ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ; ಮಣಿಪಾಲ ಆಸ್ಪತ್ರೆಗೆ ದಾಖಲು

ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡರು ಪ್ರಯಾಣಿಸುತ್ತಿದ್ದ ಕಾರು ಮಂಡ್ಯದ ಬೊಂತೆಕೊಪ್ಪಲು ಬಳಿ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಸುರೇಶ್ ಗೌಡರ ಕೈಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಂಗ್ರಹ ಚಿತ್ರ

ಮಂಡ್ಯ: ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Ex-MLA Suresh Gowda) ಪ್ರಯಾಣಿಸುತ್ತಿದ್ದ ಕಾರು ಮಂಡ್ಯದ ಬೊಂತೆಕೊಪ್ಪಲು ಬಳಿ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಸುರೇಶ್ ಗೌಡರ ಕೈಗೆ ಹಾಗೂ (Car Accident) ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ಕೈಗೆ ಪೆಟ್ಟಾಗಿದೆ. ಕಾರ್ ಚಾಲಕನಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರ್ ಭಾಗಶಃ ಜಖಂಗೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಕಾರು ಪಲ್ಟಿಯಾದ ತಕ್ಷಣ ಮಾಜಿ ಶಾಸಕರ ಗನ್‌ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುರೇಶ್ ಗೌಡರು ಕಾರ್ಯಕರ್ತರೊಬ್ಬರ ಮದುವೆ ಸಂಭ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಸಂದರ್ಭದಲ್ಲಿ ಕಾರ್ ಅಪಘಾತಕ್ಕೊಳಗಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಾದ ಸುರೇಶ್ ಗೌಡರು ಮತ್ತು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪ್ರಮಾಣದ ಗಾಯಗಳಾಗುವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 12 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳು ಸುರೇಶ್ ಗೌಡ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಮಾಡಲು ಸಿಸಿಟಿವಿ ದೃಶ್ಯಗಳು, ಸ್ಥಳೀಯರ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ರಸ್ತೆಯಲ್ಲಿ ದೊಡ್ಡ ಗುಂಡಿ ಅಥವಾ ವೇಗದಿಂದ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಅಪಘಾತ ಸ್ಥಳದಲ್ಲಿಯೇ ಯುವಕ ಸಾವು

ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲಿಯೇ ಮೃತಪಟ್ಟು ಮತ್ತೊಬ್ಬ ಯುವಕ ಗಂಭೀರವಾಗಿರುವ ಘಟನೆ ಪಾವಗಡ ಪಟ್ಟಣದ ಕಣಿವೆ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಸಮೀಪ ನಡೆದಿದೆ. ಘಟನೆಯಲ್ಲಿ ಪಟ್ಟಣದ ಶಾಂತಿನಗರದ ನಿವಾಸಿ ಭಾಸ್ಕರ್ (24) ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದು ಈತನ ಜೊತೆಗಿದ್ದ ಮತ್ತೊಬ್ಬ ಸಾಗರ್ ಎನ್ನುವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಈತನನ್ನು ಬೆಂಗಳೂರಿಗೆ ರವಾನಿಸಲಾಗಿದೆ.

ತುಮಕೂರು ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿ ಯಾವುದೇ ಸಿಗ್ನಲ್ ನೀಡದೆ ಇರುವುದರಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಾಗಿದೆ.

Vishakha Bhat Heggar

View all posts by this author