ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ನನಗೆ ಕನಕಪುರದಷ್ಟೇ ಮಂಡ್ಯದ ಏಳೂ ಕ್ಷೇತ್ರಗಳು ಮುಖ್ಯ: ಡಿ.ಕೆ.ಶಿವಕುಮಾರ್

DK Shivakumar: ನನಗೆ ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ, ಅದೇ ರೀತಿ ಮಂಡ್ಯ ಜಿಲ್ಲೆಯ ಪ್ರತಿಯೊಂದು ಕ್ಷೇತ್ರವೂ ಮುಖ್ಯ. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇದಿನ ಬರುತ್ತದೆ ಎಂದಿದ್ದರು. ಅವರು ಹೇಳಿದ್ದ ಅಚ್ಛೇದಿನ, ಖಾತೆಗೆ 15 ಲಕ್ಷದ ವಿಚಾರ ಏನಾಯ್ತು ಎಂದು ನೀವೆಲ್ಲರೂ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಕೇಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ನನಗೆ ಕನಕಪುರದಷ್ಟೇ ಮಂಡ್ಯದ ಏಳೂ ಕ್ಷೇತ್ರಗಳು ಮುಖ್ಯ: ಡಿ.ಕೆ.ಶಿವಕುಮಾರ್

Profile Siddalinga Swamy Jul 28, 2025 5:38 PM

ಮದ್ದೂರು: ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯದ ಏಳು ಕ್ಷೇತ್ರಗಳು ಅಷ್ಟೇ ಮುಖ್ಯ. ಮದ್ದೂರಿನ ಶಾಸಕ ಉದಯ್ ಅವರ ಬೆನ್ನಿಗೆ ಇಡೀ ಸರ್ಕಾರ ನಿಂತಿದೆ. ಕ್ಷೇತ್ರದ ಜನರ ಋಣ ತೀರಿಸಲು 1146 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಮದ್ದೂರಿನಲ್ಲಿ ಸೋಮವಾರ ನಡೆದ 1146 ಕೋಟಿ ರೂ. ಮೊತ್ತದ ವಿವಿಧ ಇಲಾಖೆಗಳ ಹಲವು ಯೋಜನೆಗಳ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾವು ಇಂದು ನಿಮ್ಮಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ಈ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಉದಯ್ ಅವರನ್ನು ಗೆಲ್ಲಿಸಿ ಜಿಲ್ಲೆಯ 7 ಸ್ಥಾನಗಳ ಪೈಕಿ 6ರಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದೀರಿ. ಆ ಮೂಲಕ ರಾಜ್ಯದಲ್ಲಿ 136 ಸಂಖ್ಯಾಬಲದ ಬಲಿಷ್ಠ ಸರ್ಕಾರ ರಚನೆಗೆ ಸಹಕಾರ ನೀಡಿರುವ ನಿಮ್ಮ ಋಣ ತೀರಿಸಲು ನಾವಿಲ್ಲಿಗೆ ಬಂದಿದ್ದೇವೆ ಎಂದು ಹೇಳಿದರು.

ನೀರಾವರಿ ಇಲಾಖೆಯ ಕಚೇರಿಯನ್ನು ನಾನು ಆರಂಭಿಸುತ್ತಿದ್ದೇನೆ. ಮಳವಳ್ಳಿವರೆಗೂ ನೀರು ಹರಿಸಿ, ಮದ್ದೂರಿನ ಕಾಲುವೆಗಳ ಅಭಿವೃದ್ಧಿ ದೃಷ್ಟಿಯಿಂದ ಸುಮಾರು 500 ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ನೀಡಿದ್ದೇವೆ. ಚೆಲುವರಾಯಸ್ವಾಮಿ ಅವರು ಕೂಡ ಸಾಕ್ಷಿಗುಡ್ಡೆ ಬಿಟ್ಟು ಹೋಗಲು, ರೈತರ ಮಕ್ಕಳಿಗಾಗಿ ಕೃಷಿ ವಿವಿ ತರಲು ಮುಂದಾಗಿದ್ದಾರೆ. ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ವಿವಿಧ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಜಿಲ್ಲೆಯಲ್ಲಿ ಅತಿಹೆಚ್ಚು ಶಾಸಕರು ಗೆದ್ದಾಗ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ ಎಂದರು.

ಪಕ್ಷದ ಕಚೇರಿಗಾಗಿ ಸ್ವಂತ ಆಸ್ತಿ ಬಿಟ್ಟುಕೊಟ್ಟ ಉದಯ್ ಅವರಿಗೆ ಅಭಿನಂದನೆ

ನಾವು ಯೋಗಿ ಎಂದು ಕರೆಸಿಕೊಳ್ಳುವುದಕ್ಕಿಂತ ಉಪಯೋಗಿ ಎಂದು ಕರೆಸಿಕೊಳ್ಳುವುದು ಬಹಳ ಮುಖ್ಯ. ಸ್ಥಳೀಯ ಶಾಸಕ ಉದಯ್ ಅವರು ಕ್ಷೇತ್ರದಲ್ಲಿ ಎಲ್ಲಾ ಇಲಾಖೆ ಕೆಲಸಗಳನ್ನು ಮಾಡುವ ಮೂಲಕ ನಿಮ್ಮ ಸೇವೆ ಮಾಡುತ್ತಿದ್ದಾರೆ. ಹದಿನೈದು ದಿನಗಳ ಹಿಂದೆ ನಾನು ಇಲ್ಲಿನ ತಾಲೂಕು ಕಚೇರಿಗೆ ಬಂದಿದ್ದೆ. ನಮ್ಮ ಶಾಸಕ ಉದಯ್ ಅವರು 2 ಕೋಟಿ ಮೊತ್ತದ ನಿವೇಶನವನ್ನು ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನೀಡಿದ್ದಾರೆ. ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಂಶು, ಇಲ್ಲಿನ ಶಾಸಕರಾದ ಉದಯ್, ಶಿರಗುಪ್ಪ ಶಾಸಕರಾದ ನಾಗರಾಜ್, ಸಚಿವ ಸಂತೋಷ್ ಲಾಡ್, ಗದಗ ಶಾಸಕ ಜಿ.ಎಸ್ ಪಾಟೀಲ್, ಸಚಿವರಾದ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ರಾಜ್ಯದಲ್ಲಿ ಆರು ಜನ ತಮ್ಮ ಆಸ್ತಿಯನ್ನು ಕಾಂಗ್ರೆಸ್ ಕಚೇರಿಗಾಗಿ ದಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಿಮ್ಮ ಶಾಸಕ ಉದಯ್ ಅವರಿಗೆ ನಮನ ಅರ್ಪಿಸುತ್ತೇನೆ ಎಂದರು.

ನನಗೆ ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ, ಅದೇ ರೀತಿ ಮಂಡ್ಯ ಜಿಲ್ಲೆಯ ಪ್ರತಿಯೊಂದು ಕ್ಷೇತ್ರವೂ ಮುಖ್ಯ. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಅಚ್ಛೇದಿನ ಬರುತ್ತದೆ ಎಂದಿದ್ದರು. ಅವರು ಹೇಳಿದ್ದ ಅಚ್ಛೇದಿನ, ಖಾತೆಗೆ 15 ಲಕ್ಷದ ವಿಚಾರ ಏನಾಯ್ತು ಎಂದು ನೀವೆಲ್ಲರೂ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಕೇಳಬೇಕು ಎಂದು ಅವರು ಹೇಳಿದರು.

ಜೆಡಿಎಸ್ ನಾಯಕರು ಸುಮ್ಮನೆ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ

ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ಇನ್ನು ಹಲವು ಕಾರ್ಯಕ್ರಮ ರೂಪಿಸುತ್ತಿದ್ದೇವೆ. ನಮ್ಮ ಸಚಿವರುಗಳು ತಮ್ಮ ತಮ್ಮ ಇಲಾಖೆಗಳ ಜವಾಬ್ದಾರಿ ವಹಿಸಿಕೊಂಡ ಬಳಿಕ ಬಡವರ ಬದುಕಿನಲ್ಲಿ ಸುಧಾರಣೆ ತರಲು ಕಾರ್ಯಕ್ರಮ ರೂಪಿಸಿದ್ದಾರೆ. ಎಂಎಲ್‌ಸಿಗಳಾದ ದಿನೇಶ್ ಗೂಳಿಗೌಡ, ಮಧುಮಾದೇಗೌಡ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯ ಜೆಡಿಎಸ್ ನಾಯಕರಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ನೀವು ನಿಮ್ಮ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ. ಈಗೇನಿದ್ದರೂ ಕಾಂಗ್ರೆಸ್ ಕಾಲ. ಶಿವಪುರ ಸೌಧದಲ್ಲಿ ಹೇಗೆ ರಾಷ್ಟ್ರಧ್ವಜ ಹಾರುತ್ತಿದೆಯೋ ಅದೇ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧ್ವಜ ನಿರಂತರವಾಗಿ ಹಾರಾಡಲಿದೆ. ನೀವು ನಿಮ್ಮ ಬದುಕನ್ನು ಗಮನದಲ್ಲಿಟ್ಟುಕೊಂಡು ಆಲೋಚಿಸಿ ಎಂದು ಹೇಳಿದರು. ‌

ಈ ಸುದ್ದಿಯನ್ನೂ ಓದಿ | CM Siddaramaiah: ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ: ಸಿಎಂ ಸವಾಲು

ಮದ್ದೂರಿಗೆ ದೊಡ್ಡ ಇತಿಹಾಸವಿದೆ

ಮದ್ದೂರಿಗೆ ದೊಡ್ಡ ಇತಿಹಾಸವಿದೆ. ಬ್ರಿಟೀಷರ ಆಳ್ವಿಕೆ ಸಮಯದಲ್ಲಿ ಎಸ್.ಎಂ ಕೃಷ್ಣ ಅವರ ತಂದೆ ಮಲ್ಲಯ್ಯ ಅವರು ಮೈಸೂರು ಆಳ್ವಿಕೆಯಲ್ಲಿ ಜನಪ್ರತಿನಿಧಿಯಾಗಿ ಆಳ್ವಿಕೆ ಮಾಡಿದ್ದರು. ಇದು ದೇಶದ ಸ್ವಾತಂತ್ರ್ಯ ಹೋರಾಟದ ನೆಲ. ಕೆಂಗಲ್ ಹನುಮಂತ್ಯ ಅವರ ಕಾಲದಲ್ಲಿ ಕಟ್ಟಿದ ಪ್ರಜಾಸೌಧವನ್ನು ಕಟ್ಟಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ ನೆಲ ಇದು. ಈ ಜಿಲ್ಲೆಯಿಂದ ಅನೇಕ ನಾಯಕರು ಬೆಳೆದು ಬಂದಿದ್ದಾರೆ. ಈ ಭೂಮಿಯಲ್ಲಿ ನಾನು ಎಸ್.ಎಂ ಕೃಷ್ಣ ಅವರನ್ನು ನೆನೆಯುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.