ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Sridhara: ಮ್ಯಾಕ್ಸ್‌ ಚಿತ್ರದಲ್ಲಿ ನಟಿಸಿದ್ದ ನಟ ಶ್ರೀಧರ ಇನ್ನಿಲ್ಲ

‘ವಧು’ ಸೀರಿಯಲ್‌ನಲ್ಲಿ ನಟಿಸುತ್ತಿದ್ದ ಶ್ರೀಧರ್ ಅವರು ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದರು. ಇನ್‌ಫೆಕ್ಷನ್‌ನಿಂದ ನಟ ತೀವ್ರ ಅಸ್ವಸ್ಥರಾಗಿದ್ದರು. ಹೆಬ್ಬಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಅವರನ್ನು ಸೇರಿಸಲಾಗಿದ್ದು, ಅವರ ತಾಯಿ ನೋಡಿಕೊಳ್ಳುತ್ತಿದ್ದರು. ಕಿರುತೆರೆಯ ಕೆಲವು ಗೆಳೆಯರು ಸಹ ಸಹಾಯ ಮಾಡಿದ್ದರು.

ಮ್ಯಾಕ್ಸ್‌ ಚಿತ್ರದಲ್ಲಿ ನಟಿಸಿದ್ದ ನಟ ಶ್ರೀಧರ ಇನ್ನಿಲ್ಲ

ನಟ ಶ್ರೀಧರ

ಹರೀಶ್‌ ಕೇರ ಹರೀಶ್‌ ಕೇರ May 27, 2025 7:03 AM

ಬೆಂಗಳೂರು: ‘ಮ್ಯಾಕ್ಸ್’ (Max fame) ಚಿತ್ರದಲ್ಲಿ ಅಭಿನಯಿಸಿದ್ದ ನಟ ಶ್ರೀಧರ್ (Actor Shridhara) ಅವರು ಇನ್ನಿಲ್ಲ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬೆಂಗಳೂರಿನ (Bengaluru) ಹೆಬ್ಬಾಳದ ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಒಂದು ತಿಂಗಳ ಹಿಂದೆ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದರು.

‘ವಧು’ ಸೀರಿಯಲ್‌ನಲ್ಲಿ ನಟಿಸುತ್ತಿದ್ದ ಶ್ರೀಧರ್ ಅವರು ಏಕಾಏಕಿ ಅನಾರೋಗ್ಯಕ್ಕೀಡಾಗಿದ್ದರು. ಇನ್‌ಫೆಕ್ಷನ್‌ನಿಂದ ನಟ ತೀವ್ರ ಅಸ್ವಸ್ಥರಾಗಿದ್ದರು. ಹೆಬ್ಬಾಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಅವರನ್ನು ಸೇರಿಸಲಾಗಿದ್ದು, ಅವರ ತಾಯಿ ನೋಡಿಕೊಳ್ಳುತ್ತಿದ್ದರು. ಕಿರುತೆರೆಯ ಕೆಲವು ಗೆಳೆಯರು ಸಹ ಸಹಾಯ ಮಾಡಿದ್ದರು.

ವಧು, ಪಾರು ಸೇರಿದಂತೆ ಹಲವು ಸೀರಿಯಲ್‌ನಲ್ಲಿ ಅವರು ನಟಿಸಿದ್ದಾರೆ. ಜೊತೆಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಮ್ಯಾಕ್ಸ್‌ ಚಿತ್ರದಲ್ಲಿ ಅವರು ಗಮನ ಸೆಳೆದಿದ್ದರು.

‘’ನಮಸ್ತೆ ನಾನು ಶ್ರೀಧರ.. ಇದ್ದಕ್ಕಿದ ಹಾಗೆ ಅನಾರೋಗ್ಯಕ್ಕೆ ತುತ್ತಾಗಿ ಬಹಳಷ್ಟು ಸಂಕಷ್ಟದಲ್ಲಿದ್ದೇನೆ. ಆಸ್ಪತ್ರೆಯ ಖರ್ಚನ್ನು ಭರಿಸಲಾಗದಷ್ಟು ತೊಂದರೆಯಾಗಿದೆ. ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದೇನೆ. ಒಂದು ದಿನಕ್ಕೆ ಆಸ್ಪತ್ರೆಯ ಖರ್ಚು, ಮಾತ್ರೆಯ ಖರ್ಚು ಹತ್ತರಿಂದ ಹದಿನೈದು ಸಾವಿರ ಆಗುತ್ತಿದೆ. ಇದ್ದ ಉಳಿತಾಯದ ಹಣ, ಸಹಾಯದ ಹಣ.. ಎಲ್ಲವೂ ಮುಗಿದುಹೋಗಿದೆ. ದಯಮಾಡಿ ತಾವೆಲ್ಲರೂ ಶ್ರೀಧರನಿಗೆ ಕೈಲಾದ ಹಣದ ಸಹಾಯ ಮಾಡಬೇಕೆಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದೇನೆ. ಶ್ರೀಧರನನ್ನು ಕಾಪಾಡಿ.. ನನ್ನನ್ನು ಬದುಕಿಸಲು ಪ್ರಯತ್ನಿಸಿ.. ಕೈಲಾದಷ್ಟು ಹಣದ ಸಹಾಯ ಮಾಡಿ’’ ಎಂದು ಶ್ರೀಧರ್‌ ಸೋಶಿಯಲ್‌ ಮೀಡಿಯಾದಲ್ಲಿ ಈ ಹಿಂದೆ ಮನವಿ ಮಾಡಿಕೊಂಡಿದ್ದರು.

ಇದನ್ನೂ ಓದಿ: RSS leader: ಆರೆಸ್ಸೆಸ್‌ ಹಿರಿಯ ಪ್ರಚಾರಕ ಸದಾಶಿವ ಇನ್ನಿಲ್ಲ