ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Gruha Lakshmi Scheme: ಗೃಹಲಕ್ಷ್ಮಿ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡಿದ ಗೃಹಿಣಿ

Gruha Lakshmi Scheme: ಮಂಡ್ಯ ಜಿಲ್ಲೆಯ ಗೃಹಿಣಿಯೊಬ್ಬರು, ಗೃಹ ಲಕ್ಷ್ಮಿ ಯೋಜನೆಯಲ್ಲಿ ಬಂದ ಹಣ ಕೂಡಿಟ್ಟು, ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿರುವುದು ಕಂಡುಬಂದಿದೆ. ಇವರ ಸಮಾಜ ಸೇವೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಗೃಹಲಕ್ಷ್ಮಿ ಹಣದಲ್ಲಿ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡಿದ ಗೃಹಿಣಿ

Profile Prabhakara R Feb 22, 2025 9:49 PM

ಮಂಡ್ಯ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಸಾಕಷ್ಟು ನೆರವಾಗುತ್ತಿದೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯಿಂದ (Gruha Lakshmi Scheme) ಮಹಿಳೆಯರಿಗೆ ಬಹಳ ಅನುಕೂಲವಾಗುತ್ತಿದ್ದು, ಇದರಿಂದ ಬಂದ ಹಣವನ್ನು ಹಲವರು ಸದುದ್ದೇಶಗಳಿಗೆ ಖರ್ಚು ಮಾಡುತ್ತಿರುವುದನ್ನು ಕಾಣುತ್ತಿದ್ದೇವೆ. ಅದೇ ರೀತಿ ಇದೀಗ ಮಂಡ್ಯ ಜಿಲ್ಲೆಯ ಗೃಹಿಣಿಯೊಬ್ಬರು, ಗೃಹ ಲಕ್ಷ್ಮಿ ಯೋಜನೆಯಲ್ಲಿ ಬಂದ ಹಣ ಕೂಡಿಟ್ಟು, ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿರುವುದು ಕಂಡುಬಂದಿದೆ.

ಹೌದು, ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಗೃಹಿಣಿ, ತಮ್ಮೂರಿನ ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್ ಉಡುಗೊರೆಯಾಗಿ ನೀಡಿದ್ದು, ಅವರ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲಿನ ವಿಜಯಲಕ್ಷ್ಮೀ ಅವರು, ಸರ್ಕಾರಿ ಶಾಲೆಗೆ ಫಿಲ್ಟರ್‌ ನೀಡಿದವರು. ಇವರ ಈ ಸಮಾಜ ಸೇವೆಗೆ ಪತಿ ರಂಗನಾಥ್ ಕೂಡ ಸಾಥ್ ನೀಡಿದ್ದು, ಹೆಚ್ಚುವರಿ ಹಣವನ್ನು ಬರಿಸಿದ ಅವರು ಫಿಲ್ಟರ್ ಖರೀದಿಸಲು ಸಹಕರಿಸಿದ್ದಾರೆ.

ಶಾಲೆಗೆ ಸುಮಾರು 50 ಸಾವಿರ ರೂಪಾಯಿ ಮೌಲ್ಯದ ಫಿಲ್ಟರ್ ಅನ್ನು ಮಹಿಳೆ ಕೊಡುಗೆಯಾಗಿ ನೀಡಿದ್ದಾರೆ. ಇವರ ಸಾಮಾಜಿಕ ಸೇವೆಗೆ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಧನ್ಯವಾದ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | KPSC Group B Exam: ಕೆಪಿಎಸ್‌ಸಿ ಗ್ರೂಪ್ ‘ಬಿʼ ಹುದ್ದೆ ನೇಮಕಾತಿ ಪರೀಕ್ಷೆ: ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಡಿಸಿ ಸೂಚನೆ

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್‌ ನ್ಯೂಸ್:‌ 1 ವಾರದಲ್ಲಿ ಖಾತೆಗೆ ಹಣ ಜಮಾ

lakshmi hebbalkar

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)‌ ತಿಳಿಸಿದ್ದಾರೆ. ‌ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Honnavar News: ನಾಳೆಯಿಂದ ಹೊನ್ನಾವರದ ಗುಣವಂತೆಯಲ್ಲಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ವಿರೋಧ ಪಕ್ಷದವರಿಗೆ ಮಾತನಾಡುವುದನ್ನು ಬಿಟ್ಟರೆ ಬೇರೇನೂ ಬರುವುದಿಲ್ಲ.‌ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ನಮ್ಮ ಯೋಜನೆಗಳನ್ನೇ ಕಾಪಿ ಮಾಡಿಕೊಂಡು ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದರು ಎಂದು ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.