ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Drowned: ಎಮ್ಮೆ ತೊಳೆಯಲು ಹೋಗಿ ಬಾವಿಯಲ್ಲಿ ಮುಳುಗಿ ದಂಪತಿ ಸಾವು

Mandya news: ವಸಂತಮ್ಮ(65) ಹಾಗು ಕಾಳೇಗೌಡ (70) ಎಂಬ ದಂಪತಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಎಮ್ಮೆ ತೊಳೆಯಲು ಹೋಗಿದ್ದ ವೇಳೆ ತೆರೆದ ಬಾವಿಗೆ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಎಮ್ಮೆ ತೊಳೆಯಲು ಹೋಗಿ ಬಾವಿಯಲ್ಲಿ ಮುಳುಗಿ ದಂಪತಿ ಸಾವು

-

ಹರೀಶ್‌ ಕೇರ ಹರೀಶ್‌ ಕೇರ Sep 5, 2025 9:33 AM

ಮಂಡ್ಯ : ಮಂಡ್ಯದಲ್ಲಿ (Mandya news) ದಾರುಣ ಘಟನೆ ನಡೆದಿದ್ದು, ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು (drowned) ದಂಪತಿ ಸಾವನ್ನಪ್ಪಿರುವ ಘಟನೆ ಅರೆಬೊಪ್ಪನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್‌ಪೇಟೆ ತಾಲೂಕಿನ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ಎಮ್ಮೆ ತೊಳೆಯಲು ಹೋದಾಗ ವಸಂತಮ್ಮ(65) ಹಾಗು ಕಾಳೇಗೌಡ (70) ಎಂಬ ದಂಪತಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಎಮ್ಮೆ ತೊಳೆಯಲು ಹೋಗಿದ್ದ ವೇಳೆ ತೆರೆದ ಬಾವಿಗೆ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೃದಯಾಘಾತಕ್ಕೆ ಕರ್ತವ್ಯನಿರತ ಕಾನ್‌ಸ್ಟೇಬಲ್‌ ಬಲಿ

ಕಲಬುರಗಿ: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಕರ್ತವ್ಯನಿರತ ಹೆಡ್‌ಕಾನ್‌ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಳಖೇಡ ಠಾಣೆಯ ಹೆಡ್‌ಕಾನ್ಸ್ಟೇಬಲ್ ಮನೋಹರ್ ಪವಾರ್ (46) ಸಾವನ್ನಪ್ಪಿದ್ದಾರೆ. ನಿನ್ನೆ ಕರ್ತವ್ಯದ ಮೇಲೆ ಸೇಡಂ ಪಟ್ಟಣಕ್ಕೆ ಮನೋಹರ ಆಗಮಿಸಿದ್ದರು. ಈ ವೇಳೆ ಹೃದಯಾಘಾತದಿಂದ ಮನೋಹರ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜ್ಯುವೆಲ್ಲರಿ ಶಾಪ್‌ ದರೋಡೆ, ಮೂವರು ಆರೋಪಿಗಳ ಸೆರೆ

ಬೆಂಗಳೂರು : ಜ್ಯುವೆಲ್ಲರಿ ಶಾಪಿಗೆ ನುಗ್ಗಿ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಆರೆಸ್ಟ್ ಮಾಡಿದ್ದಾರೆ. ಜೂನ್ 25ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಾಚೋಹಳ್ಳಿಯಲ್ಲಿ ದರೋಡೆ ಪ್ರಕರಣ ನಡೆದಿತ್ತು. ಮಾದನಾಯಕನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಆರೆಸ್ಟ್ ಮಾಡಿದ್ದಾರೆ. ಮೊಹಮ್ಮದ್ ರಫೀಕ್, ನೌಶಾದ್ ಹಾಗೂ ಮೊಹಮ್ಮದ್ ಇಬ್ತೆಹಾರ್ ಆರೋಪಿಗಳು.

ಇವರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದರೋಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಮಾಚೋಹಳ್ಳಿಯಲ್ಲಿ ಜ್ಯುವೆಲರಿ ಶಾಪ್‌ಗೆ ನುಗ್ಗಿ ಪ್ಲಾಸ್ಟಿಕ್ ಗನ್ ತೋರಿಸಿ ಬೆದರಿಸಿ 90 ಗ್ರಾಮ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇಡೀ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನೇ ಈ ದರೋಡೆ ಪ್ರಕರಣ ಬೆಚ್ಚಿ ಬೀಳಿಸಿತ್ತು. ಆರೋಪಿಗಳಿಂದ 30 ಲಕ್ಷ ಮೌಲ್ಯದ 90 ಗ್ರಾಮ್ ಚಿನ್ನಾಭರಣ, ಎರಡು ಕಾರು ಜಪ್ತಿ ಮಾಡಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Harassment: ಆತನ ಹೆಸರು ವಂದೇ ಮಾತರಂ, ಮಾಡಿದ್ದು ಇಂಥ ಹಲ್ಕಾ ಕೆಲಸ!