ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಶುಲ್ಕ ನೀಡುವಂತೆ ಶಾಲೆಯಲ್ಲಿ ಕಿರುಕುಳ; ಮನನೊಂದು SSLC ವಿದ್ಯಾರ್ಥಿನಿ ಆತ್ಮಹತ್ಯೆ

ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಶಾಲೆಯ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. , ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದೆ ಎಂದು ಆರೋಪಿಸಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಶುಲ್ಕಕ್ಕಾಗಿ ಶಾಲೆಯಲ್ಲಿ ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ

Profile Vishakha Bhat Jul 6, 2025 8:00 AM

ಮಂಡ್ಯ: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಶಾಲೆಯ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. , ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದೆ ಎಂದು ಆರೋಪಿಸಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲಾ ಶುಲ್ಕ ಕಟ್ಟಲಿಲ್ಲ‌ ಎನ್ನುವ ಕಾರಣಕ್ಕೆ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಎಲ್ಲರೆದುರು ಅವಮಾನ ಮಾಡಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯಗೆ ಶರಣಾಗಿದ್ದಾಳೆ.

ಅನಿಕೇತನ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಎಚ್.ಎಲ್.ಮಿಲನಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಲಕ್ಷ್ಮಿ ಪ್ರಸಾದ್, ಎಚ್.ಎಸ್.ರಶ್ಮಿ ದಂಪತಿ ಪುತ್ರಿ, ಮಿಲನಾ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗೆ ಆಯ್ಕೆ ಆಗಿದ್ದರೂ ಸಹ ಶಾಲೆ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಶೈಲಜಾ ಸೇರಿದಂತೆ ಮೂವರು ಶಿಕ್ಷಕರು ಶಾಲಾ ಶುಲ್ಕ ಪಾವತಿ ಮಾಡುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಪ್ರಾರ್ಥನಾ ಸಮಯದಲ್ಲಿ ಭಾಗವಹಿಸಲು ಅವಕಾಶ ಕೊಡದೆ ಬಹಿಷ್ಕಾರ ಹಾಕಿದ್ದರು ಎನ್ನಲಾಗಿದೆ. ಶನಿವಾರ ಸಹ ಅವಕಾಶ ನೀಡಿರಲಿಲ್ಲ. ಮಿಲನಾ ಮಧ್ಯಾಹ್ನ ಶಾಲೆ ಬಿಟ್ಟು ಬಂದು ಮನೆಯಲ್ಲಿಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರಿದ್ದಾರೆ. ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Self Harming: ಪ್ರೀತಿಸುತ್ತಿದ್ದಾಕೆಯೊಂದಿಗೆ ಮದುವೆಯಾದ ದಿನವೇ ಆತ್ಮಹತ್ಯೆಗೆ ಶರಣಾದ ನವವಿವಾಹಿತ; ಈ ದುರಂತ ಸಾವಿಗೆ ಕಾರಣವಾಗಿದ್ದೇನು?

ಪ್ರತ್ಯೇಕ ಘಟನೆಯಲ್ಲಿ ಯೂನಿಫಾರಂ ಧರಿಸದೆ ಹೋದರೆ ಶಿಕ್ಷಕರು ಬೈತಾರೆ ಎಂದು ಬೆದರಿ ವಿಷ ಸೇವಿಸಿ ಬಾಲಕಿಯೊಬ್ಬಳು (Student) ಆತ್ಮಹತ್ಯೆಗೆ (Self Hraming) ಶರಣಾಗಿದ್ದಾಳೆ. ಚಿಕ್ಕಮಗಳೂರಿನ ತರೀಕೆರೆಯ ಲಿಂಗದಹಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ನಿವೇದಿತಾ (13) ಆತ್ಮಹತ್ಯೆಗೆ ಶರಣಾಗಿರುವ ಬಾಲಕಿ. ಶಾಲಾ ಶಿಕ್ಷಕರು ವಿದ್ಯಾರ್ಥಿನಿಗೆ ಯುನಿಫಾರಂ ಅನ್ನು ನೀಡಿದ್ದರು. ಸೋಮವಾರದಿಂದ ಯೂನಿಫಾರಂ ಧರಿಸಿ ಶಾಲೆಗೆ ಬರುವಂತೆ ಶಿಕ್ಷಕರು ಸೂಚನೆ ನೀಡಿದ್ದರು. ಪೋಷಕರು ಸಮವಸ್ತ್ರ ಹೊಲಿಯಲು ಟೈಲರ್‌ಗೆ ನೀಡಿದ್ದಾರೆ. ಆದರೆ ಯೂನಿಫಾರಂ ರೆಡಿಯಾಗಿರಲಿಲ್ಲ. ಯುನಿಫಾರಂ ಧರಿಸದೆ ಹೋದರೆ ಶಿಕ್ಷಕರು ಹೊಡೆಯುತ್ತಾರೆ ಎಂದು ಮನೆಯಲ್ಲಿಯೇ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.