Kannada sahitya sammelana: ಸಾಹಿತ್ಯ, ಸಂಸ್ಕೃತಿಯ ಸಂಬಂಧ ಸಮಾಜಕ್ಕೆ ದೊರೆತರೆ ವಿಶೇಷ ಪರಿಣಾಮ: ಡಾ. ಗೊ.ರು.ಚನ್ನಬಸಪ್ಪ

Kannada sahitya sammelana: ಮಂಡ್ಯದಲ್ಲಿ‌ಜರುಗಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪ ಮಾತನಾಡಿದ್ದಾರೆ.

Profile Prabhakara R December 22, 2024
ಮಂಡ್ಯ: ಸಾಹಿತ್ಯ, ಸಂಸ್ಕೃತಿಯ ಸಂಬಂಧ ಸಮಾಜಕ್ಕೆ ದೊರೆತರೆ ವಿಶೇಷ ಪರಿಣಾಮ ಬೀರುತ್ತದೆ. ಇಲ್ಲಿ ಬಹಳ ಸುಗಮವಾಗಿ ಸಮ್ಮೇಳನ ಜರುಗಿದೆ. ಸಾಮಾನ್ಯವಾಗಿ ಊಟ, ವಸತಿ ಬಗ್ಗೆ ದೂರು ಬರುತ್ತವೆ. ಆದರೆ ಇಲ್ಲಿ ಅದ್ಯಾವುದು ಕೇಳಲಿಲ್ಲ. ಸಾಹಿತ್ಯ ಕಾರ್ಯಕ್ರಮಕ್ಕೆ ಇಷ್ಟೊಂದು ಜನ ಸೇರುವುದು ಅಪರೂಪ ಎಂದು ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ಮಂಡ್ಯದಲ್ಲಿ‌ಜರುಗಿದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾಮಾನ್ಯವಾಗಿ ಇಂತಹ ಸಮ್ಮೇಳಗಳಲ್ಲಿ ಊಟ, ವಸತಿ ಬಗ್ಗೆ ಒಂದಷ್ಟು ದೂರುಗಳು ಬರುತ್ತವೆ. ಆದರೆ, ಇಲ್ಲಿ ಅಂತಹ ದೂರುಗಳಿಲ್ಲದೆ ಸಮ್ಮೇಳನ ನಡೆದಿರುವುದು ಸಂತಸದ ವಿಚಾರ. ಇನ್ನು ಸಮ್ಮೇಳನದಲ್ಲಿ ಈ ರೀತಿಯ ಜನಸಂದಣಿ ಸೇರಿರುವುದು ನೋಡಿದರೆ ತುಂಬಾ ಆಶ್ಚರ್ಯ ಆಗುತ್ತದೆ. ಸಾಹಿತ್ಯ ಕಾರ್ಯಕ್ರಮಕ್ಕೆ ಇಷ್ಟೊಂದು ಜನ ಸೇರುವುದು ಅಪರೂಪದ ಸಂಗತಿ ಎಂದು ತಿಳಿಸಿದರು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಮಾತನಾಡಿ, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡಿರುವ ನಿರ್ಣಯಗಳನ್ನು ಅನುಷ್ಠಾನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ನೆಲ, ಜಲ, ಭಾಷೆ ಉಳಿವಿಗೆ ಸರ್ಕಾರ ಸದಾ ಬದ್ಧ ಎಂದರು. ಕಳೆದ ಮೂರು ದಿನಗಳಲ್ಲಿ 6 ಲಕ್ಷಕ್ಕೂ ಅಧಿಕ ಜನರು ಸಮ್ಮೇಳನಕ್ಕೆ ಆಗಮಿಸಿದ್ದಾರೆ. ಇದಲ್ಲದೇ 18 ದೇಶಗಳಿಂದ 200ಕ್ಕೂ ಅಧಿಕ ಕನ್ನಡ ಪ್ರೇಮಿಗಳು ಆಗಮಿಸಿದ್ದು ವಿಶೇಷ. ಸಮ್ಮೇಳನಾಧ್ಯಕ್ಷರ ಆಯ್ಕೆ, ಗೋಷ್ಠಿ, ಕಾರ್ಯಕ್ರಮಗಳು ಜನರ ಮೆಚ್ಚುಗೆ ಗಳಿಸಿವೆ ಎಂದು ಹೇಳಿದರು. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ವೈಜ್ಞಾನಿಕ ಪ್ರಗತಿ ನಡುವೆ ಭಾಷೆ ಉಳಿಸುವ ಸವಾಲಿದೆ. ಭಾಷೆಯ ಮೇಲಿನ ಅನ್ಯ ಭಾಷೆಗಳ ಏರಿಕೆ, ಪರಿಣಾಮಗಳ ಬಗ್ಗೆ ಆತಂಕವಿದೆ. ಆದರೆ ನಮ್ಮ ಸಂಸ್ಕೃತಿ, ಭಾಷೆ ಉಳಿಸುವ ನಿಟ್ಟಿನಲ್ಲಿ ಸಮ್ಮೇಳನ ಸಹಕಾರಿಯಾಗಲಿದೆ. ಗ್ರಾಮೀಣ ಮಕ್ಕಳು ನಗರ ಪ್ರದೇಶದ ಮಕ್ಕಳೊಂದಿಗಿನ ಪೈಪೋಟಿ ತಪ್ಪಿಸಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಯಿತು. ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಆರಂಭಿಸಲಾಯಿತು ಎಂದರು. ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕೇವಲ ಸಮ್ಮೇಳನ ಮಾಡಿದರೆ ಸಾಲದು. ಸಮ್ಮೇಳನದ ನಿರ್ಣಯಗಳನ್ನು ಅನುಷ್ಠಾನಕ್ಕೆ ಬರುವ ರೀತಿಯಲ್ಲಿ ನೋಡಿಕೊಳ್ಳುವ ಕೆಲಸ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿದೆ. ಇಲ್ಲಿನ ನಿರ್ಣಯಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಬೇಕು. ಅನುಷ್ಠಾನಕ್ಕೆ ಬಂದ ನಿರ್ಣಯಗಳು ಎಷ್ಟು ಎಂಬುದನ್ನು ಬಳ್ಳಾರಿ ಸಾಹಿತ್ಯ ಸಮ್ಮೇಳನದಲ್ಲಿ ಘೋಷಿಸಬೇಕು ಎಂದರು. ಹಿರಿಯ ಸಾಹಿತಿ ಡಾ. ಸಿ.ಪಿ.ಕೃಷ್ಣಕುಮಾರ್ ಅವರು ಸಮಾರೋಪದ ಭಾಷಣ ಮಾಡಿದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಸ್ವಾಮೀಜಿ, ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಅವಧೂತ ಶ್ರೀ ವಿನಯ್ ಗುರೂಜಿ ಶುಭನುಡಿಗಳನ್ನಾಡಿದರು. ಕೆಆರ್‌ಎಸ್, ಮೈಸೂರಿನಲ್ಲಿ ಐಐಟಿ ತೆರೆಯುವಂತೆ ಶಾಸಕ ದಿನೇಶ್ ಗೂಳಿಗೌಡ ಮನವಿ ಕೆಆರ್‌ಎಸ್ ಅಥವಾ ಮೈಸೂರು ಭಾಗದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ತೆರೆಯುವಂತೆ ಶಾಸಕ ದಿನೇಶ್ ಗೂಳಿಗೌಡ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು. ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದಿನೇಶ್ ಗೌಡ ಅವರು ಜಿಲ್ಲೆಯಲ್ಲಿ ಐಐಟಿ ತೆರೆಯುವ ಬಗ್ಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ದಿನೇಶ್ ಗೂಳಿಗೌಡ ಅವರ ಮನವಿ ಮೇರೆಗೆ ಕೆಆರ್‌ಎಸ್ ಅಥವಾ ಮೈಸೂರು ಭಾಗದಲ್ಲಿ ಐಐಟಿ ತೆರೆಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಸಮಾರಂಭದ ಬಳಿಕ ಮಾತನಾಡಿದ ದಿನೇಶ್ ಗೂಳಿಗೌಡ ಅವರು, ಕೆಆರ್‌ಎಸ್ ಅಥವಾ ಮೈಸೂರು ಭಾಗದಲ್ಲಿ ಐಐಟಿ ಸ್ಥಾಪನೆ ಆಗಬೇಕು ಎಂಬುದು ನಮ್ಮ ಇಂಗಿತ. ಹೀಗಾಗಿ ಈ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ. ಜಿಲ್ಲೆಯಲ್ಲಿ ಐಐಟಿ ತೆರೆಯುವ ಕುರಿತು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಈ ಸುದ್ದಿಯನ್ನೂ ಓದಿ | Kannada Sahitya Sammelana: ಕನ್ನಡ ಶಾಲೆಗಳನ್ನು ಪ್ರೋತ್ಸಾಹಿಸುವಲ್ಲಿ ವಿಫಲರಾಗಿದ್ದೇವೆ: ಎಚ್‌ಡಿಕೆ ವಿಷಾದ ಮೂರು ದಿನಗಳ ಸಮ್ಮೇಳನಕ್ಕೆ ಆರು ಲಕ್ಷ ಜನ ಸೇರಿದ್ದು ದಾಖಲೆ ಮಂಡ್ಯ: ಸತತ ಮೂರು ಬಾರಿ ಮುಂದೆ ಹೋಗಿ ಮಂಡ್ಯದಲ್ಲೇ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವಿವಾದ, ಗೊಂದಲ, ಕನ್ನಡ ಮನಸುಗಳ ಸಂಭ್ರಮ, ಸಕ್ಕರೆ ನಾಡಿನ ಮಂಡ್ಯದ ಜನರ ಅಕ್ಕರೆಯ ನಡುವೆ ಮುಕ್ತಾಯಗೊಂಡಿತು. ಮೂರು ದಿನಗಳ ಕಾಲ ಅಂದಾಜು ಆರು ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗಿ ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು ಎನ್ನುವ ಕುವೆಂಪು ಸಾಲುಗಳಂತೆ ಅಭಿಮಾನ ಮೆರೆದರು. ಊಟದ ಸಂಸ್ಕೃತಿಯ ಹಕ್ಕುಗಳ ಬೇಡಿಕೆ, ವಿವಾದದ ನಡುವೆಯೇ ಕನ್ನಡ ಸಮ್ಮೇಳನಕ್ಕೆ ತೆರೆ ಬಿದ್ದಿತು. ಮುಂದಿನ ಸಮ್ಮೇಳನ ಕರ್ನಾಟಕದ ಗಡಿ ನಾಡು ಬಳ್ಳಾರಿಯಲ್ಲಿ ಎನ್ನುವ ಘೋಷಣೆಯೊಂದಿಗೆ ಕನ್ನಡದ ಅಭಿಮಾನಿಗಳು ಊರಿನತ್ತ ಹೆಜ್ಜೆ ಹಾಕಿದರು.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ