ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ- ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೇ ನಮ್ಮ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಹಾಗಾಗಿಯೇ ಅವರ ಗೌರವ ಧನ ಹೆಚ್ಚಳ ಮಾಡಲು ಸರ್ಕಾರ ಮತ್ತು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ- ಲಕ್ಷ್ಮೀ ಹೆಬ್ಬಾಳಕರ್

Profile Siddalinga Swamy Mar 14, 2025 5:15 PM

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಸಚಿವರು, ಇತ್ತೀಚಿಗೆ ಮಂಡಿಸಲಾದ 2025-26ನೇ ಸಾಲಿನ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 750 ರೂಪಾಯಿ ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂಪಾಯಿ ಅನುದಾನ ಹೊರೆಯಾಗಿದೆ ಎಂದರು.

ಎರಡೂ ಬಾರಿ ಹೆಚ್ಚಿಸಿದ್ದು ಸಿದ್ದರಾಮಯ್ಯ ಸರ್ಕಾರ

ಅಂಗನವಾಡಿ ಕಾರ್ಯಕರ್ತೆಯವರ ಗೌರವ ಧನವನ್ನು ಹೆಚ್ಚಳ ಮಾಡಿರುವುದು ನಮ್ಮ ಕಾಂಗ್ರೆಸ್‌ ಸರ್ಕಾರವೇ. 2017 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ 2 ಸಾವಿರ ರೂಪಾಯಿ ಗೌರವ ಧನವನ್ನು ಹೆಚ್ಚಿಸಲಾಗಿತ್ತು. ಆದರೆ, ಕಳೆದ ಬಿಜೆಪಿ ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ಒಂದು ರೂಪಾಯಿ ಹೆಚ್ಚಿಸಿರಲಿಲ್ಲ ಎಂದು ಸದನಕ್ಕೆ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ನೀಡಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದ್ದು, ಇದರಲ್ಲಿ ನಮ್ಮ ರಾಜ್ಯದ ಪಾಲು ಹೆಚ್ಚಿದೆ. ಗೌರವ ಧನ ಹೆಚ್ಚಳದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ, ಈವರೆಗೂ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದು ಪರೋಕ್ಷವಾಗಿ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿಯನ್ನೂ ಓದಿ | BOB Recruitment 2025: ಬ್ಯಾಂಕ್‌ ಆಫ್‌ ಬರೋಡಾದ 518 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೇ ನಮ್ಮ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಹಾಗಾಗಿಯೇ ಅವರ ಗೌರವ ಧನ ಹೆಚ್ಚಳ ಮಾಡಲು ಸರ್ಕಾರ ಮತ್ತು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸದನಕ್ಕೆ ತಿಳಿಸಿದರು.