ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

N Chaluvarayaswamy: ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್. ಅಂಬೇಡ್ಕರ್: ಎನ್. ಚಲುವರಾಯಸ್ವಾಮಿ

N Chaluvarayaswamy: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸರ್ವಕಾಲಕ್ಕೂ ಸರ್ವರೂ ಒಪ್ಪುವಂತಹ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್. ಅಂಬೇಡ್ಕರ್: ಎನ್. ಚಲುವರಾಯಸ್ವಾಮಿ

Profile Siddalinga Swamy Apr 14, 2025 9:25 PM

ಮಂಡ್ಯ: ಇಡೀ ವಿಶ್ವವೇ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಅವರ ಸಾಧನೆ ಗುರುತಿಸಿ ಇಬ್ಬರೂ ವಿಶ್ವ ನಾಯಕರು ಎಂದು ಒಪ್ಪಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ತಿಳಿಸಿದರು. ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಅವರ 134ನೇ ಜಯಂತಿಯ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಬೋಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸರ್ವಕಾಲಕ್ಕೂ ಸರ್ವರೂ ಒಪ್ಪುವಂತಹ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ತಿಳಿಸಿದರು.

ಡಾ. ಬಿ.ಆರ್ ಅಂಬೇಡ್ಕರ್ ರಚಿಸಿದ ಭಾರತೀಯ ಸಂವಿಧಾನವನ್ನು ಅತ್ಯಂತ ಶ್ರೇಷ್ಠ ಸಂವಿಧಾನವೆಂದು ವಿಶ್ವವೇ ಹೇಳಿತು, ಸೂರ್ಯ ಚಂದ್ರ ಇರುವವರೆಗೂ ಅವರು ನೀಡಿರುವ ಕೊಡುಗೆಗಳು ಮತ್ತು ಸಾಧನೆ ಅಜರಾಮರ, ತುಳಿತಕ್ಕೊಳಗಾದವರಿಗೆ ಶಕ್ತಿ ತುಂಬುವ ಕೆಲಸವನ್ನು ಬಾಬಾ ಸಾಹೇಬ್ ಮಾಡಿದ್ದಾರೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಜಾರಿಗೆ ತಂದಿದ್ದು, 2024-25ನೇ ಸಾಲಿನಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಮತ್ತು ಟಿ.ಎಸ್.ಪಿ ಯೋಜನೆಯಡಿ 100.26 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಜಿಲ್ಲೆಯಲ್ಲಿ ಬಾಬು ಜಗಜೀವನ್ ರಾಂ ಭವನ ನಿರ್ಮಾಣ ಮಾಡಲು 3.85 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ವಿದ್ಯಾರ್ಥಿ ನಿಲಯದ ಕುಂದು ಕೊರತೆಗಳ ತಿಳಿಸಲು ಸಹಾಯವಾಣಿ ಸಂಖ್ಯೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.‌

ಈ ಸುದ್ದಿಯನ್ನೂ ಓದಿ | CM Siddaramaiah: ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಪತ್ರಕರ್ತ ದೀಪಕ್ ವಿಶೇಷ ಉಪನ್ಯಾಸಕರಾಗಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಮಂಡ್ಯ ವಿಧಾನಸಭಾ ಶಾಸಕ ಪಿ. ರವಿಕುಮಾರ್, ಮೈ ಶುಗರ್ ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷ ಸಿ.ಡಿ. ಗಂಗಾಧರ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಉಪಸ್ಥಿತರಿದ್ದರು.