ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Student Missing case: ನಾಪತ್ತೆಯಾಗಿದ್ದ ಫರಂಗಿಪೇಟೆ ವಿದ್ಯಾರ್ಥಿ ದಿಗಂತ್‌ ಕೊನೆಗೂ ಪತ್ತೆ

Student Missing case: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದ. ಸುಮಾರು 10 ದಿನಗಳ ಬಳಿಕ ಇದೀಗ ವಿದ್ಯಾರ್ಥಿ ಉಡುಪಿಯಲ್ಲಿ ಶನಿವಾರ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್‌ ಕೊನೆಗೂ ಪತ್ತೆ

Profile Prabhakara R Mar 8, 2025 6:17 PM

ಮಂಗಳೂರು: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಉಡುಪಿಯಲ್ಲಿ ಶನಿವಾರ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ವಿದ್ಯಾರ್ಥಿಯನ್ನು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಯ ಪತ್ತೆಗಾಗಿ 40ಕ್ಕೂ ಅಧಿಕ ಪೊಲೀಸರ ತಂಡವನ್ನು ರಚಿಸಲಾಗಿತ್ತು. ಡಿಎಆರ್ ತಂಡದ ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್. ಡಾಗ್ ಸ್ಕ್ಯಾಡ್ ಸಿಬ್ಬಂದಿ ಡ್ರೋನ್ ಕ್ಯಾಮೆರಾಗಳನ್ನು ಬಳಸಿ ಹುಡುಕಾಟ ನಡೆಸಿದ್ದರು. ಇದೀಗ ಆತ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿ ದಿಗಂತ್ ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದ. ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದ. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿತ್ತು. 10 ದಿನ ಕಳೆದರೂ ವಿದ್ಯಾರ್ಥಿಯ ಸುಳಿವು ಸಿಗದ ಹಿನ್ನೆಲೆಯಲ್ಲಿ ಆತ ಮಂಗಳಮುಖಿಯರ ಜತೆ ಹೋಗಿದ್ದಾನೆ ಎಂಬ ವದಂತಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ದಿಗಂತ್ ಸಹೋದರ ಪವನ್‌, ಮಂಗಳಮುಖಿಯರ ಜತೆ ಹೋಗಿದ್ದಾನೆ ಎಂಬ ಸುದ್ದಿ ಸ್ನೇಹಿತರ ಮೂಲಕ ಗೊತ್ತಾಯಿತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸುದ್ದಿ ಹರಡುತ್ತಿದೆ. ಈ ಬಗ್ಗೆ ವಿಶೇಷ ತನಿಖಾ ತಂಡದ ಎಸ್‌ಐ ಜತೆ ಮಾತನಾಡಿದೆ. ಆದರೆ ನಮಗೆ ಈ ರೀತಿಯ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸರು ಹೇಳಿರುವುದಾಗಿ ತಿಳಿಸಿದ್ದರು.

ಮಂಗಳಮುಖಿಯರ ಜತೆ ಹೋಗಿರುವುದು ಸುಳ್ಳು ‌ಸುದ್ದಿಯಾಗಿರಬಹುದು. ಈವರೆಗೂ ಆತನ ವರ್ತನೆಯಲ್ಲಿ ಈ ರೀತಿಯ ಬದಲಾವಣೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ತನಿಖೆ ಬಗ್ಗೆ ಪೊಲೀಸರು ಸಂಜೆ ಮಾಹಿತಿ ನೀಡಲಿದ್ದಾರೆ ಎಂದು ದಿಗಂತ್‌ ಸಹೋದರ ತಿಳಿಸಿದ್ದರು. ಇದೀಗ ವಿದ್ಯಾರ್ಥಿ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.