ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಂಡ್ಯದಲ್ಲಿ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿ 'ಅಲ್ಲಾಹು ಅಕ್ಬರ್' ಘೋಷಣೆ ಕೂಗಿದ ಮುಸ್ಲಿಂ ಯುವಕ; ವಿಡಿಯೊ ವೈರಲ್‌

Mandya News: ಮಂಡ್ಯ ನಗರದಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿದ್ದ ಯುವಕನೊಬ್ಬ, ಬಸ್ಸಿನ ಮುಂದೆ ನಿಂತು ಜೋರಾಗಿ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಹಾಗೂ ಸುತ್ತಮುತ್ತಲಿದ್ದವರು ಆತಂಕಕ್ಕೊಳಗಾಗಿದ್ದಾರೆ.

ರಸ್ತೆ ಮಧ್ಯೆ 'ಅಲ್ಲಾಹು ಅಕ್ಬರ್' ಘೋಷಣೆ ಕೂಗಿದ ಮುಸ್ಲಿಂ ಯುವಕ!

-

Prabhakara R
Prabhakara R Nov 20, 2026 11:09 PM

ಮಂಡ್ಯ: ಮಂಡ್ಯದ ಮಹಾವೀರ ವೃತ್ತದಲ್ಲಿ ಮುಸ್ಲಿಂ ಯುವಕನೊಬ್ಬ ಕೆಎಸ್‌ಆರ್‌ಟಿಸಿ ಬಸ್ಸನ್ನು ಅಡ್ಡಗಟ್ಟಿ ಧಾರ್ಮಿಕ ಘೋಷಣೆಗಳನ್ನು ಕೂಗಿ ಸ್ಥಳದಿಂದ ಪರಾರಿಯಾದ ಘಟನೆ (Mandya News) ನಡೆದಿದೆ. ಇದರಿಂದಾಗಿ ಅಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಂಚಾರ ದಟ್ಟಣೆ ಸಮಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟ್ರಾಫಿಕ್ನಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ. ಬೈಕ್‌ನಲ್ಲಿದ್ದ ಯುವಕನೊಬ್ಬ, ಬಸ್ಸಿನ ಮುಂದೆ ನಿಂತು ಜೋರಾಗಿ 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಹಾಗೂ ಸುತ್ತಮುತ್ತಲಿದ್ದವರು ಆತಂಕಕ್ಕೊಳಗಾದರು. ಘೋಷಣೆ ಕೂಗಿದ ನಂತರ, ಆ ಯುವಕ ತನ್ನ ಬೈಕ್‌ನಲ್ಲಿ ಅಲ್ಲಿಂದ ವೇಗವಾಗಿ ಪರಾರಿಯಾಗಿದ್ದನು.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಖಚಿತಪಡಿಸಿದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾ ರಾಣಿ ಅವರು, ಪೊಲೀಸರು ಕೂಡಲೇ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಹಾಲಹಳ್ಳಿ ಗ್ರಾಮದ ನಿವಾಸಿ ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ.



ಉಮರ್ ಫಾರೂಕ್ ಮಾನಸಿಕ ಅಸ್ವಸ್ಥರಂತೆ ಕಂಡುಬರುತ್ತಿದ್ದು, ಪ್ರಾಥಮಿಕ ವಿಚಾರಣೆ ವೇಳೆ 'ತನ್ನೊಳಗೆ ದೇವರು ಪ್ರವೇಶಿಸಿದ್ದನು' ಎಂದು ಹೇಳಿಕೊಂಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ. ಅಲ್ಲದೆ, ಆತ ತನ್ನ ಎರಡನೇ ಪತ್ನಿಯೊಂದಿಗೆ ಕೌಟುಂಬಿಕ ಕಲಹ ಹೊಂದಿದ್ದು, ಈ ಸಂಬಂಧ ಪತ್ನಿ ಈ ಹಿಂದೆಯೇ ಆತನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಆತ ಕಳೆದ ಕೆಲವು ದಿನಗಳಿಂದ ಅಸಹಜವಾಗಿ ವರ್ತಿಸುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಉಮರ್ ಫಾರೂಕ್‌ನ ಮಾನಸಿಕ ಸ್ಥಿತಿಯನ್ನು ಪರೀಕ್ಷಿಸಲು ವೈದ್ಯಕೀಯ ತಪಾಸಣೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ವರದಿ ಮತ್ತು ನಡೆಯುತ್ತಿರುವ ತನಿಖೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.