸೈಜುಗಲ್ಲು ಎತ್ತಿ ಹಾಕಿ ವ್ಯಕ್ತಿಯ ಕಾಲು ಮುರಿದಿದ್ದಾರೆ. ಅಲ್ಲದೇ ಕೃತ್ಯವನ್ನು ವಿಡಿಯೋ ಕೂಡ ಮಾಡಿದ್ದಾರೆ. ಈ ಸಂಬಂಧ ಪಾಂಡವಪುರ ಠಾಣೆಯಲ್ಲಿ 14 ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪ್ರಕಾಶ್‌ ಹಲ್ಲೆಗೊಳಗಾದವರು. ಈತ ಫೆಬ್ರವರಿ 22ರಂದು ಮಧ್ಯಾಹ್ನ ಚಿನಕುರಳಿ ಕಡೆ ಬೈಕ್‌ನಲ್ಲಿ ನವೀನ್‌ ಎಂಬಾಗತನ ಜತೆ ಹೋಗುತ್ತಿದ್ದಾಗ ಎದುರುಗಡೆಯಿಂದ ಕಾರು ಮತ್ತು ಬೈಕ್‌ನಲ್ಲಿ ಬಂದಂತಹ ಗಿರೀಶ್, ಮಂಜು, ಜೀವನ್, ಶಶಿಕುಮಾರ, ಅಯ್ಯಪ್ಪ, ಮದನ್, ಮಾದಪ್ಪ, ರವಿ, ನಿಂಗಣ್ಣ, ಗಣೇಶ ಎನ್ನುವವರು ಕೈಯಲ್ಲಿ ದೊಣ್ಣೆ ಮತ್ತು ಕಲ್ಲನ್ನು ಹಿಡಿದುಕೊಂಡು ಬಂದು ಅಡ್ಡ ಹಾಕಿದ್ದಾರೆ.

ಕೂಡಲೇ ಬೈಕ್‌ನಲ್ಲಿದ್ದ ಇಬ್ಬರೂ ಕನಗನಹಳ್ಳಿ ಜಮೀನು ಕಡೆಯಿಂದ ಮರಸನಹಳ್ಳಿ ಕಡೆಗೆ ಓಡಲು ಮುಂದಾಗಿದ್ದಾರೆ. ಆದರೆ ಆರೋಪಿಗಳು ಅವರನ್ನು ಬೆನ್ನತ್ತಿ ಹೋಗಿ ಥಳಿಸಿದ್ದಾರೆ. ಈ ವೇಳೆ ಪ್ರಕಾಶ್‌ ಕಾಲಿನ ಮೇಲೆ ಕಲ್ಲು ಎತ್ತಿ ಹಾಕಿ ಕ್ರೌರ್ಯ ಮೆರೆದಿದ್ದಾರೆ. ನಂತರ ಅಲ್ಲಿಯೇ ಇದ್ದ ಸಾರ್ವಜನಿಕರು ಇಬ್ಬರು ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಹಲ್ಲೆಗೆ ಸಂಬಂಧಿಸಿ 14 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಘೋರ ದುರಂತ; ಆಂಧ್ರ ಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ ನಾಲ್ವರ ಸಾವು

ಉಡುಪಿಯಲ್ಲಿ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ!

ಉಡುಪಿ: ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಕಲ್ಸಂಕ ಜಂಕ್ಷನ್‌ನಲ್ಲಿ ಯುವಕನೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗದಗ ಮೂಲದ ಯುವಕ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದ ಎನ್ನಲಾಗಿದೆ.

ಸಂಚಾರ ದಟ್ಟಣೆಯ ನಡುವೆ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಸ್ಥಳದಲ್ಲಿದ್ದ ಪೊಲೀಸರ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಪೊಲೀಸರು ಯುವಕನನ್ನು ಮನವೊಲಿಸಿ ಗದಗಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.