ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Dr. K.Annadani: ಜೆಡಿಎಸ್‌ ಮಾಜಿ ಶಾಸಕ ಅನ್ನದಾನಿ ವಿರುದ್ಧ ಅಕ್ರಮ ಸಂಬಂಧ ಆರೋಪ; ಮಹಿಳೆಯ ಪತಿಯಿಂದ ಎಚ್‌ಡಿಕೆಗೆ ದೂರು

ನನ್ನ ಸಂಸಾರ ಹಾಳಾಗಲು ಮಾಜಿ ಶಾಸಕ ಡಾ.ಕೆ. ಅನ್ನದಾನಿ ಅವರೇ ಕಾರಣ, ದಯವಿಟ್ಟು ನನಗೆ ನ್ಯಾಯ ಕೊಡಿಸಿ ಎಂದು ವ್ಯಕ್ತಿಯೊಬ್ಬರು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದಾರೆ. ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮಾಜಿ ಶಾಸಕರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ದೂರುದಾರ ಆರೋಪಿಸಿದ್ದಾರೆ.

ಮಳವಳ್ಳಿ ಜೆಡಿಎಸ್‌ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮತ್ತು ದೂರುದಾರ

ಮಂಡ್ಯ: ಜಿಲ್ಲೆಯ ಮಳ್ಳವಳ್ಳಿ ಜೆಡಿಎಸ್‌ ಮಾಜಿ ಶಾಸಕ ಡಾ. ಕೆ. ಅನ್ನದಾನಿ (Dr K Annadani) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮಾಜಿ ಶಾಸಕರು ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದಾರೆ. ಮಂಡ್ಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸೋಮವಾರ ನಡೆದ ದಿಶಾ ಸಭೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಳವಳ್ಳಿ ಮೂಲದ ಪ್ರಸನ್ನ ಎಂಬ ವ್ಯಕ್ತಿ ದೂರು ಸಲ್ಲಿಸಿದ್ದಾರೆ.

ನನ್ನ ಸಂಸಾರ ಹಾಳಾಗಲು ಅನ್ನದಾನಿ ಅವರೇ ಕಾರಣ, ದಯವಿಟ್ಟು ನನಗೆ ನ್ಯಾಯ ಕೊಡಿಸಿ ಎಂದಿರುವ ದೂರುದಾರ, ಮಾಧ್ಯಮಗಳ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ನನ್ನ ಪತ್ನಿಯ ಜತೆ ಮಾಜಿ ಶಾಸಕ ಅನ್ನದಾನಿ ಕಳೆದ ಕೆಲವು ಸಮಯದಿಂದ ಅಕ್ರಮ ಸಂಬಂಧ ಹೊಂದಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮೈಸೂರಿನಲ್ಲಿ 1.5 ಕೋಟಿ ಬೆಲೆಯ ಫ್ಲ್ಯಾಟ್

ನನ್ನ ಪತ್ನಿಗಾಗಿ ಅನ್ನದಾನಿ ಅವರು ಮೈಸೂರಿನಲ್ಲಿ ಸುಮಾರು 1.5 ಕೋಟಿ ರೂಪಾಯಿ ಬೆಲೆ ಬಾಳುವ ಐಷಾರಾಮಿ ಅಪಾರ್ಟ್‌ಮೆಂಟ್ ಕೊಡಿಸಿದ್ದಾರೆ. ಪ್ರತಿದಿನ ರಾತ್ರಿ ಅನ್ನದಾನಿ ಅಲ್ಲಿಗೆ ಭೇಟಿ ನೀಡುತ್ತಾರೆ. ಹಾಗೆಯೇ ಗಂಟೆಗಟ್ಟಲೆ ನನ್ನ ಪತ್ನಿಯೊಂದಿಗೆ ಅವರು ಫೋನ್‌ನಲ್ಲಿ ಮಾತನಾಡಿದ ದಾಖಲೆಗಳು ನನ್ನ ಬಳಿ ಇವೆ ಎಂದು ತಿಳಿಸಿದ್ದಾರೆ.

ಕಸ್ಟಡಿಯಲ್ಲಿ ತಂದೆ-ಮಗ ಸಾವು: 9 ಪೊಲೀಸರಿಗೆ ಮರಣದಂಡನೆ; ಮಧುರೈ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು

ಡಿವೋರ್ಸ್‌ಗಾಗಿ 30 ಲಕ್ಷ ಬೇಡಿಕೆ?

ನನ್ನ ಪತ್ನಿ ಈಗ ವಿಚ್ಛೇದನ ನೀಡಲು ನಿರಾಕರಿಸುತ್ತಿದ್ದಾರೆ. ಒಂದು ವೇಳೆ ಡಿವೋರ್ಸ್ ನೀಡಬೇಕೆಂದರೆ 30 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ನನ್ನ ಹೆಂಡತಿ ಇನ್ನೊಬ್ಬನ ಜೊತೆ ಇರುವುದನ್ನು ನಾನು ಹೇಗೆ ಸಹಿಸಿಕೊಳ್ಳಲಿ? ನನಗೆ ಆಕೆಯಿಂದ ವಿಚ್ಛೇದನ ಕೊಡಿಸಿ, ನಾನು ಯಾರ ತಂಟೆಗೂ ಹೋಗುವುದಿಲ್ಲ ಎಂದು ದೂರುದಾರ ಪ್ರಸನ್ನ ಕಣ್ಣೀರು ಹಾಕಿದ್ದಾರೆ.