ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Mandya News: ಮಂಡ್ಯದಲ್ಲಿ ಘೋರ ಘಟನೆ; ನೀರಿನ ಸಂಪ್‌ಗೆ ಬಿದ್ದು 2 ವರ್ಷದ ಮಗು ಸಾವು

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು ಮೃತಪಟ್ಟಿದೆ. ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ಮೃತಪಟ್ಟಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಮಂಡ್ಯದಲ್ಲಿ ಘೋರ ಘಟನೆ; ನೀರಿನ ಸಂಪ್‌ಗೆ ಬಿದ್ದು 2 ವರ್ಷದ ಮಗು ಸಾವು

ಸಂಪ್‌ಗೆ ಬಿದ್ದು ಮೃತಪಟ್ಟ ಮಗು ವಿನು. -

Prabhakara R
Prabhakara R Jun 13, 2026 5:50 PM

ಮಂಡ್ಯ: ಮನೆ ಮುಂದಿನ ನೀರಿನ ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ವಿನು (2) ಮೃತ ಬಾಲಕ.

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪರಿಚಯಸ್ಥನಿಗೆ ಕೊಟ್ಟ ಸಾಲ ವಾಪಸ್‌ ಬರಲಿಲ್ಲ; ಕಾಲೇಜು ಶುಲ್ಕ ಕಟ್ಟಲಾಗದೆ ವಿದ್ಯಾರ್ಥಿನಿ ಆತ್ಮಹತ್ಯೆ

ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿಯೊಬ್ಬಳು, ಆ ಹಣ ಮರಳಿ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.

ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಾಲೇಜು ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಅವರು ಗಾಯತ್ರಿಗೆ 10 ಸಾವಿರ ರೂಪಾಯಿ ನೀಡಿದ್ದರು. ಇದೇ ವೇಳೆ ಊರಿನ ಪರಿಚಯಸ್ಥ ಸಂತೋಷ ಮಾಧೇದ ನಾಯ್ಕ ಎಂಬಾತ ನಿಗದಿತ ಸಮಯಕ್ಕೆ ಮರಳಿ ನೀಡುವುದಾಗಿ ಹೇಳಿ ಆಕೆಯಿಂದ 10 ಸಾವಿರ ರೂಪಾಯಿ ಸಾಲ ಪಡೆದಿದ್ದ.

ಮಾವಿನ ಹಣ್ಣು ತಿಂದು ಇಬ್ಬರು ಸಹೋದರಿಯರು ಸಾವು; ಕುಟುಂಬಸ್ಥರು ಅಸ್ವಸ್ಥ

ಆದರೆ ನಿಗದಿತ ಸಮಯ ಕಳೆದರೂ ಹಣವನ್ನು ಮರಳಿ ನೀಡಿರಲಿಲ್ಲ. ಇದರಿಂದ ಗಾಯತ್ರಿಗೆ ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ. ಶುಲ್ಕ ಕಟ್ಟದ ಕಾರಣ ಪರೀಕ್ಷೆಯ ಹಾಲ್‌ಟಿಕೆಟ್ ಕೂಡ ದೊರೆತಿರಲಿಲ್ಲ. ಇದರಿಂದ ಮನನೊಂದ ಗಾಯತ್ರಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.