ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Nikhil Kumaraswamy: JDS ಹಳೇ ಮೈಸೂರಿಗೆ ಮಾತ್ರ ಸೀಮಿತವೇ?; ನಿಖಿಲ್ ಹೇಳಿದ್ದೇನು?

Mandya News: ಜೆಡಿಎಸ್‌ ಪಕ್ಷ ಎಂದರೆ ಹಳೇ ಮೈಸೂರು ಪ್ರಾಂತ್ಯಕ್ಕಷ್ಟೇ ಸೀಮಿತವಲ್ಲ. ಪಕ್ಷದ ಸಂಘಟನೆ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಉತ್ತರ ಕನ್ನಡ ಜತೆಗೆ ಬೆಂಗಳೂರು ನಗರ ಸೇರಿ ಇಂದು 70ನೇ ವಿಧಾನಸಭಾ ಕ್ಷೇತ್ರ ಮೇಲುಕೋಟೆ ಕ್ಷೇತ್ರಕ್ಕೆ ಬಂದು ತಲುಪಿದ್ದೇನೆ. ಜೆಡಿಎಸ್‌ ಪಕ್ಷ ಕಟ್ಟಲು ಕಾರ್ಯಕರ್ತರು ಕೈಜೋಡಿಸಬೇಕು ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮಾತನಾಡಿದರು.

ಮಂಡ್ಯ: ಜನತಾದಳ ಪಕ್ಷವು ದೇವೇಗೌಡರ ಹೋರಾಟದ ಹಿನ್ನೆಲೆಯಲ್ಲಿ ಸ್ಥಾಪಿತವಾಗಿರುವ ಪಕ್ಷ. 25 ವರ್ಷಗಳ ಬೆಳ್ಳಿ ಮಹೋತ್ಸವ ಆಚರಿಸುತ್ತಿರುವ ನಮ್ಮ ಜೆಡಿಎಸ್‌, ಕನ್ನಡ ನಾಡಿನ ಅಸ್ಮಿತೆಗಾಗಿ ಹುಟ್ಟಿದ ಪಕ್ಷ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆಗಾಗಿ ನಿರಂತರವಾಗಿ ಹೋರಾಡಿದ ಪಕ್ಷವಾಗಿದೆ. ಕರ್ನಾಟಕ ರಾಜ್ಯದಲ್ಲಿ ಹಳೇ ಮೈಸೂರು ಪ್ರಾಂತ್ಯಕಷ್ಟೇ ಜನತಾದಳ ಪಕ್ಷ (ಜೆಡಿಎಸ್‌) ಸೀಮಿತವಾಗಿಲ್ಲ, ಅದು ತಪ್ಪು ಕಲ್ಪನೆಯಾಗಿದೆ. ರಾಜ್ಯಾದ್ಯಂತ ಪಕ್ಷ ಸಂಘಟನೆಗಾಗಿ ಶ್ರಮಿಸಲಾಗುತ್ತಿದೆ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಗುರುವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.