ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Mandya News: ಗೇಟ್ ಮುಚ್ಚಿದ್ದರೂ ಹಳಿ ದಾಟಲು ಯತ್ನ; ಮಂಡ್ಯದಲ್ಲಿ ರೈಲು ಡಿಕ್ಕಿಯಾಗಿ ಯುವತಿ ದುರ್ಮರಣ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಬಳಿ ಅಪಘಾತ ನಡೆದಿದೆ. ರೈಲು ವೇಗವಾಗಿ ಬರುತ್ತಿದ್ದರೂ ಗಮನಿಸದೆ ಹಳಿ ದಾಟಲು ಯತ್ನಿಸಿರುವುದೇ ದುರ್ಘಟನೆಗೆ ಕಾರಣವಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಪಘಾತದ ತೀವ್ರತೆಗೆ ಮೃತದೇಹ ಛಿದ್ರ ಛಿದ್ರವಾಗಿದೆ.

ಮಂಡ್ಯ: ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿಯೊಬ್ಬಳು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಮಂಡ್ಯ ಜಿಲ್ಲೆಯ (Mandya) ಶ್ರೀರಂಗಪಟ್ಟಣ ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಬಳಿ ನಡೆದಿದೆ. ರೈಲ್ವೆ ಗೇಟ್ ಹಾಕಿದ್ದರೂ ನಿರ್ಲಕ್ಷಿಸಿ ಹಳಿ ದಾಟಲು ಯತ್ನಿಸಿದ್ದರಿಂದ ದುರಂತ ನಡೆದಿದೆ. ಚಂದಗಿರಿಕೊಪ್ಪಲು ಗ್ರಾಮದ ನಿವಾಸಿ ಲಿಖಿತಾ (19) ಮೃತ ದುರ್ದೈವಿ.

ರೈಲು ಬರುತ್ತಿದ್ದ ಹಿನ್ನೆಲೆ ಚಂದಗಿರಿಕೊಪ್ಪಲು ಬಳಿಯ ಲೆವೆಲ್ ಕ್ರಾಸಿಂಗ್ ಗೇಟ್ ಮುಚ್ಚಲಾಗಿತ್ತು. ಆದರೂ ಯುವತಿ ಹಳಿ ದಾಟಲು ಮುಂದಾಗಿದ್ದಾಳೆ. ರೈಲು ತೀರಾ ಹತ್ತಿರ ಬಂದಿದ್ದರೂ ಗಮನಿಸದೆ ಹಳಿ ದಾಟಲು ಯತ್ನಿಸಿದ ಪರಿಣಾಮ, ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಯುವತಿಯ ಮೃತದೇಹ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಉಪ ವ್ಯವಸ್ಥಾಪಕ ಟಿ. ರಾಮಕೃಷ್ಣ ಬಂಧನ

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ (ಮನ್‌ಮುಲ್) ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಎರಡೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಹಾಗೂ ಮನ್‌ಮುಲ್ ಉಪ ವ್ಯವಸ್ಥಾಪಕ ಟಿ. ರಾಮಕೃಷ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಟಿ. ರಾಮಕೃಷ್ಣ ಅವರು ಬಂಧನದ ಭೀತಿಯಿಂದ ಕಳೆದ ಎರಡೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದರು. ಇತ್ತೀಚೆಗೆ ಹೈಕೋರ್ಟ್‌ನಲ್ಲಿ ಇವರು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮದ್ದೂರು ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದ ವೇಳೆ ಸಿಪಿಐ ನವೀನ್ ಕುಮಾರ್ ನೇತೃತ್ವದ ಪೊಲೀಸರ ತಂಡ ರಾಮಕೃಷ್ಣ ಅವರನ್ನು ಬಂಧಿಸಿದೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಟಿ. ರಾಮಕೃಷ್ಣ ಅವರು ಮನ್‌ಮುಲ್ ಹಾಲಿನ ಪುಡಿ ಘಟಕ ಹಾಗೂ ಗುಣಮಟ್ಟ ಭರವಸೆ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಉತ್ಪಾದನೆಯಾದ ಹಾಲಿನ ಪುಡಿ ಚೀಲಗಳಲ್ಲಿ ಕಲಬೆರಕೆ ನಡೆದಿರುವುದು ಪತ್ತೆಯಾಗಿತ್ತು. ಒಕ್ಕೂಟದ ಹಾಲಿನ ಪುಡಿ ದಾಸ್ತಾನು ಕೊರತೆ ಹಾಗೂ ಕಲಬೆರಕೆ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನ್‌ಮುಲ್ ಆಡಳಿತ ಮಂಡಳಿಯು ದೂರು ನೀಡಿತ್ತು. ಈ ದೂರಿನ ಮೇರೆಗೆ ಆಗಸ್ಟ್ 30ರಂದು ಮದ್ದೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.