ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವು

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು.

ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 22, 2026 11:05 AM

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು.

ಈ ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಮತ್ತೊಬ್ಬ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರು ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ನೀರಲ್ಲಿ ಮುಳಗಿರುವ ಬಗ್ಗೆ ವಿಕಾಸ್ ಸಮೀಪದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೂಲಕ ಕೆ.ಆರ್ ಸಾಗರ ಪೊಲೀಸ್ ಠಾಣೆ ಮಾಹಿತಿ ನೀಡಿದ್ದಾರೆ. ವೃತ್ತ ನಿರೀಕ್ಷಕ ವಿವೇಕಾನಂದ, ಪಿಎಸ್‌ಐ ರಮೇಶ್ ಕರ್ಕಿಕಟ್ಟೆ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳಿಯ ನುರಿತ ಈಜುಗಾರರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಕಾರ್ಯಾ ಚರಣೆ ನಡೆಸಿ ಮೋಹನ್ ಕುಮಾರ್, ರವಿಚಂದ್ರ ಶವ ಹೊರತೆಗೆಯಲಾಗಿದೆ. ಶವವನ್ನು ಮೈಸೂರು ಕೆ.ಆರ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

Bengaluru News: ಕಾರಿನಲ್ಲಿ ಎಸಿ ಹಾಕಿಕೊಂಡು ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಮಲಗಿದ್ದಲ್ಲೇ ಸಾವು!

ಪ್ರತ್ಯೇಕ ಘಟನೆಯಲ್ಲಿ, ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಜಿರಡ್ಕದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇವರು ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದರು. ಏಳು ಜನ ಸ್ನೇಹಿತರ ತಂಡ ನೇತ್ರಾವತಿ ನದಿಗೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈಜಾಡಲು ತೆರಳಿತ್ತು. ಈ ವೇಳೆ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ