Kodi Mutt Swamiji: ದೇಶದಲ್ಲಿ ಆಹಾರ, ನೀರಿಗೆ ಹಾಹಾಕಾರ ಉಂಟಾಗುತ್ತೆ, ಅಪಮೃತ್ಯುಗಳ ಸಂಖ್ಯೆ ಹೆಚ್ಚುತ್ತೆ: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ!
Mandya News: ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಬಂಡೆ ಶನೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ಮಹಾ ರಾಜಗೋಪುರ ಉದ್ಘಾಟನಾ ಸಮಾರಂಭದಲ್ಲಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ. -
ಮಂಡ್ಯ: ರಾಜ್ಯ, ರಾಷ್ಟ್ರ ರಾಜಕೀಯ, ಹವಾಮಾನ ವೈಪರೀತ್ಯಗಳ ಸೇರಿ ವಿವಿಧ ವಿಚಾರಗಳ ಕುರಿತು ಭವಿಷ್ಯವಾಣಿ ನುಡಿಯುವ ಮೂಲಕ ಖ್ಯಾತವಾಗಿರುವ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Swamiji) ಅವರು ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಬಂಡೆ ಶನೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ಮಹಾ ರಾಜಗೋಪುರ ಉದ್ಘಾಟನಾ ಸಮಾರಂಭದಲ್ಲಿ ಅರಸೀಕೆರೆಯ ಹಾರನಹಳ್ಳಿ ಶ್ರೀ ಕೋಡಿಮಠ ಮಹಾಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ದೇಶದಾದ್ಯಂತ ಆಹಾರ ಮತ್ತು ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ಪರಿಸರದಲ್ಲಿ ಅನಿರೀಕ್ಷಿತ ಬದಲಾವಣೆಗಳು ಸಂಭವಿಸಲಿದ್ದು, ಇದು ‘ಅಪಮೃತ್ಯು’ಗಳ (ಅಕಾಲಿಕ ಮರಣ) ಸಂಖ್ಯೆಯನ್ನು ಹೆಚ್ಚಿಸಲಿದೆ.
ಇನ್ನು ದೇಶಾದ್ಯಂತ ಸಮಸ್ಯೆಗಳು ಕಂಡುಬಂದರೂ, ಕರ್ನಾಟಕಕ್ಕೆ ಯಾವುದೇ ರೀತಿಯ ದೊಡ್ಡ ಮಟ್ಟದ ಗಂಡಾಂತರಗಳು ಅಥವಾ ಸಮಸ್ಯೆಗಳು ಉಲ್ಬಣವಾಗುವುದಿಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.
Dakshina Kannada: ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ: 8 ಮಂದಿಗೆ ತೀವ್ರ ಗಾಯ
ಶನೇಶ್ವರ ಸ್ವಾಮಿಯು ಪ್ರತಿಯೊಬ್ಬ ಮನುಷ್ಯನಿಗೂ ಗುರು ಸ್ಥಾನದಲ್ಲಿದ್ದು, ಸರಿ-ತಪ್ಪುಗಳನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಸುತ್ತಾನೆ. ಜನರಲ್ಲಿ ಹೆಚ್ಚುತ್ತಿರುವ ದೈವಾರಾಧನೆಯ ಫಲವಾಗಿ ಮಳೆ-ಬೆಳೆ ಉತ್ತಮವಾಗಿ ರಾಜ್ಯದ ಜನರು ಸಮೃದ್ಧ ಜೀವನ ನಡೆಸಲಿದ್ದಾರೆ ಎಂದು ಶ್ರೀಗಳು ಹೇಳಿದ್ದಾರೆ.