ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mallikarjun Kharge: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೈನರ್‌ ಸರ್ಜರಿ, ಸದ್ಯದಲ್ಲಿಯೇ ಡಿಸ್‌ಚಾರ್ಜ್

AICC president: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಅನಾರೋಗ್ಯದ ಕಾರಣ ದಾಖಲಾಗಿದ್ದರು. ಅವರಿಗೆ ಮೈನರ್ ಸರ್ಜರಿ ಮಾಡಿ ಪರ್ಮನೆಂಟ್ ಫೇಸ್ ಮೇಕರ್ ಅನ್ನು ಜಯದೇವ ಆಸ್ಪತ್ರೆಯ ವೈದ್ಯರು ಅಳವಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೈನರ್‌ ಸರ್ಜರಿ, ಸದ್ಯದಲ್ಲಿಯೇ ಡಿಸ್‌ಚಾರ್ಜ್

-

ಹರೀಶ್‌ ಕೇರ ಹರೀಶ್‌ ಕೇರ Oct 2, 2025 2:48 PM

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ಮೈನರ್ ಸರ್ಜರಿಯೊಂದನ್ನು ವೈದ್ಯರು ಮಾಡಿದ್ದು, ಇದು ಯಶಸ್ವಿಯಾಗಿದೆ. ಹೀಗಾಗಿ ನಾಳೆ ಅಥವಾ ನಾಡಿದ್ದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಅನಾರೋಗ್ಯದ ಕಾರಣ ದಾಖಲಾಗಿದ್ದರು. ಅವರಿಗೆ ಮೈನರ್ ಸರ್ಜರಿ ಮಾಡಿ ಪರ್ಮನೆಂಟ್ ಫೇಸ್ ಮೇಕರ್ ಅನ್ನು ಜಯದೇವ ಆಸ್ಪತ್ರೆಯ ವೈದ್ಯರು ಅಳವಡಿಸಿದ್ದಾರೆ. ಸದ್ಯ ಸರ್ಜರಿಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಖರ್ಗೆ ಅವರ ಕ್ಷೇಮ ವಿಚಾರಿಸಿದ್ದಾರೆ.

ಇದನ್ನೂ ಓದಿ: Mallikarjun kharge: ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ಸುಧಾರಣೆಯಾಗಿದೆ: ಸಿಎಂ ಸಿದ್ದರಾಮಯ್ಯ